ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪ್ರಖ್ಯಾತ ಕೃಷಿ ತಜ್ಞ, ದೇಶದ ಹಸಿರು ಕ್ರಾಂತಿಯ ಪಿತಾಮಹ ಎಂಎಸ್ ಸ್ವಾಮಿನಾಥನ್ ಇನ್ನಿಲ್ಲ!

Twitter
Facebook
LinkedIn
WhatsApp
ಪ್ರಖ್ಯಾತ ಕೃಷಿ ತಜ್ಞ, ದೇಶದ ಹಸಿರು ಕ್ರಾಂತಿಯ ಪಿತಾಮಹ ಎಂಎಸ್ ಸ್ವಾಮಿನಾಥನ್ ಇನ್ನಿಲ್ಲ!

ಸುಮಾರು 98 ವರ್ಷಷ ಪ್ರಾಯದ ಕೃಷಿತಜ್ಞ ಎಂ.ಎಸ್‌. ಸ್ವಾಮಿನಾಥನ್ ಅವರು, ತಮಿಳುನಾಡಿನ ಚೆನ್ನೈನಲ್ಲಿರುವ ತಮ್ಮ ಸ್ವಗೃಹದಲ್ಲಿ ಇಂದು ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ಇಂದು ಬೆಳಗ್ಗೆ  11.15ರ ಸುಮಾರಿಗೆ ಕೃಷಿತಜ್ಞ ಎಂ.ಎಸ್‌. ಸ್ವಾಮಿನಾಥನ್ ಅವರು ನಿಧನ ಹೊಂದಿದರು ಎಂದು ತಮಿಳುನಾಡಿನ ಚೆನ್ನೈನಲ್ಲಿರುವ ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಎಂ.ಎಸ್ ಸ್ವಾಮಿನಾಥನ್ ಅವರು 1925 ಆಗಸ್ಟ್ 7 ರಂದು ತಮಿಳುನಾಡಿನ ಕುಂಬಕೋಣಂನಲ್ಲಿ ಜನಿಸಿದರು. ಅವರ ಪತ್ನಿ ಮೀನಾ ಸ್ವಾಮಿನಾಥನ್‌ ಅವರು ಕಳೆದ ವರ್ಷವಷ್ಟೇ ನಿಧನ ಹೊಂದಿದ್ದರು. ಫಿಲಿಪೈನ್ಸ್‌ನ ಇಂಟರ್‌ನ್ಯಾಶನಲ್ ರೈಸ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ನ (ಐಆರ್‌ಆರ್‌ಐ) ಡೈರೆಕ್ಟರ್ ಜನರಲ್ ಆಗಿ ಕೆಲಸ ಮಾಡಿದ್ದ ಸ್ವಾಮಿನಾಥನ್‌ ಅವರಿಗೆ  1987 ರಲ್ಲಿ ಕೃಷಿ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಮೊದಲ ಜಾಗತಿಕ ಆಹಾರ ಪ್ರಶಸ್ತಿಯ ಅತ್ಯುತ್ತಮ ಗೌರವವನ್ನು ನೀಡಲಾಗಿತ್ತು.

ನಾರ್ಮನ್ ಬೋರ್ಲಾಗ್ ಮತ್ತು ಇತರ ವಿಜ್ಞಾನಿಗಳೊಂದಿಗೆ ಸೇರಿಕೊಂಡ ಸ್ವಾಮಿನಾಥನ್ ಅವರು 1960 ರ ದಶಕದಲ್ಲಿ ಬರಗಾಲದಂತಹ ಸಂದರ್ಭಗಳಲ್ಲಿ ರೈತರ ಜೀವನ ಸುಧಾರಿಸಲು ಸರ್ಕಾರದ ನೀತಿಗಳೊಂದಿಗೆ ಸಾಮಾಜಿಕ ಕ್ರಾಂತಿಯನ್ನು ತರಲು ಕೆಲಸ ಮಾಡಿದ್ದರು. ಆ ಮೂಲಕ ರೈತಾಪಿ ಜನರ ಬದುಕನ್ನು ಸುಧಾರಿಸಲು ಪ್ರಯತ್ನಿಸಿದ್ದರು. ಈ ಕಾರಣಕ್ಕಾಗಿಯೇ ಎಂಎಸ್ ಸ್ವಾಮಿನಾಥನ್ ಅವರನ್ನು ಹಸಿರು ಕ್ರಾಂತಿಯ ಪಿತಾಮಹ ಎಂದು ಕರೆಯಲಾಗುತ್ತದೆ.

ಕೃಷಿ ತಜ್ಞ ಎಂ.ಎಸ್ ಸ್ವಾಮಿನಾಥನ್ ನಿಧನಕ್ಕೆ ಅನೇಕ ಗಣ್ಯರು ಶೋಕ ವ್ಯಕ್ತಪಡಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು, ಸ್ವಾಮಿನಾಥನ್ ನಿಧನದಿಂದ ತೀವ್ರ ಬೇಸರವಾಗಿದೆ. ನಮ್ಮ ರಾಷ್ಟ್ರದ ಇತಿಹಾಸದಲ್ಲಿ ಅತ್ಯಂತ ನಿರ್ಣಾಯಕ ಅವಧಿಯಲ್ಲಿ, ಕೃಷಿಯಲ್ಲಿ ಅವರ ಅದ್ಭುತ ಕೆಲಸವು ಲಕ್ಷಾಂತರ ಜನರ ಜೀವನವನ್ನು ಪರಿವರ್ತಿಸಿತು ಎಂದು ಹೇಳಿದ್ದಾರೆ.

ಸ್ವಾಮಿನಾಥನ್ ಅವರನ್ನು ಭಾರತದ ಕೃಷಿಯ ಪಿತಾಮಹ ಎಂದು ಕೂಡ ಕರೆಯಲಾಗುತ್ತದೆ. ಇವರು ಹೆಚ್ಚು ಇಳುವರಿ ನೀಡುವ ಭತ್ತದ ತಳಿ ಅಭಿವೃದ್ಧಿ ಪಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದು ಭಾರತದ ಕಡಿಮೆ ಆದಾಯದ, ಕಡಿಮೆ ಭೂಮಿ ಹೊಂದಿರುವ ರೈತರು ಹೆಚ್ಚಿನ ಇಳುವರಿಯನ್ನು ಉತ್ಪಾದಿಸಲು ಸಹಾಯ ಮಾಡಿತ್ತು

12 ವರ್ಷದ ಬಾಲಕಿಗೆ ಹೃದಯಾಘಾತ! ಕ್ಲಾಸ್ ರೂಂನಲ್ಲೇ ಪ್ರಾಣಬಿಟ್ಟ ವಿದ್ಯಾರ್ಥಿನಿ!

ಗುಜರಾತ್: ಇತ್ತೀಚಿನ ದಿನಗಳಲ್ಲಿ ವಯಸ್ಸನ್ನು ಲೆಕ್ಕಿಸದೆ ಹೃದಯಾಘಾತ (Heart Attck) ಸಂಭವಿಸುತ್ತದೆ. ಸಣ್ಣ ಮಕ್ಕಳು ಮತ್ತು ವಯಸ್ಕರು ಕೂಡ ಹೃದಯಾಘಾತದಿಂದ ಬಳಲುತ್ತಿದ್ದಾರೆ. ಇತ್ತೀಚೆಗೆ ಗುಜರಾತ್‌ನ ಸೂರತ್‌ನಲ್ಲಿ ಗುರುವಾರ 12 ವರ್ಷದ ಶಾಲಾ ವಿದ್ಯಾರ್ಥಿಯೊಬ್ಬಳು (12 Year Old Student) ತರಗತಿಯಲ್ಲಿ ಕುಸಿದು ಬಿದ್ದಿದ್ದಾಳೆ. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ (Hospital) ಕರೆದೊಯ್ಯುವಷ್ಟರಲ್ಲಿ ಆಕೆ (Social Media) ಸಾವನ್ನಪ್ಪಿದ್ದಾಳೆ. ಹೃದಯಾಘಾತದಿಂದ ವಿದ್ಯಾರ್ಥಿ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ಖಚಿತಪಡಿಸಿದ್ದಾರೆ. ಈ ಬಾಲಕಿಯ ಹೃದಯಾಘಾತದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗುಜರಾತ್​ನಲ್ಲಿ ಕಳೆದ ಒಂದು ತಿಂಗಳಿಂದ ಇಂತಹ ಹಲವು ಪ್ರಕರಣಗಳು ಬೆಳಕಿಗೆ ಬಂದಿವೆ.

ಮೃತ ಬಾಲಕಿ ರಿದ್ಧಿ ಮೇವಾಡ ಗೊಡದಾರ ಪ್ರದೇಶದ ಗೀತಾಂಜಲಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದಳು. ರಿದ್ಧಿ ಮೊದಲ ಬೆಂಚಿನಲ್ಲಿ ಕುಳಿತು ಪಾಠ ಕೇಳುತ್ತಿದ್ದಳು. ಬಾಲಕಿ ಇದ್ದಕ್ಕಿದ್ದಂತೆ ಕುಸಿದು ಬೆಂಚ್​ನಿಂದ ಬಿದ್ದಿದ್ದಾಳೆ. ಕೂಡಲೇ ಶಿಕ್ಷಕರು ಪ್ರಾಂಶುಪಾಲರಿಗೆ ಮಾಹಿತಿ ನೀಡಿದ್ದಾರೆ. ಆಕೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಆಕೆ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಖಚಿತಪಡಿಸಿದ್ದಾರೆ.

ಸಿಸಿಟಿವಿ ವಿಡಿಯೋದಲ್ಲಿ ಸೆರೆಯಾಗಿರುವ ದೃಶ್ಯದಂತೆ, ಶಿಕ್ಷಕಿಯೊಬ್ಬರು ತರಗತಿ ತೆಗೆದುಕೊಂಡಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ಕುಳಿತು ಪಾಠ ಕೇಳುತ್ತಿದ್ದಾರೆ. ಮೊದಲ ಬೆಂಚ್​ನಲ್ಲಿ ಕುಳಿತಿದ್ದ ಬಾಲಕಿ ಇದ್ದಕ್ಕಿದ್ದಂತೆ ಕುಸಿದುಬಿದ್ದಾಳೆ. ಇದರಿಂದ ಒಂದು ಕ್ಷಣ ತರಗತಿಯಲ್ಲಿ ಇದ್ದ ವಿದ್ಯಾರ್ಥಿಗಳೆಲ್ಲಾ ಆಘಾತಕ್ಕೊಳಗಾಗಿದ್ದಾರೆ. ಇದೆಲ್ಲಾ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist