ಬುಧವಾರ, ಮೇ 8, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Flipkart Big Saving Days Sale: ಫ್ಲಿಪ್​ಕಾರ್ಟ್​ನಲ್ಲಿ ಬಿಗ್ ಸೇವಿಂಗ್ ಡೇಸ್ ಸೇಲ್: ಈ ಸ್ಮಾರ್ಟ್​ಫೋನ್​ಗಳಿಗೆ ಬಂಪರ್ ಡಿಸ್ಕೌಂಟ್

Twitter
Facebook
LinkedIn
WhatsApp
Flipkart Big Saving Days Sale: ಫ್ಲಿಪ್​ಕಾರ್ಟ್​ನಲ್ಲಿ ಬಿಗ್ ಸೇವಿಂಗ್ ಡೇಸ್ ಸೇಲ್: ಈ ಸ್ಮಾರ್ಟ್​ಫೋನ್​ಗಳಿಗೆ ಬಂಪರ್ ಡಿಸ್ಕೌಂಟ್

ಪ್ರಸಿದ್ಧ ಇ ಕಾಮರ್ಸ್​ ತಾಣಗಳಲ್ಲಿ ಭರ್ಜರಿ ಮೇಳಗಳು ಆರಂಭವಾಗುತ್ತಿದೆ. ಅಮೇಜಾನ್ (Amazon) ಸದ್ಯದಲ್ಲೇ ಹೊಸ ಸೇಲ್ ಬಗ್ಗೆ ಘೋಷಣೆ ಮಾಡಲಿದ್ದರೆ ಇತ್ತ ಫ್ಲಿಪ್​ಕಾರ್ಟ್​ ಬಿಗ್‌ ಸೇವಿಂಗ್‌ ಡೇಸ್‌ (Flipkart Big Saving Days sale) ಸೇಲ್​ಗೆ ಎಲ್ಲ ತಯಾರಿ ಮಾಡಿಕೊಂಡಿದೆ. ಇದೇ ಡಿಸೆಂಬರ್ 16 ರಂದು ಈ ಬಹುನಿರೀಕ್ಷಿತ ಸೇಲ್ ಲೈವ್ ಆಗಲಿದ್ದು, ಡಿಸೆಂಬರ್ 21 ರವರೆಗೆ ನಡೆಯಲಿದೆ. ಮಾರಾಟದ ಸಮಯದಲ್ಲಿ, ಖರೀದಿದಾರರಿಗೆ ಸ್ಮಾರ್ಟ್‌ಫೋನ್‌ಗಳು, ಎಲೆಕ್ಟ್ರಾನಿಕ್ಸ್, ಲ್ಯಾಪ್‌ಟಾಪ್‌ಗಳು ಮತ್ತು ಹೆಚ್ಚಿನ ಉತ್ಪನ್ನಗಳ ಮೇಲೆ ಬಿಗ್‌ ಆಫರ್‌ಗಳನ್ನು ನೀಡಲಾಗಿದೆ. ನೀವು ಹೊಸ ಸ್ಮಾರ್ಟ್‌ಫೋನ್ ಖರೀದಿಸುವ ಯೋಚನೆಯಲ್ಲಿದ್ದರೆ ಇದುವೇ ಬೆಸ್ಟ್​ ಟೈಮ್ ಎನ್ನಬಹುದು. ಯಾಕಂದ್ರೆ ಈ ಸೇಲ್​ನಲ್ಲಿ ಮೊಬೈಲ್​ಗಳ ಮೇಲೆ ಸೇರಿದಂತೆ ಹೆಚ್ಚುವರಿಯಾಗಿ ಹಲವಾರು ಉತ್ಪನ್ನಗಳ ಮೇಲೆ ತ್ವರಿತ ರಿಯಾಯಿತಿಗಳನ್ನು ಒದಗಿಸಲು ಫ್ಲಿಪ್​ಕಾರ್ಟ್ ಮುಂದಾಗಿದೆ. ಖರೀದಿದಾರರು ರಿಯಲ್ ಮಿ, ಒಪ್ಪೋ, ಸ್ಯಾಮ್​ಸಂಗ್, ಆ್ಯಪಲ್ ಕಂಪನಿ ಸೇರಿದಂತೆ ಅನೇಕ ಸ್ಮಾರ್ಟ್​ಫೋನ್​ಗಳು (Smartphone) ಊಹಿಸಲಾಗದ ರೀತಿಯ ಡಿಸ್ಕೌಂಟ್ ಪಡೆದುಕೊಳ್ಳಬಹುದು.

ಫ್ಲಿಪ್​ಕಾರ್ಟ್ ಬಿಗ್‌ ಸೇವಿಂಗ್‌ ಡೇಸ್​ನಲ್ಲಿ ಸ್ಮಾರ್ಟ್ ವಾಚ್‌ಗಳ ಮೇಲೂ ಭರ್ಜರಿ ರಿಯಾಯಿತಿಗಳನ್ನು ಘೋಷಿಸಿದೆ. ಟ್ರಿಮ್ಮರ್‌ಗಳು ಮತ್ತು ಶೇವರ್‌ಗಳ ಮೇಲೆ ಶೇಕಡಾ 70 ರಷ್ಟು ರಿಯಾಯಿತಿ ಮತ್ತು ಲ್ಯಾಪ್‌ಟಾಪ್‌ಗಳ ಮೇಲೆ ಶೇಕಡಾ 40 ರಷ್ಟು ರಿಯಾಯಿತಿ ನೀಡುವ ಸಾಧ್ಯತೆ ಇದೆ. ಒನ್​ಪ್ಲಸ್, ಬೋಟ್, ಜೆಬಿಎಲ್, ರಿಯಲ್ ಮಿ ಮತ್ತು ಹೆಚ್ಚಿನ ಬ್ರಾಂಡ್‌ಗಳಿಂದ ಪೋರ್ಟಬಲ್ ಸ್ಪೀಕರ್‌ಗಳು ಮತ್ತು ಹೆಡ್‌ಫೋನ್‌ಗಳು ರಿಯಾಯಿತಿಯಲ್ಲಿ ಲಭ್ಯವಿರುತ್ತವೆ. ಸ್ಮಾರ್ಟ್​ಫೋನ್ ವಿಚಾರಕ್ಕೆ ಬರುವುದಾದರೆ ಪೋಕೋ ಕಂಪನಿಯ ಫೋನ್​ಗಳು ಅತಿ ಕಡಿಮೆ ಬೆಲೆಗೆ ಮಾರಾಟ ಆಗಲಿದೆ. ಇದರ ಡಿಸ್ಕೌಂಟ್ ಬೆಲೆ ಕೂಡ ಬಹಿರಂಗ ಆಗಿದೆ.

ಬಿಗ್ ಸೇವಿಂಗ್ ಡೇಸ್ ಸೇಲ್​ನಲ್ಲಿ Poco F4 5G ಸ್ಮಾರ್ಟ್​ಫೋನ್​ನ 6GB RAM ಮತ್ತು 128GB ROM ಆಯ್ಕೆಯ ಬೇಸ್ ಮಾಡೆಲ್‌ಗೆ 22,999 ರೂ. ರಿಯಾಯಿತಿ ಬೆಲೆಯಲ್ಲಿ ಲಭ್ಯವಿದೆ. ಇದರಲ್ಲಿ ಬ್ಯಾಂಕ್ ಆಫರ್ ಕೂಡ ಸೇರ್ಪಡೆಯಾಗಿದೆ. ಇದು ಕ್ವಾಲ್ಕಂ ಸ್ನಾಪ್​ಡ್ರಾಗನ್ 870 5G ಪ್ರೊಸೆಸರ್​ನಿಂದ ಚಾಲಿತವಾಗಿದೆ ಮತ್ತು 120 Hz ರಿಫ್ರೆಶ್ ದರದೊಂದಿಗೆ 6.67-ಇಂಚಿನ AMOLED ಡಿಸ್ ಪ್ಲೇಯನ್ನು ಹೊಂದಿದೆ.

ಎಲ್ಲಾ ಆಫರ್​ಗಳನ್ನು ಉಪಯೋಗಿಸಿ Poco X4 Pro 5G ಸ್ಮಾರ್ಟ್​ಫೋನನ್ನು ನೀವು 14,499 ರೂ. ರಿಯಾಯಿತಿ ದರದಲ್ಲಿ ಖರೀದಿಸಬಹುದು. ಇದು ಕ್ವಾಲ್ಕಂ ಸ್ನಾಪ್​ಡ್ರಾಗನ್ 695 ಪ್ರೊಸೆಸರ್​ನಿಂದ ಚಾಲಿತವಾಗಿದೆ. 120Hz ರಿಫ್ರೆಶ್ ದರದೊಂದಿಗೆ 6.67-ಇಂಚಿನ ಸೂಪರ್ AMOLED ಡಿಸ್ಪ್ಲೇಯನ್ನು ಹೊಂದಿದೆ. ಹಿಂಭಾಗದಲ್ಲಿ ಟ್ರಿಪಲ್-ಕ್ಯಾಮೆರಾ ಸೆಟಪ್ ನೀಡಲಾಗಿದ್ದು, ಇದರಲ್ಲಿ 64MP ಪ್ರಾಥಮಿಕ ಕ್ಯಾಮೆರಾ, 8MP ಅಲ್ಟ್ರಾ-ವೈಡ್ ಆಂಗಲ್ ಸೆನ್ಸಾರ್ ಮತ್ತು 2MP ಮ್ಯಾಕ್ರೋ ಕ್ಯಾಮೆರಾ ಇದೆ. ಸೆಲ್ಫಿಗಳಿಗಾಗಿ 16MP ಕ್ಯಾಮೆರಾ ನೀಡಲಾಗಿದೆ.

Poco M4 5G ಸ್ಮಾರ್ಟ್​ಫೋನ್ ಅನ್ನು ನೀವು ಆಫರ್​ನಲ್ಲಿ ಕೇವಲ 10,249 ರೂ. ಗೆ ಪಡೆದುಕೊಳ್ಳಬಹುದು. ಇದು MediaTek ಡೈಮೆನ್ಸಿಟಿ 700 Soc ಮತ್ತು 5,000mAh ಬ್ಯಾಟರಿಯಿಂದ ಚಾಲಿತವಾಗಿದೆ . 90Hz ರಿಫ್ರೆಶ್ ದರದ 6.58-ಇಂಚಿನ IPS LCD ಡಿಸ್ ಪ್ಲೇಯನ್ನು ಹೊಂದಿದೆ. ಇದು 2MP ಡೆಪ್ತ್ ಸೆನ್ಸಾರ್‌ನೊಂದಿಗೆ 50MP ಪ್ರಾಥಮಿಕ ಕ್ಯಾಮೆರಾ ಒಳಗೊಂಡಿದ್ದು, ಸೆಲ್ಫಿಗಳಿಗಾಗಿ 8MP ಕ್ಯಾಮೆರಾ ನೀಡಲಾಗಿದೆ.

ಪೊಕೊ C31 ಸ್ಮಾರ್ಟ್​ಫೋನ್​ನ 3GB RAM ಮತ್ತು 32GB ROM ಮಾದರಿಗೆ ಕೇವಲ 6,499 ರೂ. ನಿಗದಿ ಮಾಡಲಾಗಿದೆ. ಇದು MediaTek Helio G35 SoC ನಿಂದ ಚಾಲಿತವಾಗಿದೆ ಮತ್ತು 6.53-ಇಂಚಿನ IPS LCD ಡಿಸ್ ಪ್ಲೇ ಹೊಂದಿದೆ. 10W ವೈರ್ಡ್ ಚಾರ್ಜಿಂಗ್‌ನಿಂದ ಬೆಂಬಲಿತವಾದ 5,000mAh ಬ್ಯಾಟರಿಯನ್ನು ನೀಡಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ