ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕನ್ನಡದ ಖ್ಯಾತ ನಟ ಮತ್ತು ಮಾಜಿ ಐಎಎಸ್‌ ಅಧಿಕಾರಿ ಕೆ. ಶಿವರಾಮ್‌ ನಿಧನ..!

Twitter
Facebook
LinkedIn
WhatsApp
ಕನ್ನಡದ ಖ್ಯಾತ ನಟ ಮತ್ತು ಮಾಜಿ ಐಎಎಸ್‌ ಅಧಿಕಾರಿ ಕೆ. ಶಿವರಾಮ್‌ ನಿಧನ..!

ʻಬಾನಲ್ಲೆ ಮಧುಚಂದ್ರಕೆʼ ಸಿನಿಮಾ ನಟ ಕೆ.ಶಿವರಾಮ್ (K Shivaram) ಅವರು HCG ಆಸ್ಪತ್ರೆಯಲ್ಲಿ ಹೃದಾಯಘಾತದಿಂದ ಫೆ.29ರಂದು ನಿಧನರಾಗಿದ್ದಾರೆ. ಕಳೆದ ಎರಡು ದಿನದ ಹಿಂದೆ ತೀವ್ರ ‌ಹೃದಾಯಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ನಟನಿಗೆ 71 ವರ್ಷ ವಯಸ್ಸಾಗಿತ್ತು.

“ಬಾ ನಲ್ಲೆ ಮಧುಚಂದ್ರಕೆ” ಸಿನಿಮಾ ಮೂಲಕ ನಾಯಕ ‌ನಟನಾಗಿದ್ದ ಕೆ.ಶಿವರಾಮ್ ಅವರು ರಾಜ್ಯದ ಹಲವು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಇದೀಗ ಮೋದಿ ರಸ್ತೆಯ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಬಾನಲ್ಲೆ ಮಧುಚಂದ್ರಕೆʼ , ʻವಸಂತಕಾವ್ಯʼ ಚಿತ್ರದಲ್ಲಿ ನಟಿಸಿದ್ದರು. ರಾಜಕೀಯ ರಂಗದಲ್ಲೂ ನಟ ಗುರುತಿಸಿಕೊಂಡಿದ್ದರು. ಪ್ರತಿಭಟನೆ, ಯಾರಿಗೆ ಬೇಡ ದುಡ್ಡು, ಪ್ರೀತಿಗಾಗಿ ಆಟ, ನಾಗ, ಮೂಡಲ ಸೀಮೆಯಲಿ, ಸುಭಾಷ್, ಟೈಗರ್ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟರಾಗಿದ್ದರು. ತಮ್ಮ ಸಿನಿ ಜೀವನದಲ್ಲಿ 2017ರವರೆಗೆ 10 ಸಿನೆಮಾದಲ್ಲಿ ನಟಿಸಿದ್ದಾರೆ.

ಬಾ ನಲ್ಲೆ ಮಧುಚಂದ್ರಕೆʼ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಭರವಸೆ ಮೂಡಿಸಿದ್ದ ಕೆ ಶಿವರಾಮ್ ವೃತ್ತಿಯಲ್ಲಿ ಐಎಎಸ್ ಅಧಿಕಾರಿಯಾಗಿದ್ದರು. ನಂತರ ʻವಸಂತ ಕಾವ್ಯʼ , ʻಸಾಂಗ್ಲಿಯಾನ 3ʼ ಖಳ ನಾಯಕ ಮುಂತಾದ ಚಿತ್ರಗಳಲ್ಲಿ ನಟಿಸಿದರು. ಕನ್ನಡದಲ್ಲಿಯೇ ಐಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾದ ಮೊದಲ ಕನ್ನಡಿಗರು ಶಿವರಾಮ್. ಸುದೀರ್ಘ ಐಎಎಸ್ ವೃತ್ತಿಜೀವನದಲ್ಲಿ ಬಿಜಾಪುರ, ಬೆಂಗಳೂರು, ಮೈಸೂರು, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

2013 ರಲ್ಲಿ ನಿವೃತ್ತಿಯ ನಂತರ ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯ ಜೀವನ ಆರಂಭಿಸಿದರು. 2014 ರಲ್ಲಿ ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿ ಸೋತರು. ನಂತರ ಅದೇ ವರ್ಷ ದಲಿತರಿಗೆ ಸಿ.ಎಂ ಪಟ್ಟ ಸಿಗಬೇಕೆಂದು ಪರಮೇಶ್ವರ್ ಬೆಂಬಲಿಸಿ ಕಾಂಗ್ರೆಸ್ ಸೇರಿದರು. ಆದರೆ ಕಾಂಗ್ರೆಸ್ ನಲ್ಲಿ ಸೂಕ್ತ ಸ್ಥಾನಮಾನ ಸಿಗದೇ ಬಿಜೆಪಿ ಸೇರಿದರು. ದಲಿತ ಪರ ಹೋರಾಟಕ್ಕೆ ಹೆಸರುವಾಸಿಯಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ