ಭಾನುವಾರ, ಮೇ 26, 2024
ಎಸ್ಆರ್ ಹೆಚ್ ತಂಡದ ಮಾಲಕಿ ನ್ಯಾಷನಲ್ ಕ್ರಶ್ ಕಾವ್ಯ ಮಾರನ್ ಹಿನ್ನೆಲೆ ಏನು..!-ಉಡುಪಿ: ನಡು ರಸ್ತೆಯಲ್ಲೇ ಎರಡು ತಂಡದ ಯುವಕರ ನಡುವೆ ಗ್ಯಾಂಗ್ ವಾರ್; ಇಲ್ಲಿದೆ ವಿಡಿಯೋ-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಪೋರ್ಷೆ ಕಾರು ಅಪಘಾತ ಪ್ರಕರಣ: ಅಪ್ರಾಪ್ತನ ತಂದೆಗೆ ನ್ಯಾಯಾಂಗ ಬಂಧನ ; ಇಬ್ಬರು ಪೊಲೀಸರು ಅಮಾನತು..!-miyazaki mango: ಜಗತ್ತಿನಲ್ಲಿ ದುಬಾರಿ ಮಾವಿನ ಹಣ್ಣಿನ ಪಟ್ಟಿಯಲ್ಲಿ ಮಿಯಾಜಕಿ ಹಣ್ಣಿನ ವಿಶೇಷತೆ ಏನು..?-ಮಧ್ಯಪ್ರಿಯರಿಗೆ ಜೂನ್ ಮೊದಲ ವಾರದಲ್ಲಿ ಎಣ್ಣೆ ಸಿಗೋದು ಡೌಟ್..!-ಹಾರ್ದಿಕ್ ಪಾಂಡ್ಯಾ ಮತ್ತು ನತಾಶಾ ದಾಂಪತ್ಯ ಜೀವನದಲ್ಲಿ ಬಿರುಕು? ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾದ ಸುದ್ದಿ..!-ಧರ್ಮಸ್ಥಳದಿಂದ ವಾಪಸ್ಸಾಗುತ್ತಿದ್ದ ವೇಳೆ ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ..!-ಅಚ್ಚರಿ ಘಟನೆ; ಅಂತ್ಯಸಂಸ್ಕಾರದ ವೇಳೆ ಕೆಮ್ಮಿದ ಕಂದಮ್ಮ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

India- Australia : ಭಾರತ- ಆಸ್ಟ್ರೇಲಿಯಾ ನಡುವೆ ಫೈನಲ್‌ ; ಚೋಕರ್ಸ್​ ಪಟ್ಟ ಉಳಿಸಿಕೊಂಡ ಆಪ್ರಿಕಾ!

Twitter
Facebook
LinkedIn
WhatsApp
Final between India-Australia; Africa retained the title of chokers!
ಫೈನಲ್‌ನಲ್ಲಿ ಭಾರತ ಯಾರನ್ನು ಎದುರಿಸಲಿದೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. 2023ರ ಐಸಿಸಿ ಕ್ರಿಕೆಟ್ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ಫೈನಲ್ ಪ್ರವೇಶಿಸಿದೆ. ಕೋಲ್ಕತ್ತಾದ ಐತಿಹಾಸಿಕ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಕಾಂಗರೂ ತಂಡ ದಕ್ಷಿಣ ಆಫ್ರಿಕಾವನ್ನು 3 ವಿಕೆಟ್ ಗಳಿಂದ ಸೋಲಿಸಿತು. ದಕ್ಷಿಣ ಆಫ್ರಿಕಾ ಮತ್ತೊಮ್ಮೆ ವಿಶ್ವಕಪ್ ಸೆಮಿಫೈನಲ್‌ನಂತಹ ದೊಡ್ಡ ವೇದಿಕೆಯ ಮೇಲೆ ಬಂದು ‘ಚೋಕರ್ಸ್’ ಎಂಬ ಹಣೆಪಟ್ಟಿಯಂತೆ ಆಡಿತು.

ಐಸಿಸಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ಹೋರಾಟ ನಡೆಸಲಿದೆ. ಇಂದು ನಡೆದ 2ನೇ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ 3 ವಿಕೆಟ್‌ಗಳಿಂದ ಸೌತ್ ಆಫ್ರಿಕಾ ತಂಡ ಸೋಲಿಸಿದೆ. ಸುಲಭ ಗುರಿಯನ್ನು ಸುಲಭವಾಗಿ ಚೇಸ್ ಮಾಡುವ ಆಸ್ಟ್ರೇಲಿಯಾ ಲೆಕ್ಕಾಚಾರ ಫಲಿಸಲಿಲ್ಲ. ಸತತ ವಿಕೆಟ್ ಪತನದಿಂದ ಆಸಿಸ್ ಕಂಗಾಲಾಗಿತ್ತು. ಒಂದೊಂದು ರನ್ ಆಸಿಸ್ ತಂಡಕ್ಕೆ ಸವಲಾಗಿತ್ತು.  ಸೌತ್ ಆಫ್ರಿಕಾ ನೀಡಿದ 213 ರನ್ ಸುಲಭ ಟಾರ್ಗೆಟನ್ನು ಆಸ್ಟ್ರೇಲಿಯಾ 47.2  ಓವರ್‌ಗಳಲ್ಲಿ ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಇದರೊಂದಿಗೆ ನವೆಂಬರ್ 19 ರಂದು ಅಹಮ್ಮದಾಬಾದ್‌ನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಪ್ರಶಸ್ತಿಗಾಗಿ ಭಾರತ ಹಾಗೂ ಆಸ್ಟೇಲಿಯಾ ಹೋರಾಟ ನಡೆಸಲಿದೆ.

ಅದ್ಬುತ ಬೌಲಿಂಗ್ ದಾಳಿ ಮೂಲಕ ಸೌತ್ ಆಫ್ರಿಕಾ ತಂಡವನ್ನು 212 ರನ್‌ಗೆ ಕಟ್ಟಿಹಾಕಲಾಗಿತ್ತು. ಹೀಗಾಗಿ ಆಸ್ಟ್ರೇಲಿಯಾ ಸುಲಭ ಗುರಿ ಪಡೆಯಿತು. ಇದಕ್ಕೆ ತಕ್ಕಂತೆ ಉತ್ತಮ ಆರಂಭವನ್ನೂ ಪಡೆಯಿತು. ಟ್ರಾವಿಸ್ ಹೆಡ್ ಹಾಗೂ ಡೇವಿಡ್ ವಾರ್ನರ್ ಜೊತೆಯಾಟದಿಂದ ಮೊದಲ ವಿಕೆಟ್‌ಗೆ 60 ರನ್ ಕಲೆಹಾಕಿತು. ಆದರೆ ಡೇವಿಡ್ ವಾರ್ನರ್ 29 ರನ್ ಸಿಡಿಸಿ ಔಟಾದರು. ಇದರ ಬೆನ್ನಲ್ಲೇ ಮಿಚೆಲ್ ಮಾರ್ಶ್ ಡಕೌಟ್ ಆದರು.

ಸತತ 2 ವಿಕೆಟ್ ಕಳೆದುಕೊಂಡು ಆಸ್ಟ್ರೇಲಿಯಾ ಒತ್ತಡಕ್ಕೆ ಸಿಲುಕಿತು. ಟ್ರಾವಿಸ್ ಹೆಡ್ ಹಾಗೂ ಸ್ಟೀವ್ ಸ್ಮಿತ್ ಜೊತೆಯಾಟದಿಂದ ಆಸೀಸ್ ಚೇತರಿಸಿಕೊಂಡಿತು. ಹೆಡ್ 62 ರನ್ ಸಿಡಿಸಿ ನಿರ್ಗಮಿಸಿದರು. ಮಾರ್ನಸ್ ಲಬುಶಾನೆ 18 ರನ್ ಸಿಡಿಸಿ ಔಟಾದರು. ಸುಲಭವಾಗಿ ಗುರಿ ಚೇಸ್ ಮಾಡುವ ಲೆಕ್ಕಾಚಾರದಲ್ಲಿ ಆಸ್ಟ್ರೇಲಿಯಾದಲ್ಲಿ ಆತಂಕ ಹೆಚ್ಚಾಯಿತು. ಏಕಾಂಗಿಯಾಗಿ ಪಂದ್ಯ ಗೆಲ್ಲಿಸಿಕೊಡಬಲ್ಲ ಗ್ಲೆನ್ ಮ್ಯಾಕ್ಸ್‌ವೆಲ್ ಕೇವಲ 1 ರನ್ ಸಿಡಿಸಿ ನಿರ್ಗಮಿಸಿದರು.

ಸ್ಟೀವ್ ಸ್ಮಿತಿ 30 ರನ್ ಸಿಡಿಸಿ ಔಟಾಗುತ್ತಿದ್ದಂತೆ ಆಸ್ಟ್ರೇಲಿಯಾ ತಂಡದ ಒತ್ತಡ ಹೆಚ್ಚಾಯಿತು. ಜೋಶ್ ಇಂಗ್ಲಿಸ್ 28 ರನ್ ಸಿಡಿಸಿ ಔಟಾದರು. ಆಸ್ಟ್ರೇಲಿಯಾ 7 ವಿಕೆಟ್ ಕಳೆದುಕೊಂಡಿತು. ಅಂತಿಮ 60 ಎಸೆತದಲ್ಲಿ ಆಸೀಸ್ ಗೆಲುವಿಗೆ 20 ರನ್ ಅವಶ್ಯಕತೆ ಇತ್ತು. ಮಿಚೆಲ್ ಸ್ಟಾರ್ಕ್ ಹಾಗೂ ಪ್ಯಾಟ್ ಕಮಿನ್ಸ್ ಹೋರಾಟ ಆಸೀಸ್ ತಂಡದ ಕೈಹಿಡಿಯಿತು. ಸೋಲಿನ ದವಡೆಯಿಂದ ಪಾರು ಮಾಡಿತು. 47.2 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು ಗುರಿ ತಲಿಪಿತು. ಸ್ಟಾರ್ಕ್ ಅಜೇಯ 16 ರನ್ ಹಾಗೂ ಕಮಿನ್ಸ್ ಅಜೇಯ 14 ರನ್ ಸಿಡಿಸಿದರು. 

ಮಹತ್ವದ ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾದ ಟಾಪ್ ಆರ್ಡರ್ ಬ್ಯಾಟ್ಸ್‌ಮನ್ ಅಬ್ಬರಿಸಲಿಲ್ಲ. ಡೇವಿಡ್ ಮಿಲ್ಲರ್ ಹಾಗೂ ಹೆನ್ರಿಚ್ ಕ್ಲಾಸೆನ್ ಹೋರಾಟ ಹೊರತುಪಡಿಸಿದರೆ ಇತರರಿಂದ ರನ್ ಹರಿದು ಬರಲಿಲ್ಲ. ಸಂಪೂರ್ಣವಾಗಿ ಕುಸಿದ ತಂಡಕ್ಕೆ ಡೇವಿಡ್ ಮಿಲ್ಲರ್ ಶತಕ ಸಿಡಿಸಿ ನೆರವಾದರು. ಇತ್ತ ಹೆನ್ರಿಚ್ 47 ರನ್ ಕಾಣಿಕೆ ನೀಡಿದರು. ಮಿಲ್ಲರ್ 101 ರನ್ ಸಿಡಿಸಿದ್ದು. ಇದರ ಪರಿಣಾಮ ಸೌತ್ ಆಪ್ರಿಕಾ 49.4 ಓವರ್‌ಗಳಲ್ಲಿ 212 ರನ್ ಸಿಡಿಸಿ ಆಲೌಟ್ ಆಗಿತ್ತು.

India- Australia ನಡುವೆ ಫೈನಲ್ ಫೈಟ್

ಈ ಗೆಲುವಿನೊಂದಿಗೆ ಆಸ್ಟ್ರೇಲಿಯ 8ನೇ ಬಾರಿ ವಿಶ್ವಕಪ್ ಫೈನಲ್‌ಗೆ ಲಗ್ಗೆ ಇಟ್ಟಿದ್ದು, ಇದೀಗ 2023ರ ವಿಶ್ವಕಪ್‌ನ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಎದುರಿಸಲಿದೆ. ಇದರೊಂದಿಗೆ 20 ವರ್ಷಗಳ ಬಳಿಕ ಮತ್ತೊಮ್ಮೆ ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ನಡುವೆ ಏಕದಿನ ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದೆ. 2003ರ ಏಕದಿನ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವೆ ಫೈನಲ್ ಪಂದ್ಯ ನಡೆದಿತ್ತು. ಆಗ ಟೀಂ ಇಂಡಿಯಾ ವಿರುದ್ಧ ಆಸ್ಟ್ರೇಲಿಯಾ 125 ರನ್​ಗಳ ಜಯ ಸಾಧಿಸಿತ್ತು.ಹೀಗಾಗಿ ಫೈನಲ್​ನಲ್ಲಿ ಆಸ್ಟ್ರೇಲಿಯಾವನ್ನು ಮಣಿಸಿ 20 ವರ್ಷಗಳ ಹಳೆಯ ದಾಖಲೆಯನ್ನು ಮುರಿಯುವ ಅವಕಾಶ ಟೀಂ ಇಂಡಿಯಾಕ್ಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ