ನೀರಿನಲ್ಲಿ ಮುಳುಗುತ್ತಿರುವವನನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ನೀರುಪಾಲು...!
Twitter
Facebook
LinkedIn
WhatsApp
ಈಜಲು ಹೋದವನನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ನೀರುಪಾಲಾಗಿರುವಂತಹ (death) ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸಹಸ್ರಲಿಂಗ ಬಳಿಯ ಭೂತದಗುಂಡಿಯಲ್ಲಿ ನಡೆದಿದೆ. ರಾಮನಬೈಲಿನ ನಿವಾಸಿಗಳಾದ ಮೌಲಾನ ಮಹಮ್ಮದ್ ಸಲೀಮ್ ಕಲೀಲ್ ರೆಹಮಾನ್ (44), ನಾದಿಯಾ ನೂರ್ (20), ನಬಿಲ್ ನೂರ್ ಅಹ್ಮದ್(22), ವಿದ್ಯಾರ್ಥಿಗಳಾದ ಉಮರ್ ಸಿದ್ದಿಕ್(14), ಮಿಸ್ಬಾ ತಬಸುಮ್(21) ಮೃತರು. ಭಾನುವಾರ ರಜೆ ಹಿನ್ನೆಲೆಯಲ್ಲಿ ಈಜಲು ತೆರಳಿದ್ದಾಗ ಅವಘಡ ಸಂಭವಿಸಿದೆ.
ಓರ್ವನ ಮೃತ ದೇಹ ಪತ್ತೆಯಾಗಿದ್ದು, ನಾಲ್ವರ ಮೃತ ದೇಹಕ್ಕಾಗಿ ಅಗ್ನಿಶಾಮಕ ಸಿಬ್ಬಂದಿಗಳಿಂದ ಕಾರ್ಯಾಚರಣೆ ಮುಂದುವರೆದಿದೆ. ಸ್ಥಳಕ್ಕೆ ಶಿರಸಿ ಗ್ರಾಮೀಣ ಪೊಲೀಸರು ಭೇಟಿ ನೀಡಿದ್ದಾರೆ.