ಮಂಗಳವಾರ, ಮೇ 21, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೊಬೈಲ್‍ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್; ಏನಿದು Emergency Alert test?

Twitter
Facebook
LinkedIn
WhatsApp
ಮೊಬೈಲ್‍ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್; ಏನಿದು Emergency Alert test?

ಬೆಂಗಳೂರು: ಮುಂಬರುವ ದಿನಗಳಲ್ಲಿ ಸಂಭವಿಸುವ ವಿಕೋಪಗಳ ಕುರಿತು ಮುನ್ಸೂಚನೆ ನೀಡುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಮೊಬೈಲ್‍ಗೆ ಇದೀಗ ಎಚ್ಚರಿಕೆ ರೀತಿಯ ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಸಂದೇಶವೊಂದು (Flash Message To Mobile) ಬಂದಿದೆ.

ರಾಜ್ಯದಲ್ಲಿ ದೂರಸಂಪರ್ಕ ಇಲಾಖೆ (ಸಿ-ಡಾಟ್) ಸೆಲ್ ಬ್ರಾಡ್ ಕಾಸ್ಟಿಂಗ್ ಮೂಲಕ ಸ್ಮಾರ್ಟ್‍ಫೋನ್ ಬಳಕೆದಾರರಿಗೆ ತುರ್ತು ಎಚ್ಚರಿಕೆ ವ್ಯವಸ್ಥೆಯ ಕುರಿತು ಕಳೆದೆರಡು ದಿಗಳಿಂದ ಸಂದೇಶಗಳು ಬರುತ್ತಿದ್ದವು. ಅಂತೆಯೇ ಇಂದು (ಗುರುವಾರ) ಮಧ್ಯಾಹ್ನ 12 ಗಂಟೆ ಸುಮಾರಿಗೆ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಫ್ಲ್ಯಾಶ್ ಮೆಸೇಜ್ ಜೊತೆ ವಿಭಿನ್ನ ಶಬ್ದ ಕೂಡ ಮೊಬೈಲ್‍ಗೆ ಬಂದಿದೆ.

ಸಂದೇಶದಲ್ಲಿ ಏನಿತ್ತು..?: ಇದು ಭಾರತ ಸರ್ಕಾರದ ದೂರಸಂಪರ್ಕ ಇಲಾಖೆಯಿಂದ ಸೆಲ್ ಬ್ರಾಡ್ ಕಾಸ್ಟಿಂಗ್ ಸಿಸ್ಟಮ್ ಮೂಲಕ ಕಳುಹಿಸಲಾದ ಮಾದರಿ ಪರೀಕ್ಷಾ (Alert Test Message) ಸಂದೇಶವಾಗಿದೆ. ನಿಮ್ಮ ಕಡೆಯಿಂದ ಯಾವುದೇ ರೀತಿಯ ಪ್ರತಿಕ್ರಿಯೆಯ ಅಗತ್ಯವಿಲ್ಲದ ಕಾರಣ ದಯವಿಟ್ಟು ಈ ಸಂದೇಶವನ್ನು ನಿರ್ಲಕ್ಷಿಸಿ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜಾರಿಗೊಳಿಸುತ್ತಿರುವ ಪ್ಯಾನ್-ಇಂಡಿಯಾ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಪರೀಕ್ಷಿಸಲು ಈ ಸಂದೇಶವನ್ನು ಕಳುಹಿಸಲಾಗಿದೆ. ಇದು ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ತುರ್ತು ಸಂದರ್ಭಗಳಲ್ಲಿ ಸಕಾಲಿಕ ಎಚ್ಚರಿಕೆಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ ಎಂದು ತಿಳಿಸಲಾಗಿದೆ.

ಭಯಪಡಬೇಡಿ: ಈ ಮೊದಲು ಕಳುಹಿಸಲಾಗಿದ್ದ ಸಂದೇಶದಲ್ಲಿ ಫೋನ್ ಜೋರಾಗಿ ಎಚ್ಚರಿಕೆಯ ರೀತಿಯ ಬೀಪ್ ಶಬ್ಧದೊಂದಿಗೆ ಸಂದೇಶ ಫ್ಲ್ಯಾಶ್ ಆಗಲಿದೆ. ಬಳಕೆದಾರರು ಓಕೆ ಕೊಡುವವರೆಗೂ ಈ ಶಬ್ಧ ಬರುತ್ತಲೇ ಇರುತ್ತದೆ. ಈ ಮೂಲಕ ಎಚ್ಚರಿಕೆ ಸಂದೇಶವನ್ನು ಓದಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳುವುದು ಇದರ ಉದ್ದೇಶವಾಗಿದೆ. ಆದರೆ ಇದಕ್ಕೆ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದು ಹೇಳಲಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ