ಬುಧವಾರ, ಮೇ 8, 2024
ಲಂಚ ಸ್ವೀಕಾರ; ರೆಂಡ್ ಆ್ಯಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PDO-ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್-ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ-ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ; ಇಲಾಖೆಯಿಂದ ಯಾವುದೇ ವೇತನ ಬಾಕಿ ಇಲ್ಲ - ದಿನೇಶ್‌ ಗುಂಡೂರಾವ್‌-ಡಿಕೆಶಿ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟು, ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಲಿ : ಎಚ್‌ಡಿ ಕುಮಾರಸ್ವಾಮಿ-ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಸಿಕ್ಕಾಪಟ್ಟೆ ಟ್ರೋಲ್!!-ಹರಿಯಾಣ ಸರ್ಕಾರ ಬೆಂಬಲಿಸುತ್ತಿದ್ದ ಮೂವರು ಶಾಸಕರು ಕಾಂಗ್ರೆಸ್ ಸೇರ್ಪಡೆ..!-ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೂರು ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳ ಆಯ್ಕೆ ಫೈನಲ್ ;ಮಂಡ್ಯದ ಟಿಕೆಟ್‌ ಯಾರಿಗೆ?

Twitter
Facebook
LinkedIn
WhatsApp
ಮೂರು ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳ ಆಯ್ಕೆ ಫೈನಲ್ ;ಮಂಡ್ಯದ ಟಿಕೆಟ್‌ ಯಾರಿಗೆ?

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಠಕ್ಕರ್‌ ಕೊಡುವ ನಿಟ್ಟಿನಲ್ಲಿ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಹಾಗೂ ಜೆಡಿಎಸ್‌ 28 ಕ್ಷೇತ್ರಗಳ ಫೈಕಿ ಬಿಜೆಪಿ 25 ಜೆಡಿಎಸ್‌ ಮೂರು ಕ್ಷೇತ್ರಗಳನ್ನ ಹಂಚಿಕೊಂಡಿದ್ದು, ಜೆಡಿಎಸ್‌ ಕೊನೆಗೂ ಅಭ್ಯರ್ಥಿಗಳ ಆಯ್ಕೆ ಫೈನಲ್ ಮಾಡಿದೆ.

28 ಕ್ಷೇತ್ರಗಳ ಫೈಕಿ ಮೂರು ಕ್ಷೇತ್ರಗಳಾದ ಕೋಲಾರ, ಮಂಡ್ಯ ಮತ್ತು ಹಾಸನ ಲೋಕಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನಿರೀಕ್ಷೆಯಂತೆ ಹಾಸನದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡಲಿದ್ದಾರೆ. ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಎಚ್‌.ಡಿ ಕುಮಾರಸ್ವಾಮಿ ಅವರೇ ಕಣಕ್ಕಿಳಿಯಲಿದ್ದಾರೆ. ಅಲ್ಲದೇ ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ಮಲ್ಲೇಶ್ ಬಾಬುಗೆ ನೀಡಲಾಗಿದೆ

ಇನ್ನೂ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಸಮೃದ್ಧಿ ಮಂಜುನಾಥ, ಮಲ್ಲೇಶ್ ಬಾಬು ಹಾಗೂ ನಿಸರ್ಗ ನಾರಾಯಣಸ್ವಾಮಿ ಅವರು ಟಿಕೆಟ್‌ಗಾಗಿ ದಳಪತಿಗಳ ಮುಂದೆ ಬೇಡಿಕೆ ಇಟ್ಟಿದ್ರು. ಆದರೆ ಕೊನೆ ಕ್ಷಣದವರೆಗೂ ಸಮೃದ್ಧಿ ಮಂಜುನಾಥ್ ಹೆಸರು ಮುಂಚೂಣಿಯಲ್ಲಿತ್ತು. ಆದರೆ, ಅಂತಿಮವಾಗಿ ಮಲ್ಲೇಶ್ ಬಾಬು ಅವರಿಗೆ ದಳಪತಿಗಳು ಟಿಕೆಟ್‌ ನೀಡಿದ್ದಾರೆ.

ಇತ್ತ ಜೆಡಿಎಸ್‌ ನಾಯಕರಿಗೆ ಪ್ರತಿಷ್ಠೆಯ ಕ್ಷೇತ್ರವಾದ ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಅಥವಾ ಎಚ್​ಡಿ ಕುಮಾರಸ್ವಾಮಿ ಸ್ಪರ್ಧೆ ಮಾಡಬೇಕೆಂದು ಜಿಲ್ಲೆಯ ನಾಯಕ, ಮುಖಂಡರು ಆಗ್ರಹಿಸಿದ್ದರು. ಈ ನಡುವೆ ಕುಮಾರಸ್ವಾಮಿ ಅವರು ಜೆಡಿಎಸ್‌ ನಾಯಕ ಸಿ ಎಸ್‌ ಪುಟ್ಟರಾಜು ಅವರನ್ನ ಕಣಕ್ಕಿಳಿಸುವುದಾಗಿ ಹೇಳಿದ್ರು. ಆದರೆ, ಮಂಡ್ಯ ಕಾರ್ಯಕರ್ತರು ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡಬೇಕು ಎಂದು ಪಟ್ಟು ಹಿಡಿದಿದ್ರು.

ಇತ್ತ ಮತ್ತೊಂದು ಕುಮಾರಸ್ವಾಮಿ ಅವರು ಚನ್ನಪಟ್ಟಣ ಬಿಟ್ಟು ಮಂಡ್ಯಗೆ ಹೋಗಬಾರದು ಎಂದು ಚನ್ನಪಟ್ಟಣ ಕಾರ್ಯಕರ್ತರು ಪಟ್ಟು ಹಿಡಿದಿದ್ದರು. ಆದರೆ, ಅಂತಿಮವಾಗಿ ಮಂಡ್ಯ ಕಾರ್ಯಕರ್ತರ ಒತ್ತಡಕ್ಕೆ ಕುಮಾರಸ್ವಾಮಿ ಅವರು ಮಣಿದಿದ್ದು, ಸ್ಪರ್ಧೆ ಒಪ್ಪಿಗೆ ಸೂಚಿಸಿದ್ದಾರೆ.

ಇನ್ನೂ ಹಾಸನದಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠರಾದ ಎಚ್.ಡಿ.ದೇವೇಗೌಡರು ಮಾತನಾಡಿ, ಕುಮಾರಸ್ವಾಮಿಗಿಂತ ಹೆಚ್ಚಾಗಿ ಮಂಡ್ಯದ ಜನ ಅವರನ್ನು ಬಿಡುತ್ತಿಲ್ಲ. ಜನ ಬಿಡ್ತಿಲ್ಲ, ನೀವೇ ಬನ್ನಿ ಅಂತಿದ್ದಾರೆ. ಆಸ್ಪತ್ರೆಯಿಂದ ಬಂದ ಕೂಡಲೇ ಬನ್ನಿ ಎಂದರು. ನೀವೇ ನಿಲ್ಲಬೇಕು ಅಂತ ಹಠ ಮಾಡುತ್ತಾರೆ. ಇವತ್ತು ಕೋರ್ ಕಮಿಟಿ ಸಭೆಯಲ್ಲು ನೀವೇ ನಿಲ್ಲಬೇಕು ಎಂದರು. ಕೋಲಾರದ್ದು ಬೇರೆ ಪ್ರಶ್ನೆಯೇ ಇಲ್ಲ, ಮಲ್ಲೇಶ್ ಬಾಬು ಅವನೇ ಅಭ್ಯರ್ಥಿ ಎಂದು ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ