ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್!

Twitter
Facebook
LinkedIn
WhatsApp
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್!

ಮಾಜಿ ಮುಖ್ಯಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು ವಿದೇಶ ಪ್ರವಾಸದಿಂದ ವಾಪಸ್ ಆಗಿದ್ದಾರೆ.

ಕುಟುಂಬ ಸಮೇತ ಪ್ರವಾಸಕ್ಕೆ ತೆರಳಿದ್ದ ಮಾಜಿ ಸಿಎಂ ಬಿಎಸ್​ವೈ ಇಂದು ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

ಇದೇ ವೇಳೆ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಯಡಿಯೂರಪ್ಪ ಹಾಗೂ ಉಪಮುಖ್ಯಂತ್ರಿ ಡಿಕೆ ಶಿವಕುಮಾರ್ ಮುಖಾಮುಖಿಯಾದರು.

ಈ‌ ವೇಳೆ ಡಿಕೆ ಶಿವಕುಮಾರ್ ಯಡಿಯೂರಪ್ಪರನ್ನು ಮಾತನಾಡಿಸಿ ಕೈ ಕುಲುಕಿರುವುದು ವಿಶೇಷ

ಅತ್ತ ದುಬೈನಿಂದ ಬಿಎಸ್​ವೈ ಬಂದಿದ್ದರೆ, ಇತ್ತ ದೆಹಲಿಯಿಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಗಮಿಸಿದರು. ವೇಳೆ ಉಭಯ ನಾಯಕರು ಮುಖಾಮುಖಿಯಾದರು.

ಬಳಿಕ ಇಬ್ಬರು ಪರಸ್ಪರ ಕುಶಲೋಪರಿ ವಿಚಾರಿಸಿಕೊಂಡು ವಿಮಾನ ನಿಲ್ದಾಣದಿಂದ ತಮ್ಮ ತಮ್ಮ ಕಾರಿನಲ್ಲಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.

ಇನ್ನು ಯುರೋಪ್​ ಪ್ರವಾಸಕ್ಕೆ ತೆರಳಿದ್ದ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಸಹ ಬೆಂಗಳೂರಿಗೆ ವಾಪಸ್ ಆಗಿದ್ದಾರೆ

ವಿಧಾನಸಭೆ ಚುನಾವಣೆ ಬಳಿಕ ರಿಲ್ಯಾಕ್ಸ್​ ಆಗಿ ಕುಟುಂಬ ಸಮೇತರಾಗಿ ಕುಮಾರಸ್ವಾಮಿ ಅವರು ಯುರೋಪ್ ಪ್ರವಾಸಕ್ಕೆ ಹೋಗಿದ್ದರು

ವಿಮಾನ ಇಳಿಯುತ್ತಿದ್ದಂತೆಯೇ ಸರ್ಕಾರದ ವಿರುದ್ಧ ಕಮಿಷನ್ ದಂಧೆ ಬಾಂಬ್ ಸಿಡಿಸಿದ ಕುಮಾರಸ್ವಾಮಿ

ಬೆಂಗಳೂರು, (ಆಗಸ್ಟ್.4): ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅವರು ಕುಟುಂಬ ಸಮೇತ ಯುರೋಪ್​ ಪ್ರವಾಸ(foreign Trip) ಮುಗಿಸಿ ನಿನ್ನೆ ತಡರಾತ್ರಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ವಿದೇಶದಿಂದ ಬೆಂಗಳೂರಿಗೆ ಮರುಳುತ್ತಿದ್ದಂತೆಯೇ ಕಾಂಗ್ರೆಸ್ ಸರ್ಕಾರದ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ. ವಿದೇಶದಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕುಮಾರಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಪರ್ಸೆಂಟೇಜ್​​ ನೀಡುವಂತೆ ಗುತ್ತಿಗೆದಾರರಿಗೆ ಹೇಳಿದ್ದಾರಂತೆ. ನಾನು ಯುರೋಪ್​ ಪ್ರವಾಸದಲ್ಲಿದ್ದಾಗಲೇ ಕಮಿಷನ್ ಬಗ್ಗೆ ಮಾಹಿತಿ ಬಂತು ಎಂದು ಗಂಭೀರ ಆರೋಪ ಮಾಡಿದರು.

ಬೆಂಗಳೂರಿನಲ್ಲೇ ಪರ್ಸೆಂಟೇಜ್​​​ ನೀಡಲು ಹೇಳಿದ್ದಾರಂತೆ. ಮಂತ್ರಿಗಳು, ಮಂತ್ರಿಗಳ ಚೇಲಾಗಳು ಕಮಿಷನ್ ಕೇಳುತ್ತಿದ್ದಾರಂತೆ. ಇಂತವರು ರಾಹುಲ್ ಮುಂದೆ ಭ್ರಷ್ಟಾಚಾರದ ಬಗ್ಗೆ ಚರ್ಚೆ ಮಾತಾಡುತ್ತಾರಂತೆ. ಹೊರನೋಟಕ್ಕೆ ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತೇವೆ ಎನ್ನುತ್ತಾರೆ. ಆದರೆ ಕಾಂಗ್ರೆಸ್​ ಸ್ವಾತಂತ್ರ್ಯ ಬಂದಾಗಿನಿಂದಲೂ ಅಧಿಕಾರ ನಡೆಸಿದೆ. ಅಂದಿನಿಂದಲೂ ವಲೂಲಿಗಾಗಿಯೇ ಕಾಂಗ್ರೆಸ್​ ಪಕ್ಷ ಇದೆ ಎಂದು ಕಿಡಿಕಾರಿದರು.

ಇನ್ನು ಇದೇ ವೇಳೆ ರಾಜ್ಯ ಪೊಲೀಸ್ ಇಲಾಖೆ ನಡೆಯುತ್ತಿರುವ ಇನ್ಸ್​ಪೆಕ್ಟರ್​ಗಳ ವರ್ಗಾವಣೆ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಗೃಹ ಇಲಾಖೆಯಲ್ಲಿ ಯಾವ ರೀತಿ ವರ್ಗಾವಣೆ ದಂಧೆ ನಡೆಯಿತು, ಪೊಲೀಸ್ ಅಧಿಕಾರಿಗಳನ್ನ ಯಾವ ಮಟ್ಟಿಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ನಾನು ವಿದೇಶದಲ್ಲಿದ್ದರೂ ಪ್ರತಿನಿತ್ಯದ ಬೆಳವಣಿಗೆಗಳನ್ನ ಗಮನಿಸಿದ್ದೇನೆ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ