ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

FIR: ಗಂಭೀರ ಸ್ವರೂಪದ ಪ್ರಕರಣಗಳಿದ್ದಾಗ ತಕ್ಷಣ ಎಫ್‌ಐಆರ್; ಕರ್ನಾಟಕ ಹೈಕೋರ್ಟ್ ನಿರ್ದೇಶನ

Twitter
Facebook
LinkedIn
WhatsApp
500x300 426148 FIR: ಗಂಭೀರ ಸ್ವರೂಪದ ಪ್ರಕರಣಗಳಿದ್ದಾಗ ತಕ್ಷಣ ಎಫ್‌ಐಆರ್; ಕರ್ನಾಟಕ ಹೈಕೋರ್ಟ್ ನಿರ್ದೇಶನhc

ಬೆಂಗಳೂರು: ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳ ಮಾಹಿತಿ ನೀಡಿದಾಗ ತಕ್ಷಣ ಎಫ್‌ಐಆರ್‌ (FIR)ದಾಖಲಿಸದ ಪೊಲೀಸರ ಕ್ರಮವನ್ನು ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ.

ಈ ಸಂಬಂಧ ಸುಪ್ರೀಂಕೋರ್ಟ್‌ ನೀಡಿರುವ ಲಲಿತಾಕುಮಾರಿ ಪ್ರಕರಣದ ಸಾರಾಂಶವನ್ನು ಠಾಣೆಗಳಿಗೆ ಕನ್ನಡ ಮತ್ತು ಆಂಗ್ಲಭಾಷೆಯಲ್ಲಿ ಒದಗಿಸುವಂತೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಿದೆ. ದೂರು ಸಲ್ಲಿಸಿದ್ದರೂ ಎಫ್‌ಐಆರ್‌ (FIR) ದಾಖಲಿಸದ ಬಬಲೇಶ್ವರ ಪೊಲೀಸ್‌ ಠಾಣಾಧಿಕಾರಿ ಕ್ರಮ ಪ್ರಶ್ನಿಸಿ ವಿಜಯಪುರ ಜಿಲ್ಲೆಯ ಕಿಲಾರಹಟ್ಟಿಯ ವಿಠ್ಠಲ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಅವರಿದ್ದ ಏಕಸದಸ್ಯ ಪೀಠ, ಈ ಸೂಚನೆ ನೀಡಿದೆ.

ಲಲಿತಾಕುಮಾರಿ ವಿರುದ್ಧದ ಪ್ರಕರಣದಲ್ಲಿಸುಪ್ರೀಂಕೊರ್ಟ್‌ ನೀಡಿರುವ ತೀರ್ಪಿನ 120ನೇ ಪ್ಯಾರಾ ಸಂಬಂಧ ಕನ್ನಡ, ಇಂಗ್ಲಿಷ್‌ ಭಾಷೆಯಲ್ಲಿ ಸುತ್ತೋಲೆ ಹೊರಡಿಸಬೇಕು. ಗಂಭೀರ ಅಪರಾಧದ ದೂರು ಬಂದಾಗ ಪ್ರಾಥಮಿಕ ತನಿಖೆ ಅಗತ್ಯವಿಲ್ಲ. ಗಂಭೀರ ಅಪರಾಧ ಕಂಡು ಬಂದಾಗ ಎಫ್‌ಐಆರ್‌ ದಾಖಲಿಸಬೇಕು. ಈ ಸಂಬಂಧ ಪೊಲೀಸ್‌ ಠಾಣಾ ಡೈರಿಯಲ್ಲಿ ತನಿಖೆಯ ಸಂಪೂರ್ಣ ಮಾಹಿತಿ ಉಲ್ಲೇಖಿಸಬೇಕು’ ಎಂದು ನಿರ್ದೇಶನ ನೀಡಿದ ನ್ಯಾಯಪೀಠ, ಗಂಭೀರವಲ್ಲದ ಪ್ರಕರಣಗಳಲ್ಲಿ ಮಾತ್ರ ಪ್ರಾಥಮಿಕ ತನಿಖೆ ನಡೆಸಿ ಏಳು ದಿನಗಳೊಳಗೆ ಪ್ರಾಥಮಿಕ ತನಿಖೆ ಮುಕ್ತಾಯಗೊಳಿಸಬೇಕು ಎಂದು ಹೇಳಿದೆ.

‘ ಪ್ರಸ್ತುತದ ಪ್ರಕರಣದಲ್ಲಿ ಸಂಜ್ಞೆ ಅಪರಾಧ ವನ್ನು ಬಹಿರಂಗಪಡಿಸಿದಾಗ ಎಫ್‌ಐಆರ್‌ ದಾಖಲಿಸಬಹುದಾಗಿತ್ತು. ಆದರೆ, ಪ್ರಕರಣ ಹೈಕೋರ್ಟ್‌ ಮೆಟ್ಟಿಲೇರುವವರೆಗೂ ದಾಖಲಿಸದಿರುವುದು ಕರ್ತವ್ಯ ಲೋಪವಾಗಿದೆ. ಇಂತಹ ಹಲವು ಪ್ರಕರಣಗಳು ಹೈಕೋರ್ಟ್‌ ಮೆಟ್ಟಿಲೇರುತ್ತಿದ್ದು, ತಕ್ಷಣ ಪ್ರಕರಣ ದಾಖಲಿಸಬೇಕು’ ಎಂದು ನಿರ್ದೇಶನ ನೀಡಿದೆ.

ಜತೆಗೆ, ಈ ಸಂಬಂಧ ಆ. 26 ರಂದು ಅನುಪಾಲನಾ ವರದಿಯನ್ನು ಸಲ್ಲಿಸಬೇಕು, ಎಂದು ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ನ್ಯಾಯಪೀಠ ನಿರ್ದೇಶನ ನೀಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist