ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬಂಧನ! ಏನಿದು ಪ್ರಕರಣ?

Twitter
Facebook
LinkedIn
WhatsApp
ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬಂಧನ! ಏನಿದು ಪ್ರಕರಣ?Image 2023 09 09 at 7.39.50 AM

ಅಮರಾವತಿ​ ಸೆ.09: ಸ್ಕಿಲ್​ ಹಗರಣದ ಎ1 ಆಂಧ್ರಪ್ರದೇಶದ  ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರನ್ನು ಆಂಧ್ರದ ನಂದ್ಯಾಲದಲ್ಲಿ ಇಂದು (ಸೆ.09) ರಂದು ನಸುಕಿನ ಜಾವ ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಚಂದ್ರಬಾಬು ನಾಯ್ಡು ಅವರು ಸ್ಕಿಲ್​ ಡೆವಲಪ್​​ಮೆಂಟ್​ ಯೋಜನೆಯಲ್ಲಿ 371 ಕೋಟಿ ರೂ. ಅಕ್ರಮ ಎಸಗಿದ್ದು, ಹಗರಣ ಸಂಬಂಧ ಸೂಕ್ತ ಉತ್ತರ ನೀಡದ ಹಿನ್ನೆಲೆಯಲ್ಲಿ ಹೈಕೋರ್ಟ್ ಸೂಚನೆ ಮೇರೆಗೆ ಬಂಧಿಸಲಾಗಿದೆ.

ಚಂದ್ರಬಾಬು ನಾಯ್ಡು ಅವರ ವಿರುದ್ಧ 58 ಕೋಟಿ ಯೋಜನೆಯ ವೆಚ್ಚವನ್ನು 371 ಕೋಟಿ ರೂ.ಗೆ ಹೆಚ್ಚಿಸಿದ ಆರೋಪ ಕೇಳಿಬಂದಿತ್ತು. ಈ ಹಗರಣ ಸಂಬಂಧ ಸೂಕ್ತ ಉತ್ತರ ನೀಡದ ಹಿನ್ನೆಲೆಯಲ್ಲಿ ಹೈಕೋರ್ಟ್ ಸೂಚನೆ ಮೇರೆಗೆ ಐಪಿಸಿ ಸೆಕ್ಷನ್​ 166, 167, 481, 420, 465, 468, 471, 409, 201, r/w 109, 34 ಮತ್ತು 37ರ ಅಡಿ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿದೆ.

ಇನ್ನು ಸಿಐಡಿ ಅಧಿಕಾರಿಗಳು ಬಂಧಿಸಲು ಆಗಮಿಸಿದ ವೇಳೆ ಚಂದ್ರಬಾಬು ನಾಯ್ಡು ಹೈಡ್ರಾಮಾ ಸೃಷ್ಟಿಸಿದ್ದಾರೆ. ನನ್ನ ಹಕ್ಕನ್ನು ಕಸಿಯುವ ಕೆಲಸ ಆಗಿದೆ. ಎಫ್​ಐಆರ್​ ಮಾಡಿಲ್ಲ, ನೋಟಿಸ್​ ನೀಡದೆ ಬಂಧಿಸಲಾಗಿದೆ ಎಂದು ಅಧಿಕಾರಿಗಳ ಜೊತೆ ವಾಗ್ವಾದ ನಡೆಸಿದ್ದಾರೆ. ಅಲ್ಲದೇ ಸಿಎಂ ಜಗನ್ ಡೌನ್​ ಡೌನ್​, ಪೊಲೀಸ್​ ಡೌನ್​ ಡೌನ್​ ಎಂದು ಬೆಂಬಲಿಗರು ಘೋಷಣೆ ಕೂಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ