ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾಂಗ್ರೆಸ್‌ನ ಐದು ಸಂಸದರು ಲೋಕಸಭೆ ಅಧಿವೇಶನದಿಂದ ಅಮಾನತು..!

Twitter
Facebook
LinkedIn
WhatsApp
ಕಾಂಗ್ರೆಸ್‌ನ ಐದು ಸಂಸದರು ಲೋಕಸಭೆ ಅಧಿವೇಶನದಿಂದ ಅಮಾನತು..!

ಹೊಸದಿಲ್ಲಿ: ಸಂಸತ್ತಿನ ಚಳಿಗಾಲದ ಅಧಿವೇಶನದ (parliament Winter Session) ಉಳಿದ ಅವಧಿಗೆ ಐವರು ಕಾಂಗ್ರೆಸ್ ಸಂಸದರನ್ನು ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ. “ಅಧ್ಯಕ್ಷರ ನಿರ್ದೇಶನಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ” ಕಾರಣಕ್ಕಾಗಿ ಅವರನ್ನು ಅಮಾನತುಗೊಳಿಸಲಾಗಿದೆ.

ಅಮಾನತುಗೊಂಡ ಸಂಸದರೆಂದರೆ ಪ್ರತಾಪನ್, ಹೈಬಿ ಈಡನ್, ಕುರಿಯಾಕೋಸ್, ಜೋತಿ ಮಣಿ ಮತ್ತು ರಮ್ಯಾ ಹರಿದಾಸ್. ಬುಧವಾರ ಸಂಭವಿಸಿದ ಲೋಕಸಭೆಯ ಭದ್ರತಾ ಲೋಪದ ಹಿನ್ನೆಲೆಯಲ್ಲಿ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಪ್ರತಿಪಕ್ಷಗಳು ಒತ್ತಾಯಿಸಿ ಗಲಭೆ ಸೃಷ್ಟಿಸಿದ್ದವು. ಈ ಸಂದರ್ಭದಲ್ಲಿ ನಡೆಸಿದ ಗದ್ದಲ ಹಾಗೂ ಅಧ್ಯಕ್ಷರಿಗೆ ತೋರಿದ ಅಗೌರವಕ್ಕಾಗಿ ಇವರನ್ನು ಅಮಾನತು ಮಾಡಲಾಗಿದೆ.

ಇದಕ್ಕೂ ಮುನ್ನ ತೃಣಮೂಲ ಕಾಂಗ್ರೆಸ್‌ ಸಂಸದ ಡೆರೆಕ್‌ ಓಬ್ರಿಯಾನ್‌ ಅವರನ್ನು ಅಮಾನತು ಮಾಡಲಾಗಿತ್ತು. ಕಲಾಪದಲ್ಲಿ ಗದ್ದಲ ಸೃಷ್ಟಿಯಾದ ಬಳಿಕ ಲೋಕಸಭೆಯನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಯಿತು. ಈ ಸಂದರ್ಭದಲ್ಲಿ ಸದನದ ಅಧ್ಯಕ್ಷ ಪೀಠದಲ್ಲಿ ಬಿ. ಮಹ್ತಾಬ್‌ ಇದ್ದರು.

“ಈ ಸದನವು ಟಿ.ಎನ್. ಪ್ರತಾಪನ್, ಹೈಬಿ ಈಡನ್, ಎಸ್. ಜೋತಿಮಣಿ, ರಮ್ಯಾ ಹರಿದಾಸ್ ಮತ್ತು ಡೀನ್ ಕುರಿಯಾಕೋಸ್ ಅವರ ಅಗೌರವದ, ಅಧ್ಯಕ್ಷರ ನಿರ್ದೇಶನವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ ನಡವಳಿಕೆಯನ್ನು ಗಂಭೀರವಾಗಿ ಪರಿಗಣಿಸಿದೆ. ಈ ಸದಸ್ಯರನ್ನು ಅಧಿವೇಶನದ ಉಳಿದ ಅವಧಿಗೆ ಸದನದಿಂದ ಅಮಾನತುಗೊಳಿಸಲಾಗಿದೆ” ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ಟಿಎಂಸಿ ಸಂಸದ ಡೆರೆಕ್ ಓಬ್ರಿಯಾನ್ ಗುರುವಾರ ರಾಜ್ಯಸಭೆಯಲ್ಲಿ ತೋರಿದ “ಅಗೌರವಪೂರಿತ ದುರ್ನಡತೆ”ಗಾಗಿ ಅಮಾನತುಗೊಂಡಿದ್ದಾರೆ. ಅಮಾನತುಗೊಳಿಸುವ ಪ್ರಸ್ತಾಪವನ್ನು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್‌ಕರ್ ಅಂಗೀಕರಿಸಿದರು. ಕಳೆದ ವಾರ ಟಿಎಂಸಿಯ ಇನ್ನೊಬ್ಬ ಸಂಸತ್‌ ಸದಸ್ಯೆಯಾದ ಮಹುವಾ ಮೋಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಛಾಟಿಸಲಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist