ಭಾನುವಾರ, ಸೆಪ್ಟೆಂಬರ್ 15, 2024
20 ವರ್ಷಗಳ ಬಳಿಕ ಹುಕ್ಕೇರಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ-ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

5 ವಿಕೆಟ್ ಕಬಳಿಸಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎಂಬ ದಾಖಲೆ ಬರೆದ ವೇಗಿ ಮೊಹಮ್ಮದ್ ಶಮಿ!

Twitter
Facebook
LinkedIn
WhatsApp
5 ವಿಕೆಟ್ ಕಬಳಿಸಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎಂಬ ದಾಖಲೆ ಬರೆದ ವೇಗಿ ಮೊಹಮ್ಮದ್ ಶಮಿ

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನೀಡಿದ 358 ರನ್​ಗಳ ಗುರಿಯನ್ನು ಬೆನ್ನತ್ತಿದ ಶ್ರೀಲಂಕಾ ತಂಡವು ಮೊಹಮ್ಮದ್ ಶಮಿ ದಾಳಿಗೆ ತತ್ತರಿಸಿತು.

ಆರಂಭದಲ್ಲಿ ಮಿಂಚಿನ ದಾಳಿ ಸಂಘಟಿಸಿದ ಜಸ್​ಪ್ರೀತ್ ಬುಮ್ರಾ 1 ವಿಕೆಟ್ ಪಡೆದರೆ, ಬಳಿಕ ಮೊಹಮ್ಮದ್ ಸಿರಾಜ್ 3 ವಿಕೆಟ್ ಕಬಳಿಸಿದರು. ಇದಾದ ಬಳಿಕ ಮೊಹಮ್ಮದ್ ಶಮಿ ಕರಾರುವಾಕ್ ಬೌಲಿಂಗ್ ಮೂಲಕ ಸಂಚಲನ ಸೃಷ್ಟಿಸಿದರು.

ಮೊಹಮ್ಮದ್ ಶಮಿಯ ಈ ಮಿಂಚಿನ ದಾಳಿ ಮುಂದೆ ಕ್ರೀಸ್ ಕಚ್ಚಿ ನಿಲ್ಲಲು ಪರದಾಡಿದ ಶ್ರೀಲಂಕಾ ಬ್ಯಾಟರ್​ಗಳು ಪೆವಿಲಿಯನ್ ಪರೇಡ್ ನಡೆಸಿದರು. ಪರಿಣಾಮ ಕೇವಲ 5 ಓವರ್​ಗಳಲ್ಲಿ 18 ರನ್ ನೀಡಿ ಶಮಿ 5 ವಿಕೆಟ್ ಕಬಳಿಸಿದರು. ಈ ಐದು ವಿಕೆಟ್​ಗಳೊಂದಿಗೆ ಹಲವು ದಾಖಲೆಗಳನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ. ಆ ದಾಖಲೆಗಳ ಸಂಕ್ಷಿಪ್ತ ವಿವರಗಳು ಈ ಕೆಳಗಿನಂತಿದೆ…

1- ಏಕದಿನ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ವಿಕೆಟ್ ಪಡೆದ ದಾಖಲೆ ಮೊಹಮ್ಮದ್ ಶಮಿ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಝಹೀರ್ ಖಾನ್ ಹಾಗೂ ಜಾವಗಲ್ ಶ್ರೀನಾಥ್ ಹೆಸರಿನಲ್ಲಿತ್ತು. ಶ್ರೀನಾಥ್ ಹಾಗೂ ಝಹೀರ್ ಖಾನ್ ತಲಾ 44 ವಿಕೆಟ್ ಕಬಳಿಸಿ ದಾಖಲೆ ನಿರ್ಮಿಸಿದ್ದರು. ಇದೀಗ 45 ವಿಕೆಟ್ ಉರುಳಿಸುವ ಮೂಲಕ ಟೀಮ್ ಇಂಡಿಯಾ ಪರ ಏಕದಿನ ವಿಶ್ವಕಪ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎಂಬ ದಾಖಲೆಯನ್ನು ಮೊಹಮ್ಮದ್ ಶಮಿ ತಮ್ಮದಾಗಿಸಿಕೊಂಡಿದ್ದಾರೆ.

2- ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ಬಾರಿ 5 ವಿಕೆಟ್ ಕಬಳಿಸಿದ ಬೌಲರ್ ಎಂಬ ಹೆಗ್ಗಳಿಕೆಗೆ ಶಮಿ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಜಾವಗಲ್ ಶ್ರೀನಾಥ್ ಹಾಗೂ ಹರ್ಭಜನ್ ಸಿಂಗ್ ಹೆಸರಿನಲ್ಲಿತ್ತು. ಈ ಇಬ್ಬರು ಬೌಲರ್​ಗಳು ತಲಾ 3 ಬಾರಿ 5 ವಿಕೆಟ್ ಉರುಳಿಸಿ ದಾಖಲೆ ನಿರ್ಮಿಸಿದ್ದರು. ಇದೀಗ 4ನೇ ಬಾರಿಗೆ 5 ವಿಕೆಟ್ ಕಬಳಿಸುವ ಮೂಲಕ ಮೊಹಮ್ಮದ್ ಶಮಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

3- ಮೊಹಮ್ಮದ್ ಶಮಿ ಏಕದಿನ ವಿಶ್ವಕಪ್​ನಲ್ಲಿ ಅತೀ ಹೆಚ್ಚು ಬಾರಿ 5 ವಿಕೆಟ್ ಪಡೆದ ಭಾರತೀಯ ಬೌಲರ್ ಹಾಗೂ ವಿಶ್ವದ 2ನೇ ಬೌಲರ್​ ಎನಿಸಿಕೊಂಡಿದ್ದಾರೆ. ಶಮಿಗೂ ಮುನ್ನ ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್​ ಏಕದಿನ ವಿಶ್ವಕಪ್​ನಲ್ಲಿ 3 ಬಾರಿ 5 ವಿಕೆಟ್ ಕಬಳಿಸಿದ್ದರು. ಇದೀಗ ಈ ದಾಖಲೆಯನ್ನು ಟೀಮ್ ಇಂಡಿಯಾ ವೇಗಿ ಸರಿಗಟ್ಟಿದ್ದಾರೆ.

4- ಈ ಬಾರಿಯ ವಿಶ್ವಕಪ್​ನಲ್ಲಿ ಕೇವಲ 3 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಶಮಿ ಒಟ್ಟು 14 ವಿಕೆಟ್ ಕಬಳಿಸಿದ್ದಾರೆ. ಶಮಿ ನ್ಯೂಝಿಲೆಂಡ್ ವಿರುದ್ಧ 5 ಹಾಗೂ ಇಂಗ್ಲೆಂಡ್ ವಿರುದ್ಧ 4 ವಿಕೆಟ್ ಪಡೆದಿದ್ದರು. ಇದೀಗ ಶ್ರೀಲಂಕಾ ವಿರುದ್ಧ ಮತ್ತೆ 5 ವಿಕೆಟ್ ಉರುಳಿಸಿದ್ದಾರೆ. ಇದರೊಂದಿಗೆ ಏಕದಿನ ವಿಶ್ವಕಪ್​ನಲ್ಲಿ ಅತೀ ಕಡಿಮೆ ಪಂದ್ಯಗಳಿಂದ ಅತ್ಯಧಿಕ ವಿಕೆಟ್ ಪಡೆದ ಬೌಲರ್​ ಎಂಬ ದಾಖಲೆ ಶಮಿ ಹೆಸರಿಗೆ ಸೇರ್ಪಡೆಯಾಗಿದೆ.

5- ಏಕದಿನ ವಿಶ್ವಕಪ್​ನಲ್ಲಿ ಅತ್ಯಧಿಕ ಬಾರಿ 4+ ವಿಕೆಟ್ ಪಡೆದ ವಿಶ್ವ ದಾಖಲೆಯನ್ನು ಮೊಹಮ್ಮದ್ ಶಮಿ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್ ಹೆಸರಿನಲ್ಲಿತ್ತು. ಸ್ಟಾರ್ಕ್​ 6 ಬಾರಿ 4+ ವಿಕೆಟ್ ಕಬಳಿಸಿ ದಾಖಲೆ ನಿರ್ಮಿಸಿದ್ದರು. ಇದೀಗ 7ನೇ ಬಾರಿ 4+ ವಿಕೆಟ್ ಕಬಳಿಸುವ ಮೂಲಕ ಮೊಹಮ್ಮದ್ ಶಮಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಈ ಪಂದ್ಯದಲ್ಲಿ ಐದು ವಿಕೆಟ್ ಕಬಳಿಸಿರುವ ಮೊಹಮ್ಮದ್ ಶಮಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಕೂಡ ಒಲಿದಿದೆ. ಇದರೊಂದಿಗೆ ಈ ಬಾರಿಯ ವಿಶ್ವಕಪ್​ನಲ್ಲಿ 2 ಬಾರಿ ಮ್ಯಾನ್ ಆಫ್ ದಿ ಮ್ಯಾಚ್ ಅವಾರ್ಡ್ ಪಡೆದ ಮೊದಲ ವೇಗಿ ಎನಿಸಿಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ