ವಿದ್ಯಾರ್ಥಿಗಳಿಗೆ ಬಸ್ ಡಿಕ್ಕಿ ಪ್ರಕರಣ: ಓರ್ವ ವಿದ್ಯಾರ್ಥಿನಿ ಮೃತ್ಯು

ಚಿಕ್ಕಮಗಳೂರು: ಶಾಲೆಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ಖಾಸಗಿ ಬಸ್ಸೊಂದು ರಸ್ತೆ ಬದಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಹರಿದು ಗಂಭೀರ ಗಾಯಗೊಂಡಿದ್ದ ಇಬ್ಬರು ವಿದ್ಯಾರ್ಥಿನಿಯರಲ್ಲಿ ಓರ್ವ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ಮೃತ ವಿದ್ಯಾರ್ಥಿನಿಯನ್ನು ತರೀಕೆರೆ ತಾಲೂಕಿನ ಸೀತಾಪುರ ಕಾವಲು ನಿವಾಸಿ ತುಳಸಿ(15) ಎನ್ನಲಾಗಿದೆ.
ತುಳಸಿ, ಬಾವಿಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ 9 ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದಳು ಎನ್ನಲಾಗಿದ್ದು ಎಂದಿನಂತೆ ಶಾಲೆಗೆ ತೆರಳಲು ಬಸ್ಸಿಗಾಗಿ ಇತರ ವಿದ್ಯಾರ್ಥಿನಿಯರ ಜೊತೆ ಕಾಯುತ್ತಿದ್ದ ವೇಳೆ ಅತಿವೇಗವಾಗಿ ಬಂದ ಬಸ್ಸು ವಿದ್ಯಾರ್ಥಿನಿಯರ ಮೇಲೆ ಹರಿದು ತುಳಸಿ ಸೇರಿ ಇಬ್ಬರು ಗಂಭೀರ ಗಾಯಗೊಂಡಿದ್ದರು. ಕೂಡಲೇ ಇಬ್ಬರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿತಾದರೂ ಚಿಕಿತ್ಸೆ ಫಲಿಸದೆ ತುಳಸಿ ಕೊನೆಯುಸಿರೆಳೆದಿರುವುದಾಗಿ ಆಸ್ಪತ್ರೆ ಮೂಲಗಳು ತಿಳಿಸಿವೆ.
ತುಳಸಿ ತಂದೆ – ತಾಯಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.
Sirsi: ವ್ಯಕ್ತಿಯ ಶವ ಪತ್ತೆ… ಪೊಲೀಸರಿಂದ ಪರಿಶೀಲನೆ
ಶಿರಸಿ: ನಗರದ ವಿದ್ಯಾದಿರಾಜ ಕಲಾಕ್ಷೇತ್ರದ ಮುಂಭಾಗದಲ್ಲಿರುವ ಅಡಿಕೆ ತೋಟದ ದಂಡೆಯ ಪಕ್ಕದಲ್ಲಿ ಹರಿಯುವ ನೀರಿನಲ್ಲಿ ವ್ಯಕ್ತಿಯೊರ್ವರ ಶವ ಪತ್ತೆಯಾಗಿದೆ. ಮೃತಪಟ್ಟಿರುವ ವ್ಯಕ್ತಿಯನ್ನು ಮಹೇಶ ಉಪ್ಪಾರ (50) ಗಿಡಮಾವಿನಕಟ್ಟಾ ಎಂದು ಗುರುತಿಸಲಾಗಿದೆ.
ಪೋಲಿಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದು ಇದು ಸಹಜ ಸಾವು ಅಥವಾ ಕೊಲೆಯೋ ಎಂದು ಪೋಲಿಸರ ತನಿಖೆಯಿಂದ ತಿಳಿದು ಬರಬೇಕಾಗಿದೆ.