ವಿಶ್ವ ಕಪ್ ಫೈನಲ್ ಪಂದ್ಯ ವೀಕ್ಷಿಸುವಾಗ ಟಿವಿ ಆಫ್ ಮಾಡಿದ ಮಗನನ್ನೇ ಕೊಂದ ತಂದೆ...!

ಲಕ್ನೋ: ಭಾರತ (India) ಆಸ್ಟ್ರೇಲಿಯಾ (Australia) ನಡುವಿನ ವಿಶ್ವಕಪ್ (World Cup Cricket Final) ಪಂದ್ಯದ ವೇಳೆ ಟಿವಿ ಸ್ವಿಚ್ ಆಫ್ ಮಾಡಿದ್ದಕ್ಕೆ ತಂದೆಯೇ ಮಗನನ್ನು ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.
ಫೈನಲ್ ಪಂದ್ಯವನ್ನು ತಂದೆ ಗಣೇಶ್ ಪ್ರಸಾದ್ ಟಿವಿಯಲ್ಲಿ ವೀಕ್ಷಿಸುತ್ತಿದ್ದ. ಈ ವೇಳೆ ಪುತ್ರ ದೀಪಕ್ ರಾತ್ರಿಯ ಊಟಕ್ಕೆ ಆಹಾರ ಸಿದ್ಧಪಡಿಸುವಂತೆ ಹೇಳಿದ್ದಾನೆ.
ಮಗನ ಮಾತಿಗೆ ಗಣೇಶ್ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ ಮತ್ತು ಕ್ರಿಕೆಟ್ ನೋಡುವುದರಲ್ಲಿ ಮಗ್ನನಾಗಿದ್ದ. ತನ್ನ ಮಾತಿಗೆ ಸ್ಪಂದಿಸದ್ದಕ್ಕೆ ಸಿಟ್ಟಾದ ಮಗ ಟಿವಿಯನ್ನೇ ಸ್ವಿಚ್ ಆಫ್ ಮಾಡಿದ್ದಾನೆ. ಸ್ವಿಚ್ ಆಫ್ ಮಾಡಿದ ನಂತರ ತಂದೆ ಮತ್ತು ಮಗನ ಮಧ್ಯೆ ಜಗಳ ನಡೆದಿದೆ.
ಜಗಳ ವಿಕೋಪಕ್ಕೆ ಹೋಗಿದ್ದು ತಂದೆ ಎಲೆಕ್ಟ್ರಿಕ್ ಕೇಬಲ್ ವಯರ್‌ನಿಂದ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ನಂತರ ಸ್ಥಳದಿಂದ ಪರಾರಿಯಾಗಿದ್ದ. ಖಚಿತ ಮಾಹಿತಿ ಪಡೆದ ಪೊಲೀಸರು ಗಣೇಶ್ ಪ್ರಸಾದ್‌ನನ್ನು ಬಂಧಿಸಿದ್ದಾರೆ.
ರೈತ ಗಣೇಶ ಪ್ರಸಾದ್ ಮದ್ಯವ್ಯಸನಿಯಾಗಿದ್ದ. ಈ ವಿಚಾರಕ್ಕೆ ಸಂಬಂಧಿಸಿದಂತೆ ತಂದೆ ಮತ್ತು ಮಗನ ಮಧ್ಯೆ ಜಗಳ ನಡೆಯುತ್ತಲೇ ಇತ್ತು. ಫೈನಲ್ ಕ್ರಿಕೆಟ್ ಪಂದ್ಯ ನೋಡುವಾಗ ನಡೆದ ಜಗಳದಿಂದ ಈ ಕೊಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೆಟ್ರೋದಲ್ಲಿ ಯುವತಿಗೆ ಲೈಂಗಿಕ ಕಿರುಕುಳ – ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋ
ಬೆಂಗಳೂರು: ಪ್ರತಿಷ್ಠಿತ ಮಾಲ್‌ವೊಂದರಲ್ಲಿ ಯುವತಿಗೆ ಲೈಂಗಿಕ ಕಿರುಕುಳ (Sexual Harassment) ನೀಡಿದ ಪ್ರಕರಣ ಮಾಸುವ ಮುನ್ನವೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
ದಿನದಿಂದ ದಿನಕ್ಕೆ ಲೈಂಗಿಕ ದೌರ್ಜನ್ಯ ಪ್ರಕರಣ ಹೆಚ್ಚುತ್ತಿದೆ. ಅದೇ ರೀತಿ ಹಗಲೊತ್ತಲ್ಲಿ, ಜನಜಂಗುಳಿಯಲ್ಲೇ ಕಾಮುಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ತುಂಬಿ ತುಳುಕುತ್ತಿದ್ದ ಮೆಟ್ರೋದಲ್ಲಿ (Namma Metro) ಯುವತಿಗೆ (Young Woman) ಲೈಂಗಿಕ ಕಿರುಕುಳ ನೀಡಿದ್ದು, ಕಿಡಿಗೇಡಿಯ ಈ ಕೃತ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ (Social Media) ಭಾರೀ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೇ ಯುವತಿಗೆ ನ್ಯಾಯ ಒದಗಿಸಿ ಕಿಡಿಗೇಡಿಗೆ ತಕ್ಕ ಶಾಸ್ತಿ ಮಾಡುವಂತೆ ಆಗ್ರಹಿಸಲಾಗಿದೆ.
ಆಗಿದ್ದೇನು?
ಸೋಮವಾರ ಬೆಳಗ್ಗೆ ಸುಮಾರು 8:30ರ ಸುಮಾರಿನಲ್ಲಿ ಸದಾ ಜನಜಂಗುಳಿ ಇರುವ ಮೆಜೆಸ್ಟಿಕ್ ಮೆಟ್ರೋದಲ್ಲಿ ಘಟನೆ ನಡೆದಿದೆ. ಯುವತಿ ಪ್ರತಿ ದಿನ ಕಾಲೇಜಿಗೆ ಬಸ್‌ನಲ್ಲೇ ತೆರಳುತ್ತಿದ್ದಳು. ಆದರೆ ಸೋಮವಾರ ಬೆಳಗ್ಗೆ 8:30ರ ಸುಮಾರಿಗೆ ಮೆಟ್ರೊದಲ್ಲಿ ಪ್ರಯಾಣಿಸಲು ಮೆಜೆಸ್ಟಿಕ್‌ಗೆ ಬಂದಿದ್ದಳು. ಮೆಟ್ರೊ ಏರುವಾಗ ದಟ್ಟಣೆಯಿತ್ತು. ಮೆಟ್ರೋ ಹತ್ತಿದ ನಂತರ ಕೆಂಪು ಅಂಗಿ ಧರಿಸಿದ್ದ ವ್ಯಕ್ತಿಯೊಬ್ಬ ಹಿಂದಿನಿಂದ ಆಕೆಯನ್ನು ಸ್ಪರ್ಶಿಸಿದ್ದಾನೆ. ಆರಂಭದಲ್ಲಿ ಆಕೆಗೆ ಏನಾಗುತ್ತಿದೆ ಎಂಬ ಅರಿವು ಇರಲಿಲ್ಲ. ಅರಿವಾದಾಗ ಸಹಾಯಕ್ಕೆ ಕೋರಿದ್ದರೂ ಮೆಟ್ರೊ ಸಹಪ್ರಯಾಣಿಕರು ನೆರವಿಗೆ ಬಂದಿರಲಿಲ್ಲ. ಆಕೆ ಅತ್ತು ಕಿರುಚಿದರೂ ಯಾರೂ ಆಕೆಯ ಸಹಾಯಕ್ಕೆ ಬರಲೇ ಇಲ್ಲ. ಯುವತಿಯ ಸ್ನೇಹಿತರು ಸಾಮಾಜಿಕ ಜಾಲತಾಣದಲ್ಲಿ ವಿಚಾರ ಬಹಿರಂಗ ಪಡಿಸಿದ್ದು, ತಪ್ಪಿತಸ್ಥನ ವಿರುದ್ಧ ಕ್ರಮ ಜರುಗಿಸುವಂತೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಂಆರ್‌ಸಿಎಲ್ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಬಿಎಂಆರ್‌ಸಿಎಲ್ ಅಧಿಕಾರಿ ಯಶವಂತ್ ಚೌಹಾಣ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಯಾವ ಟೈಂ, ಯಾವ ಟ್ರೈನ್ ಅಂತಾ ಗೊತ್ತಾಗಬೇಕಿದೆ. ಈಗಾಗಲೇ ಸಿಸಿಟಿವಿಯಲ್ಲಿ ಪರಿಶೀಲನೆ ಮಾಡುತ್ತಿದ್ದೇವೆ. ಇದುವರೆಗೂ ಈ ಕೇಸ್ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ. ಆದರೂ ನಾವು ಕ್ರಮ ವಹಿಸಿ ಪರಿಶೀಲನೆ ಮಾಡುತ್ತಿದ್ದೇವೆ. ಇದರ ಬಗ್ಗೆ ವಿಚಾರಿಸಿ ಹೇಳುತ್ತೇವೆ. ಶೀಘ್ರದಲ್ಲೇ ಪತ್ತೆ ಮಾಡುತ್ತೇವೆ ಎಂದರು.