ಖ್ಯಾತ ಗಾಯಕಿ ಕಾರು ಅಪಘಾತ; ಪ್ರಾಣಾಪಾಯದಿಂದ ಪಾರು!
‘ಹೂ ಅಂತೀಯಾ ಮಾವ…’ ಹಾಡನ್ನು ಹಾಡಿ ಕನ್ನಡದ ಜನತೆಗೂ ಪರಿಚಯಗೊಂಡಿರುವ ಗಾಯಕಿ ಮಂಗ್ಲಿ (Mangli) ಅವರು ಕಾರು ಅಪಘಾತಕ್ಕೆ ಒಳಗಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಅವರು ತೆಲುಗು ರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಬ್ಯಾಕ್ ಟು ಬ್ಯಾಕ್ ಕಾರ್ಯಕ್ರಮಗಳನ್ನು ನೀಡುತ್ತಿದ್ದಾರೆ. ಈಗ ಕಾರ್ಯಕ್ರಮ ಮುಗಿಸಿ ಬರುವಾಗ ಈ ಘಟನೆ ನಡೆದಿದೆ. ಮಂಗ್ಲಿ ಅವರಿಗೆ ಯಾವುದೇ ತೊಂದರೆ ಆಗಿಲ್ಲ ಎಂದು ತಿಳಿದು ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ.
ರಂಗಾ ರೆಡ್ಡಿ ಜಿಲ್ಲೆಯ ನಂದಿಗ್ರಾಮ ಕನ್ಹಾ ಆಧ್ಯಾತ್ಮಿಕ ಉತ್ಸವದಲ್ಲಿ ಮಂಗ್ಲಿ ಭಾಗವಹಿಸಿದ್ದರು. ಆ ಬಳಿಕ ಅವರು ಬೆಂಗಳೂರು-ಹೈದರಾಬಾದ್ ಹೈವೇ ಮೂಲಕ ಹೈದರಾಬಾದ್ಗೆ ಬರುತ್ತಿದ್ದರು. ಶಂಶಾಬಾದ್ ತೊಂಡುಪಲ್ಲಿ ಬಳಿ ಕಾರು ಅಪಘಾತಕ್ಕೆ ಒಳಗಾಗಿದೆ. ಭಾನುವಾರ (ಮಾರ್ಚ್ 17) ತಡರಾತ್ರಿ ಈ ಘಟನೆ ನಡೆದಿದೆ. ಮಂಗ್ಲಿ ಕಾರಿಗೆ ಸಣ್ಣ ಟ್ರಕ್ ಗುದ್ದಿದೆ ಎಂದು ತಿಳಿದು ಬಂದಿದೆ
ಕಾರಿನಲ್ಲಿ ಇದ್ದ ಎಲ್ಲರಿಗೂ ಸಣ್ಣಪುಟ್ಟ ಗಾಯಗಳು ಆಗಿವೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ದಿವ್ಯಾ ಪ್ರಿಯಾ ಎಂಬುವವರು ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ‘ಹೈದರಾಬಾದ್-ಬೆಂಗಳೂರು ಹೆದ್ದಾರಿಯ ತೊಂಡುಪಲ್ಲಿ ಸೇತುವೆ ಬಳಿಕ ಗಾಯಕ ಮಂಗ್ಲಿ ಕಾರಿಗೆ ಸಣ್ಣ ಟ್ರಕ್ ಡಿಕ್ಕಿ ಹೊಡೆದಿದೆ. ಮಂಗ್ಲಿ ಹಾಗೂ ಇತರ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ’ ಎಂದು ಬರೆಯಲಾಗಿದೆ.
ಮಂಗ್ಲಿ ಅವರು 2018ರಲ್ಲಿ ಸಿನಿಮಾ ರಂಗಕ್ಕೆ ಗಾಯಕಿ ಆಗಿ ಕಾಲಿಟ್ಟರು. ಆರಂಭದಲ್ಲಿ ಅವರು ತೆಲುಗು ಚಿತ್ರರಂಗದಲ್ಲಿ ಮಿಂಚಿದರು. ‘ಪುಷ್ಪ’ ಚಿತ್ರದ ಕನ್ನಡ ವರ್ಷನ್ನಲ್ಲಿ ಬರುವ ‘ಹೂ ಅಂತೀಯಾ ಮಾವ..’ ಹಾಡನ್ನು ಹಾಡಿ ಗಮನ ಸೆಳೆದರು. ನಂತರ ಕನ್ನಡದಲ್ಲಿ ಹಲವು ಹಾಡುಗಳನ್ನು ಹಾಡಿದರು.
#News హైదరాబాద్-బెంగళూరు రహదారిపై
— devipriya (@sairaaj44) March 18, 2024
తొండుపల్లి వంతెన వద్ద గాయని మంగ్లీ కారును ఢీకొట్టిన డీసీఎం
మంగ్లీతో పాటు మరో ఇద్దరికి స్వల్ప గాయాలు