ಕಾಂಗ್ರೆಸ್ ಗೆ ರಾಜೀನಾಮೆ ಕೊಟ್ಟಿದ್ದ ಮಾಜಿ ಸಿಎಂ ಇಂದು ಬಿಜೆಪಿ ಸೇರ್ಪಡೆ!!
Twitter
Facebook
LinkedIn
WhatsApp
ನಿನ್ನೆಯಷ್ಟೇ ಕಾಂಗ್ರೆಸ್ ಪಕ್ಷ ತೊರೆದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಇಂದು ಬಿಜೆಪಿ ಸೇರಿದ್ದಾರೆ.ಬಿಜೆಪಿ ನಾಯಕ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಇತರ ಬಿಜೆಪಿ ನಾಯಕರ ಸಮ್ಮುಖದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಗೊಂಡರು.
ಕಾಂಗ್ರೆಸ್ ರಾಜೀನಾಮೆ ನೀಡಿದ ಬೆನ್ನಲ್ಲೇ ಚವಾಣ್ ಬಿಜೆಪಿಗೆ ಸೇರುತ್ತಾರೆ ಎಂಬ ಗುಸು ಗುಸು ಸುದ್ದಿ ಹಬ್ಬಿತ್ತು ಅದರಂತೆ ಇಂದು ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದಾರೆ.
ಮಾಜಿ ಮುಖ್ಯಮಂತ್ರಿ ಚವಾಣ್ ಅವರು ತಮ್ಮ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಪತ್ರವನ್ನು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಅವರಿಗೆ ಕಳುಹಿಸಿದ್ದರು. ಇದರ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಚವಾಣ್ ತಮ್ಮ ಮುಂದಿನ ಹೆಜ್ಜೆಯ ಬಗ್ಗೆ ಒಂದೆರಡು ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದರು ಆದರೆ ಒಂದು ದಿನದ ಬಳಿಕವೇ ಅವರು ಬಿಜೆಪಿ ಸೇರುವ ನಿರ್ಧಾರಕ್ಕೆ ಬಂದಿದ್ದಾರೆ
ವರದಿಗಳ ಪ್ರಕಾರ, ಚವಾಣ್ ಅವರು ಬಿಜೆಪಿ ಅಭ್ಯರ್ಥಿಯಾಗಿ ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ನಿರೀಕ್ಷೆಯಿದೆ ಮತ್ತು ಅವರು ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ. "ಇಂದು ನನ್ನ ಹೊಸ ರಾಜಕೀಯ ವೃತ್ತಿಜೀವನದ ಆರಂಭ" ಎಂದು ಚವಾಣ್ ಇಂದು ಹೇಳಿದರು.