Pratap Simha: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha), ಪುನೀತ್ ಕೆರೆಹಳ್ಳಿ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪುನೀತ್ ಕೆರೆಹಳ್ಳಿ(Puneeth kerehalli)ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಆತನ ಪರವಾಗಿ ಬಸವೇಶ್ವರನಗರ ಠಾಣೆ ಮುಂದೆ ಪ್ರತಿಭಟನೆನಡೆಸಲಾಗಿತ್ತು.
ಬಸವೇಶ್ವರ ನಗರ ಪೊಲೀಸ್ ಠಾಣೆ ಮುಂದೆ ಪ್ರತಾಪ್ ಸಿಂಹ ಸೇರಿದಂತೆ ಹಲವು ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದ್ದರು. ಎ1 ಪುನೀತ್ ಕೆರೆಹಳ್ಳಿ , ಎ2 ಪ್ರತಾಪ್ ಸಿಂಹ ಎಂದು ಉಲ್ಲೇಖಿಸಲಾಗಿದೆ. ಪೊಲೀಸ್ ಠಾಣೆ ಮುಂದೆ ಅಕ್ರಮವಾಗಿ ಗುಂಪುಗೂಡಿ ಪ್ರತಿಭಟನೆ ನಡೆಸಿ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಎಫ್‌ಐಆರ್ ದಾಖಲಿಸಲಾಗಿದೆ.
ಪುನೀತ್ ಕೆರೆಹಳ್ಳಿ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಪ್ರತಾಪ್ ಸಿಂಹ, ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಬಿಜೆಪಿ ಹಾಗೂ ಹಿಂದೂಪರ ಸಂಘಟನೆ ಕಾರ್ಯಕರ್ತರು ಬಸವೇಶ್ವರ ನಗರ ಪೊಲೀಸ್ ಠಾಣೆ ಮುಂದೆ ಇಂದು ಪ್ರತಿಭಟನೆ ನಡೆಸಿದರು.
ಘಟನೆ ವಿವರ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಾಯಿ ಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಜೈಪುರದಿಂದ ಬಂದಿದ್ದ ಲೋಡ್ಗಟ್ಟಲೇ ಬಾಕ್ಸ್ಗಳಲ್ಲಿ ನಾಯಿ ಮಾಂಸ ಇದೆ ಎಂದು ಪುನೀತ್ ಕೆರೆಹಳ್ಳಿ ತಂಡ ದಾಳಿ ಮಾಡಿತ್ತು. ಕುರಿ ಮಾಂಸದ ಜೊತೆ ನಾಯಿ ಮಾಂಸವನ್ನೂ ಮಿಕ್ಸ್ ಮಾಡಿದ್ದಾರೆ ಎಂದು ಆರೋಪಿಸಿ, ಹೈಡ್ರಾಮಾ ಮಾಡಿದ್ದರು. ಈ ಹಿನ್ನಲೆ ರಸ್ತೆಯಲ್ಲಿ ಗಲಾಟೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ಪೊಲೀಸರು ಪುನೀತ್ ಕೆರೆಹಳ್ಳಿ ವಿರುದ್ಧ 2ಕೇಸ್ ಹಾಕಿ ಅರೆಸ್ಟ್ ಮಾಡಿದ್ದರು.
ಬಳಿಕ ಪುನೀತ್ ಕೆರೆಹಳ್ಳಿ ಮೇಲೆ ಎಸಿಪಿ ಚಂದನ್ ಕುಮಾರ್ ಹಲ್ಲೆ ಮಾಡಿದ್ದಾರೆ ಎಂದು ಅವರ ವಿರುದ್ದ ಮಾಜಿ ಸಂಸದ ಪ್ರತಾಪ್ ಸಿಂಹ, ಪುನೀತ್ ಕೆರೆಹಳ್ಳಿ ಹಾಗೂ ಶಾಸಕ ಹರೀಶ್ ಪೂಂಜಾ ಅವರು ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಕುಮಾರ್ ಅವರ ಬಳಿ ದೂರು ನೀಡಿದ್ದರು. ಜೊತೆಗೆ ಕೆಲವು ಪೊಲೀಸರು ಹೀರೋಗಳಾಗುವುದಕ್ಕೆ ಇತರ ಮಾಡುತ್ತಾರೆ. ಇಂತಹ ಘಟನೆ ಆಗಬಾರದು ಎಂದು ಮನವರಿಕೆ ಮಾಡಲು ಬಂದಿದ್ದೇವೆ ಪೊಲೀಸರ ವಿರುದ್ದ ಕಿಡಿಕಾರಿದ್ದರು. ಇದೀಗ ಪುನೀತ್ ಕೆರೆಹಳ್ಳಿ, ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ದ ಎಫ್‌ಐಆರ್ ದಾಖಲಾಗಿದೆ.
ಯಾತ್ನಾಳ್ ವಿರುದ್ಧ ಕೋರ್ಟ್ ನಲ್ಲಿ ಹೇಳಿಕೆ ದಾಖಲಿಸಿದ ಟಬು ರಾವ್!
ಬೆಂಗಳೂರು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಟಬು ರಾವ್ ಬುಧವಾರ ನಗರದ ವಿಶೇಷ ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದರು.
ದಿನೇಶ್ ಗುಂಡೂರಾವ್ ಅಂತರ್ ಧರ್ಮೀಯ ವಿವಾಹವಾಗಿರುವುದನ್ನು ಉಲ್ಲೇಖಿಸಿ, ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದರು. ಬಳಿಕ ಟಬು ರಾವ್ ಇದೇ ವರ್ಷದ ಏಪ್ರಿಲ್ 6 ರಂದು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಬುಧವಾರ 42ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ಎನ್. ಶಿವಕುಮಾರ್ ಮುಂದೆ ಹಾಜರಾದ ಟಬುರಾವ್, ಹೇಳಿಕೆಯನ್ನು ದಾಖಲಿಸಿದರು. ಆಗಸ್ಟ್ 7 ಮತ್ತು 8 ರಂದು ಈ ವಿಷಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ನ್ಯಾಯಾಲಯ ಪಟ್ಟಿ ಮಾಡಿದೆ.