ಮಂಗಳವಾರ, ಡಿಸೆಂಬರ್ 5, 2023
ರಾಜ್ಯದ 13 ಭ್ರಷ್ಟ ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಹಣ ಸೀಝ್..!-ಬೆಂಗಳೂರಿನ ಮನೆಯನ್ನೇ 100 ಕೋಟಿಗೆ ಅಡವಿಟ್ಟು ಸಿಬ್ಬಂದಿಗಳಿಗೆ ವೇತನ ನೀಡಿದ ಬೈಜೂಸ್ ಸಂಸ್ಥಾಪಕ!-ಅರ್ಜುನನ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್!-ಬಿಜೆಪಿ ಮುಖಂಡ ಪೃಥ್ವಿಸಿಂಗ್​ಗೆ ಚಾಕು ಇರಿತ: ದೂರು ದಾಖಲು!-ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!-ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್..!-ಆಹಾರ ಧಾನ್ಯಗಳ ಮೂಟೆಯಡಿ ಸಿಲುಕಿ ಐವರು ಕಾರ್ಮಿಕರ ಸಾವು-ಸಿಐಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಫ್ರೆಡ್ರಿಕ್ಸ್ ಖ್ಯಾತಿಯ ನಟ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ.!-ನಾಯಿ ಬೊಗಳಿದಕ್ಕೆ ಗಲಾಟೆ; ಆ್ಯಸಿಡ್​ ಎರಚಿದ ದಂಪತಿ!-ಮರಕ್ಕೆ ಬಸ್ ಡಿಕ್ಕಿ 14 ಜನ ಸಾವು, 20 ಮಂದಿ ಗಾಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರವರಿಗೆ ಕೇಂದ್ರ ಗೃಹ ಇಲಾಖೆಯಿಂದ ಝೆಡ್ ಶ್ರೇಣಿ ಭದ್ರತೆ!

Twitter
Facebook
LinkedIn
WhatsApp
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರವರಿಗೆ ಕೇಂದ್ರ ಗೃಹ ಇಲಾಖೆಯಿಂದ ಝೆಡ್ ಶ್ರೇಣಿ ಭದ್ರತೆ!

ಬೆಂಗಳೂರು, (ಅಕ್ಟೋಬರ್ 26): ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ (Karnataka Ex CM BS Yediyurappa ) ಅವರಿಗೆ ಕೇಂದ್ರ ಗೃಹ ಇಲಾಖೆ ಝೆಡ್ ಶ್ರೇಣಿ ಭದ್ರತೆ(Z category security) ನೀಡಿದೆ. ಈ ಹಿಂದೆ ಬಿಎಸ್ ಯಡಿಯೂರಪ್ಪ ಅವರಿಗೆ ಇದ್ದ ಭದ್ರತೆಯನ್ನು ರಾಜ್ಯ ಸರ್ಕಾರ ಹಿಂಪಡೆದುಕೊಂಡಿತ್ತು. ಇದೀಗ ಕೇಂದ್ರ ಗೃಹ ಸಚಿವಾಲಯವೇ ಖುದ್ದು ಯಡಿಯೂರಪ್ಪನವರಿಗೆ ಉನ್ನತ ಮಟ್ಟದ ಭದ್ರತೆ ನೀಡಿರುವುದು ಅಚ್ಚರಿಕೆ ಕಾರಣವಾಗಿದೆ.

ಮೂಲಗಳ ಪ್ರಕಾರ ಕೆಲವು ದುಷ್ಕರ್ಮಿಗಳಿಂದ ಪ್ರಾಣ ಬೆದರಿಕೆ ಇದೆ ಎಂದು ಕೇಂದ್ರ ಗೃಹ ಇಲಾಖೆಗೆ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತವಾಗಿರುವ  ಕೇಂದ್ರ ಗೃಹ ಸಚಿವಾಲಯ ಈ  ಭದ್ರತೆ ಒದಗಿಸಿದೆ ಎನ್ನಲಾಗಿದೆ. ಗೃಹ ಸಚಿವಾಲಯ ನಿರ್ದೇಶನದಂತೆ ಯಡಿಯೂರಪ್ಪ ಅವರಿಗೆ ಭದ್ರ ಉನ್ನತ ಶ್ರೇಣಿಯ  ಭದ್ರತೆ ನೀಡಿದೆ ಎನ್ನಲಾಗಿದೆ.

ಕೇಂದ್ರ ಗೃಹ ಇಲಾಖೆಯ ನಿರ್ದೇಶನದಂತೆ ಕೇಂದ್ರ ಮೀಸಲು ಪೊಲೀಸ್ ಪಡೆ ಕಮಾಂಡೋಗಳು ಶೀಘ್ರವೇ ಭದ್ರತಾ ಉಸ್ತುವಾರಿ ವಹಿಸಿಕೊಳ್ಳಲಿದ್ದು,  ಯಡಿಯೂರಪ್ಪ ಅವರ ಭದ್ರತೆಗೆ ಒಟ್ಟು 33 ಝಡ್ ಕೆಟಗರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

10 ಶಸ್ತ್ರಸಜ್ಜಿತ ಸ್ಟ್ಯಾಟಿಕ್ ಗಾರ್ಡ್‌ಗಳನ್ನು ಅವರ ನಿವಾಸದಲ್ಲಿ ಇರಿಸಲಾಗುವುದು, ಆರು ವೈಯಕ್ತಿಕ ಭದ್ರತಾ ಅಧಿಕಾರಿಗಳು ಹಗಲು-ರಾತ್ರಿ ದಿನದ 24 ಗಂಟೆ ಕಾಯುತ್ತಿರುತ್ತಾರೆ. ಸಂಭಾವ್ಯ ಬೆದರಿಕೆಗಳ ವಿರುದ್ಧ ನಿರಂತರ ಜಾಗ್ರತೆ ವಹಿಸಲು 12 ಸಶಸ್ತ್ರ ಬೆಂಗಾವಲು ಕಮಾಂಡೋಗಳನ್ನು ಮೂರು ಪಾಳಿಗಳಲ್ಲಿ ನಿಯೋಜಿಸಲಾಗುವುದು. ನಿರಂತರ ಕಣ್ಗಾವಲು ಕಾಯ್ದುಕೊಳ್ಳಲು ಇಬ್ಬರು ವೀಕ್ಷಕರನ್ನು ಶಿಫ್ಟ್‌ಗಳಲ್ಲಿ ನಿಯೋಜಿಸಲಾಗುತ್ತದೆ.

ರಾಮನಗರ ಹೆಸರು ಬದಲಾವಣೆ ಮಾಡಿದ್ರೆ ಉಪವಾಸ ಸತ್ಯಾಗ್ರಹ: ಡಿಕೆಶಿಗೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

ಬೆಂಗಳೂರು, (ಅಕ್ಟೋಬರ್ 26): ಚನ್ನಪಟ್ಟಣ, ರಾಮನಗರ(ramanagara), ಕನಕಪುರ, ಮಾಗಡಿ ಹಾಗೂ ಹಾರೋಹಳ್ಳಿ ತಾಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು (Ramanagara District) ಬೆಂಗಳೂರು ದಕ್ಷಿಣ ಜಿಲ್ಲೆ (Bangalore South District) ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ ಎನ್ನುವ ಡಿಕೆ ಶಿವಕುಮಾರ್ (DK Shivakumar) ಹೇಳಿಕೆ ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ (HD Kumaraswamy) ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೇ ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡಿದರೆ ಅಮರಣಾಂತ ಉಪವಾಸ ಸತ್ಯಾಗ್ರಹ ಮಾಡುತ್ತೇನೆ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ರಾಮನಗರ ಜಿಲ್ಲೆಯ ಬಗ್ಗೆ ಡಿಕೆ ಶಿವಕುಮಾರ್​ ಹಾಕಿರುವ ಸವಾಲು ಸ್ವೀಕರಿಸುತ್ತೇನೆ ಎಂದು ಹೇಳಿರುವ ಕುಮಾರಸ್ವಾಮಿ, ನನ್ನ ಆರೋಗ್ಯ ಲೆಕ್ಕಿಸದೇ ಉಪವಾಸ ಸತ್ಯಾಗ್ರಹ ಮಾಡುತ್ತೇನೆ. ರಾಮನಗರ ಜೊತೆ ವ್ಯವಹಾರಿಕ ಸಂಬಂಧವಿಲ್ಲ, ಭಾವನಾತ್ಮಕ ಸಂಬಂಧವಿದೆ. ನಾನು ಹಾಸನದಲ್ಲಿ ಹುಟ್ಟಿದ್ದು, ನನ್ನ ಅಂತ್ಯ ರಾಮನಗರದಲ್ಲಿ. ಹೀಗಾಗಿ ನನ್ನ ಕೊನೆಯ ಉಸಿರು ಇರುವ ತನಕ ರಾಮನಗರಕ್ಕಾಗಿ ಹೋರಾಟ ಮಾಡುತ್ತೇನೆ ಎಂದು ಪ್ರತಿಜ್ಞೆ ಮಾಡಿದರು.

ನಾನು ಹುಟ್ಟಿದ್ದು ಹಾಸನ ಆದರೂ ನನ್ನ ಜೀವನ ಅಂತ್ಯ ಆಗುವುದು ರಾಮನಗರದಲ್ಲೇ. ನನ್ನ ಹೋರಾಟಕ್ಕೆ ರಾಮನಗರದ ಜನರ ಸಹಕಾರ ಕೇಳುತ್ತೇನೆ. ನಮ್ಮ ಸಮಾಜದವರು ಹೇಳಿದ್ರು ಅಂತ ಸುಮ್ಮನೆ ಇದ್ದೆ ಎನ್ನುವ ಡಿಕೆ ಹೇಳಿಕೆ ವಿಚಾರವನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ. ಎಲ್ಲವು ಜನರೇ ತೀರ್ಮಾನ ಮಾಡುತ್ತಾರೆ.ನನ್ನ ತಂದೆಯವರ ಹತ್ತಿರ ಪಂಚೆ, ಜುಬ್ಬಾ ಬಿಟ್ಟರೇ ಬೇರೆ ಏನೂ ಇಲ್ಲ. ನಾವು ಹಣ ಮಾಡಿದ್ದೇವೆ, ಆದರೆ ಲೂಟಿ ಹೊಡೆದು ಹಣ ಮಾಡಿಲ್ಲ ಎಂದು ಡಿಕೆ ಶಿವಕುಮಾರ್​ ವಿರುದ್ಧ ವಾಗ್ದಾಳಿ ನಡೆಸಿದರು.

ರಾಮನಗರ-ಕನಕಪುರ ರಸ್ತೆ ಯಾರು ಮಾಡಿದ್ದು.? ಅಭಿವೃದ್ಧಿ ಅಂದರೆ ಏನು ಅಂತ ತೋರಿಸಿದ್ದು 2006-2007 ಸಮ್ಮಿಶ್ರ ಸರ್ಕಾರದಿಂದ. ವಿಧಾನಸೌಧದಲ್ಲಿ ಚರ್ಚೆ ಮಾಡಲು ನಾನು ಸಿದ್ಧ. ಲಘುವಾಗಿ ಮಾತನಾಡುವುದನ್ನು ನಿಲ್ಲಿಸಿ. ನಾನು ಕರೆಂಟ್ ಬಗ್ಗೆ ಕೇಳಿದ್ದ ಪ್ರಶ್ನೆಗೆ ಯಾರಾದರೂ ಉತ್ತರ ಕೊಟ್ಟಿದ್ದಾರಾ?, ಮೊದಲು ಉತ್ತರ ಕೊಡಿ. ವಿದ್ಯುತ್ ಉತ್ಪಾದನೆ ಯಾಕೆ ಮಾಡಿಲ್ಲ. ನಿಮ್ಮ ಯೋಗ್ಯತೆಗೆ ಕಲ್ಲಿದ್ದಲು ಖರೀದಿ ಮಾಡಿಲ್ಲ. ತಪ್ಪನ್ನ ತಪ್ಪು ಅಂತ ಹೇಳಿದ್ರೆ ವಿಲನ್ನಾ ಎಂದು ಕಿಡಿಕಾರಿದರು.

ಡಿಸಿಎಂ ಅವರು ಟಿಆರ್ ಪಿ ಜಾಸ್ತಿ ಇರುವ ಚಾನಲ್ ನಲ್ಲಿ ಚರ್ಚೆ ಮಾಡುವುದಾಗಿ ಹೇಳಿದ್ದಾರೆ. ಅವರ ಆಹ್ವಾನ ಸ್ವೀಕಾರ ಮಾಡುತ್ತೇನೆ. ನಾನು ಪಲಾಯನ ಮಾಡುವುದಿಲ್ಲ. ನನ್ನ ಬಳಿ ಅಷ್ಟು ಸರಕು ಇದೆ ಎಂದು ಹೇಳುವ ಮೂಲಕ ಡಿಕೆಶಿ ಪಂಥಾಹ್ವಾನವನ್ನು ಕುಮಾರಸ್ವಾಮಿ ಒಪ್ಪಿಕೊಂಡರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ