ಬುಧವಾರ, ಮೇ 8, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂಬೈನಲ್ಲಿ ಇಂದು ಮುಂಜಾನೆ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ದುರಂತ ; 7 ಮಂದಿ ಸಾವು - 40 ಮಂದಿಗೆ ಗಾಯ!

Twitter
Facebook
LinkedIn
WhatsApp
ಮುಂಬೈನಲ್ಲಿ ಇಂದು ಮುಂಜಾನೆ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ದುರಂತ ; 7 ಮಂದಿ ಸಾವು - 40 ಮಂದಿಗೆ ಗಾಯ!
ಮುಂಬೈ: ಇಲ್ಲಿನ ಗೋರೆಗಾಂವ್‍ನ (Goregaon) ಬಹುಮಹಡಿ ಕಟ್ಟಡ ಒಂದರಲ್ಲಿ ಇಂದು ಮುಂಜಾನೆ ಸಂಭವಿಸಿದ ಭಾರೀ ಅಗ್ನಿ (Massive Fire) ಅವಘಡದಲ್ಲಿ ಆರು ಜನ ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ 40 ಮಂದಿ ಗಾಯಗೊಂಡಿದ್ದಾರೆ.

ಬೆಂಕಿಗೆ ಆಹುತಿಯಾದ ಆರು ಜನರಲ್ಲಿ ಓರ್ವ ಪುರುಷ, ಐವರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಸೇರಿದ್ದಾರೆ. ಗಾಯಗೊಂಡ 40 ಜನರಲ್ಲಿ 12 ಪುರುಷರು ಮತ್ತು 28 ಮಹಿಳೆಯರು, ಓರ್ವ ಅಪ್ರಾಪ್ತ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಮುಂಬೈನ ಎಚ್‍ಬಿಟಿ ಮತ್ತು ಕೂಪರ್ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಗೋರೆಗಾಂವ್‍ನ ಪಶ್ಚಿಮ ಆಜಾದ್ ನಗರದ ಪ್ರದೇಶದ ಜೈ ಭವಾನಿ ಕಟ್ಟಡದಲ್ಲಿ ಮುಂಜಾನೆ 3ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಅವಘಡಕ್ಕೆ ಕಾರಣ ಏನೆಂಬುದನ್ನು ತಿಳಿಯಲು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಣಿಪುರದಲ್ಲಿ ಮತ್ತೆ ಸಂಘರ್ಷ – ಮನೆಗಳಿಗೆ ಹೊತ್ತಿದ ಬೆಂಕಿ

ಇಂಫಾಲ: ಮಣಿಪುರದಲ್ಲಿ (Manipur) ಮತ್ತೆ ಹಿಂಸಾಚಾರ (Violence) ಭುಗಿಲೆದ್ದಿದೆ. ಇಂಫಾಲದ (Imphal) ಪಶ್ಚಿಮ ಜಿಲ್ಲೆಯಲ್ಲಿ ಹಲವು ಸುತ್ತುಗಳ ಗುಂಡುಗಳನ್ನು ಹಾರಿಸಲಾಗಿದ್ದು, ಕನಿಷ್ಠ 2 ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಪಟ್ಸೋಯಿ ಪೊಲೀಸ್ ಠಾಣಾ ವ್ಯಾಪ್ತಿಯ ನ್ಯೂ ಕೀಥೆಲ್ಮನ್ಬಿಯಲ್ಲಿ ಘಟನೆ ಸಂಭವಿಸಿದೆ. ದಾಳಿಯ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸದ್ಯ ಭದ್ರತಾ ಪಡೆಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಘಟನೆ ಬಳಿಕ ಪ್ರದೇಶದಲ್ಲಿ ಜಮಾಯಿಸಿದ ಮೈತೆಯಿ ಮಹಿಳೆಯರ ಗುಂಪನ್ನು ಭದ್ರತಾ ಪಡೆಗಳು ಮುಂದೆ ಸಾಗದಂತೆ ತಡೆದಿದ್ದಾರೆ. ಸ್ಥಳದಲ್ಲಿ ಹೆಚ್ಚುವರಿ ಭದ್ರತೆಯನ್ನು ನಿಯೋಜಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೇ 3 ರಂದು ಮಣಿಪುರದಲ್ಲಿ ಜನಾಂಗೀಯ ಘರ್ಷಣೆಗಳು ಪ್ರಾರಂಭವಾಗಿದ್ದು, ಅಂದಿನಿಂದ ಹಿಂಸಾಚಾರದಲ್ಲಿ 180 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ನೂರಾರು ಜನರು ಗಾಯಗೊಂಡಿದ್ದಾರೆ.

ಪರಿಶಿಷ್ಟ ಪಂಗಡದ ಸ್ಥಾನಮಾನಕ್ಕಾಗಿ ಮೈತೆಯಿ ಸಮುದಾಯದ ಬೇಡಿಕೆಯ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿದೆ. ಮಣಿಪುರದ ಜನಸಂಖ್ಯೆಯ 53% ರಷ್ಟಿರುವ ಮೈತೆಯಿಗಳು ಇಂಫಾಲ್ ಕಣಿವೆಯಲ್ಲಿ ಹೆಚ್ಚಾಗಿ ವಾಸಿಸುತ್ತಿದ್ದಾರೆ. ಬುಡಕಟ್ಟು ಜನಾಂಗದವರು ನಾಗಾಗಳು ಮತ್ತು ಕುಕಿಗಳು 40% ಕ್ಕಿಂತ ಸ್ವಲ್ಪ ಹೆಚ್ಚು ಮತ್ತು ಗುಡ್ಡಗಾಡು ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ