ಶನಿವಾರ, ಮಾರ್ಚ್ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹೃದಯಾಘಾತದಿಂದ ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ನಿಧನ..!

Twitter
Facebook
LinkedIn
WhatsApp
ಹೃದಯಾಘಾತದಿಂದ ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ನಿಧನ..!

ಇತ್ತೀಚೆಗೆ ಚಿತ್ರರಂಗಕ್ಕೆ ಒಂದಾದರ ಮೇಲೆ ಒಂದರಂತೆ ಶಾಕ್​ಗಳು ಎದುರಾಗುತ್ತಲೇ ಇವೆ. ಹೃದಯಾಘಾತದಿಂದ ಹಲವರು ಮೃತಪಟ್ಟಿದ್ದಾರೆ. ಕನ್ನಡ ಸೇರಿ ಹಲವು ಭಾಷೆಗಳಲ್ಲಿ ಸಾಹಸ ನಿರ್ದೇಶನ ಮಾಡಿದ್ದ ಜಾಲಿ ಬಾಸ್ಟಿನ್ ಹಠಾತ್ ಹೃದಯಘಾತದಿಂದ ಮಂಗಳವಾರ (ಡಿಸೆಂಬರ್ 26) ನಿಧನ ಹೊಂದಿದ್ದಾರೆ. ಅವರಿಗೆ 57 ವರ್ಷ ವಯಸ್ಸಾಗಿತ್ತು. ಅವರ ನಿಧನ ವಾರ್ತೆ ಅನೇಕರಿಗೆ ದುಃಖ ತಂದಿದೆ. ‘ಪ್ರೇಮಲೋಕ’ (Premaloka Movie), ‘ಮಾಸ್ಟರ್​ ಪೀಸ್’ ಸೇರಿ ನೂರಾರು ಸಿನಿಮಾಗಳಿಗೆ ಅವರು ಸ್ಟಂಟ್​ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದರು.

ಜಾಲಿ ಅವರು ಹುಟ್ಟಿದ್ದು 1966ರಲ್ಲಿ. ಕೇರಳದ ಅಲೆಪ್ಪೆಯಲ್ಲಿ ಅವರು ಜನನ ಆಯಿತು. ಆದರೆ, ಅವರು ಬೆಳೆದಿದ್ದು ಬೆಂಗಳೂರಿನಲ್ಲಿ. ಅವರು ಬೆಂಗಳೂರಿನಲ್ಲೇ ಶಿಕ್ಷಣ ಪಡೆದರು. ಬೈಕ್ ಮೆಕಾನಿಕ್ ಆಗಿ ಜಾಲಿ ಬಾಸ್ಟಿನ್ ವೃತ್ತಿ ಆರಂಭಿಸಿದರು. ಅವರನ್ನು ಗುರುತಿಸಿದ ಕೆಲವರು ಸ್ಟಂಟ್​ಮನ್ ಆಗಿ ಚಿತ್ರರಂಗಕ್ಕೆ ಪರಿಚಯಿಸಿದರು. ‘ಪ್ರೇಮಲೋಕ’ ಚಿತ್ರದಲ್ಲಿ ರವಿಚಂದ್ರನ್ ಅವರಿಗೆ ಡ್ಯೂಪ್ ಹಾಕಿದರು. ಆಗ ಅವರಿಗೆ 17 ವರ್ಷ ವಯಸ್ಸು.

ಸಾಹಸ ಕಲಾವಿದನಾಗಿ, ಸಾಹಸ ನಿರ್ದೇಶಕನಾಗಿ ಕೆಲಸ ಮಾಡಿದ ಜಾಲಿ ಅವರು ಈವರೆಗೆ 900ಕ್ಕೂ ಅಧಿಕ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ‘ನಿನಗಾಗಿ ಕಾದಿರುವೆ’ ಚಿತ್ರದ ಮೂಲಕ ನಿರ್ದೇಶಕನ ಕ್ಯಾಪ್ ತೊಟ್ಟರು. ಒಂದು ಕಾಲಕ್ಕೆ ಅತಿಹೆಚ್ಚು ಸಂಭಾವನೆ ಪಡೆಯೋ ಸಾಹಸ ನಿರ್ದೇಶಕ ಎಂಬ ಹೆಗ್ಗಳಿಕೆ ಅವರಿಗೆ ಇತ್ತು. ಕನ್ನಡ, ತಮಿಳು, ಮಲಯಾಳಂ ಚಿತ್ರಗಳಲ್ಲಿ ಸಾಹಸ ನಿರ್ದೇಶಕನಾಗಿ ಜಾಲಿ ಬಾಸ್ಟಿನ್ ಹೆಸರು ಮಾಡಿದ್ದರು.

‘ಪ್ರೇಮಲೋಕ’, ‘ಪುಟ್ನಂಜ’, ‘ಅಣ್ಣಯ್ಯ’, ‘ಶಾಂತಿ ಕ್ರಾಂತಿ’ ಸೇರಿದಂತೆ ರವಿಚಂದ್ರನ್ ನಟನೆಯ ಹಲವಾರು ಸಿನಿಮಾಗಳಲ್ಲಿ ಜಾಲಿ ಕೆಲಸ ಮಾಡಿದ್ದಾರೆ. ರಿಸ್ಕಿ ಸ್ಟಂಟ್ ಮಾಡೋ ವೇಳೆ ಸಾಕಷ್ಟು ಬಾರಿ ಜಾಲಿ ಬಾಸ್ಟಿನ್ ಪೆಟ್ಟು ಮಾಡಿಕೊಂಡಿದ್ದರು. ‘ಭಲೇ ಚತುರ’ ಸಿನಿಮಾದ ಬಾಂಬ್ ಬ್ಲಾಸ್ಟ್ ದೃಶ್ಯದ ವೇಳೆ ಜಾಲಿ ದೇಹಕ್ಕೆ ಸಾಕಷ್ಟು ಹಾನಿ ಆಗಿತ್ತು. ‘ಪುಟ್ನಂಜ’ ಸಿನಿಮಾ ಶೂಟ್ ವೇಳೆ ಬೈಕ್​ನಿಂದ ಬಿದ್ದು ಅವರ ಮುಖ ಹಾಗೂ ಕಾಲಿಗೆ ಪೆಟ್ಟಾಗಿತ್ತು.

ನಿರೂಪ್ ಭಂಡಾರಿ ಜೊತೆ ಬೃಂದಾ ಆಚಾರ್ಯ ಹೊಸ ಸಿನಿಮಾ; ಶಿವಾನಿಗೆ ಸಖತ್​ ಚಾನ್ಸ್​

2023ರಲ್ಲಿ ಸದ್ದು ಮಾಡಿದ ಕನ್ನಡ ಸಿನಿಮಾಗಳಲ್ಲಿ ‘ಕೌಸಲ್ಯ ಸುಪ್ರಜಾ ರಾಮ’ ಕೂಡ ಪ್ರಮುಖವಾದದ್ದು. ಆ ಸಿನಿಮಾದಲ್ಲಿ ನಟಿ ಬೃಂದಾ ಆಚಾರ್ಯ (Brinda Acharya) ಅವರು ಶಿವಾನಿ ಎಂಬ ಪಾತ್ರ ಮಾಡಿ ಎಲ್ಲರ ಮನಸ್ಸು ಗೆದ್ದರು. ಅವರಿಗೆ ಹೊಸ ಹೊಸ ಅವಕಾಶಗಳು ಒಲಿದು ಬರುತ್ತಿವೆ. ಅವರೊಂದು ಹೊಸ ಸಿನಿಮಾಗೆ ಸಹಿ ಮಾಡಿದ್ದಾರೆ. ಬೃಂದಾ ಆಚಾರ್ಯ ನಟಿಸಲಿರುವ ಆ ಹೊಸ ಚಿತ್ರಕ್ಕೆ ನಿರೂಪ್​ ಭಂಡಾರಿ (Nirup Bhandari) ಹೀರೋ ಎಂಬುದು ವಿಶೇಷ. ಕನ್ನಡ ಚಿತ್ರರಂಗದಲ್ಲಿ ಉದಯೋನ್ಮುಖ ನಟಿಯಾಗಿ ಬೃಂದಾ ಆಚಾರ್ಯ ಗುರುತಿಸಿಕೊಂಡಿದ್ದಾರೆ.

ನಿರೂಪ್ ಭಂಡಾರಿ ಜೊತೆ ಬೃಂದಾ ಆಚಾರ್ಯ ಹೊಸ ಸಿನಿಮಾ; ಶಿವಾನಿಗೆ ಸಖತ್​ ಚಾನ್ಸ್​

ಬೃಂದಾ ಆಚಾರ್ಯ ಮತ್ತು ನಿರೂಪ್ ಭಂಡಾರಿ ಜೋಡಿಯಾಗಿ ಅಭಿನಯಿಸಲಿರುವ ಹೊಸ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ಹೊರಬಿದ್ದಿಲ್ಲ. ಚಿತ್ರರಂಗದಲ್ಲಿ ಅನೇಕ ವರ್ಷಗಳಿಂದ ಸಕ್ರಿಯವಾಗಿರುವ ಸಚಿನ್​ ಅವರು ಇದೇ ಮೊದಲ ಬಾರಿಗೆ ಈ ಸಿನಿಮಾ ಮೂಲಕ ನಿರ್ದೇಶಕರಾಗುತ್ತಿದ್ದಾರೆ. ಈ ಸಿನಿಮಾದಲ್ಲಿ ಬೃಂದಾ ಆಚಾರ್ಯ ಅವರ ಪಾತ್ರ ಸಖತ್​ ಭಿನ್ನವಾಗಿ ಇರಲಿದೆ. ಕಿರುತೆರೆ ಧಾರಾವಾಹಿಗಳ ಮೂಲಕ ಗಮನ ಸೆಳೆದಿರುವ ಅಂಕಿತಾ ಅಮರ್​​ ಕೂಡ ಈ ಸಿನಿಮಾದಲ್ಲಿ ನಟಿಸಲಿದ್ದಾರೆ. ಅವರಿಗೆ ರಿಪೋರ್ಟರ್​ ಪಾತ್ರ ನೀಡಲಾಗಿದೆ.

ತಮ್ಮ ಪಾಲಿಗೆ ಬರುತ್ತಿರುವ ಒಳ್ಳೆಯ ಅವಕಾಶಗಳನ್ನು ಬೃಂದಾ ಆಚಾರ್ಯ ಅವರು ಬಾಚಿಕೊಳ್ಳುತ್ತಿದ್ದಾರೆ. ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರದ ಯಶಸ್ಸಿನ ನಂತರ ಅವರು ಮೂರು ಸಿನಿಮಾಗಳಿಗೆ ಸಹಿ ಮಾಡಿದ್ದಾರೆ. ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ’, ‘ಎಕ್ಸ್ ಆಂಡ್ ವೈ’, ‘ಒಂದ್ಸಲ ಮೀಟ್ ಮಾಡೋಣ’ ಸಿನಿಮಾಗಳಿಗೆ ಬೃಂದಾ ಆಚಾರ್ಯ ಅವರು ನಾಯಕಿ ಆಗಿದ್ದಾರೆ. ಇಷ್ಟೇ ಅಲ್ಲದೇ ಇನ್ನೂ ಅನೇಕ ಅವಕಾಶಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

ಪ್ರತಿ ಸಿನಿಮಾದಲ್ಲೂ ಡಿಫರೆಂಟ್​ ಪಾತ್ರ ಮಾಡಬೇಕು ಎಂಬುದು ಬೃಂದಾ ಆಚಾರ್ಯ ಅವರ ಉದ್ದೇಶ. ಅದಕ್ಕಾಗಿ ಹೊಸತನ ಇರುವಂತಹ ಪಾತ್ರಗಳನ್ನು ಅವರು ಒಪ್ಪಿಕೊಳ್ಳುತ್ತಿದ್ದಾರೆ. ಮತ್ತೊಂದು ಸಿನಿಮಾಗೆ ಅವರು ಸಹಿ ಮಾಡಿದ್ದು, ಅದರಲ್ಲಿ ಸೋಶಿಯಲ್​ ಮೀಡಿಯಾ ಇನ್​ಫ್ಲೂಯನ್ಸರ್​ ಆಗಿ ಅವರು ಕಾಣಿಸಿಕೊಳ್ಳಲಿದ್ದಾರೆ. ಆ ಪಾತ್ರಕ್ಕಾಗಿ ಅವರು ಒಂದಷ್ಟು ತಯಾರಿ ಮಾಡಿಕೊಳ್ಳುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist