ಗುರುವಾರ, ನವೆಂಬರ್ 21, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Champai Soren: ಬಿಜೆಪಿ ಸೇರಲಿದ್ದಾರೆ ಮಾಜಿ ಸಿಎಂ ಚಂಪೈ ಸೊರೆನ್‌

Twitter
Facebook
LinkedIn
WhatsApp
Champai Soren meets Amit Shah i

ಜಾರ್ಖಂಡ್‌ನ (Jharkhand ) ಮಾಜಿ ಮುಖ್ಯಮಂತ್ರಿ ಮತ್ತು ನಮ್ಮ ದೇಶದ ಪ್ರತಿಷ್ಠಿತ ಆದಿವಾಸಿ ನಾಯಕ, ಚಂಪೈ ಸೊರೇನ್ (Champai Soren) ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಗಿನ ಮಾತುಕತೆ ನಂತರ ಬಿಜೆಪಿ ಸೇರ್ಪಡೆ ದಿನಾಂಕ ಘೋಷಣೆ

ನವದೆಹಲಿ: ಜಾರ್ಖಂಡ್‌ (Jharkhand) ಮಾಜಿ ಸಿಎಂ, ಜಾರ್ಖಂಡ್ ಮುಕ್ತಿ ಮೋರ್ಚಾ (JMM) ನಾಯಕ ಚಂಪೈ ಸೊರೆನ್‌ (Champai Soren) ಆ.30 ರಂದು ಬಿಜೆಪಿ (BJP) ಸೇರಲಿದ್ದಾರೆ.  

ಸೋಮವಾರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಈ ಕುರಿತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಾಹಿತಿ ನೀಡಿದ್ದು, ಆಗಸ್ಟ್​ 30ರಂದು ಸೊರೆನ್ ಬಿಜೆಪಿಗೆ ಸೇರ್ಪಡೆಯಾಗಲಿರುವ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಅವರು ರಾಂಚಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ. ರಾಜಕೀಯ ನಿವೃತ್ತಿ, ಹೊಸ ಪಕ್ಷ ಕಟ್ಟುವುದು ಅಥವಾ ಇನ್ನೊಂದು ಪಕ್ಷಕ್ಕೆ ಸೇರುವುದು ಎಂಬ ಮೂರು ಆಯ್ಕೆಗಳು ನನ್ನ ಮುಂದಿವೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದರು.

ಆಗಸ್ಟ್​ 21ರಂದು ರಾಜಕೀಯ ನಿವೃತ್ತಿ ಪಡೆಯುವುದಿಲ್ಲ, ನಾನು ಹೊಸ ಸಂಘಟನೆ ಬಲಪಡಿಸುತ್ತೇನೆ ಎಂದಿದ್ದರು. ಜನವರಿ 31ರಂದು ಜಾರಿ ನಿರ್ದೇಶನಾಲಯವು ಹೇಮಂತ್ ಸೊರೆನ್​ ಅವರನ್ನು ಬಂಧಿಸಿದ ನಂತರ ಚಂಪೈ ಜಾರ್ಖಂಡ್​ ಮುಖ್ಯಮಮತ್ರಿಯಾಗಿದ್ದರು.

ಪ್ರಸ್ತುತ ಹೇಮಂತ್ ಸೊರೆನ್ ಕ್ಯಾಬಿನೆಟ್‌ನಲ್ಲಿ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ಚಂಪೈ ಅವರು ಇನ್ನೂ ಜೆಎಂಎಂ ಪಕ್ಷ ಮತ್ತು ಸರ್ಕಾರ ಎರಡಕ್ಕೂ ರಾಜೀನಾಮೆ ನೀಡಿಲ್ಲ.

ಶಿವಾಜಿ ಮಹರಾಜ್‌ ಪ್ರತಿಮೆ 1 ವರ್ಷ ಪೂರ್ಣಗೊಳ್ಳುವ ಮುನ್ನವೇ ಕುಸಿತ!

ಮುಂಬೈ: ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ರಾಜ್‌ಕೋಟ್ ಕೋಟೆಯಲ್ಲಿ ಕಳೆದ ವರ್ಷ ಪ್ರಧಾನಿ ಮೋದಿ (PM Modi) ಅವರು ಅನಾವರಣಗೊಳಿಸಿದ್ದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ (Shivaji Maharaj Statue) ಸೋಮವಾರ (ಆ.26) ಕುಸಿದು ಬಿದ್ದಿದೆ. 2023ರ ಡಿಸೆಂಬರ್‌ 4ರಂದು ಭಾರತೀಯ ನೌಕಾಪಡೆಯ ದಿನಾಚರಣೆ ವೇಳೆ ಪ್ರಧಾನಿ ಮೋದಿ ಈ ಭವ್ಯ ಪ್ರತಿಮೆಯನ್ನು ಮೋದಿ ಅನಾವರಣಗೊಳಿಸಿದ್ದರು.

ಮಾಲ್ವಾನ್‌ನ ರಾಜ್‌ಕೋಟ್ ಕೋಟೆಯಲ್ಲಿ ಸೋಮವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಮರಾಠ ರಾಜನ 35 ಅಡಿ ಉದ್ದದ ಪ್ರತಿಮೆ ಕುಸಿದಿದುಬಿದ್ದಿದೆ. ಪೊಲೀಸ್ ಮತ್ತು ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ.

ಈ ಬೆನ್ನಲ್ಲೇ ತಜ್ಞರು ಪ್ರತಿಮೆ ಕುಸಿತಕ್ಕೆ ನಿಖರ ಕಾರಣ ತಿಳಿಸಿದ್ದಾರೆ. ಕಳೆದ ಎರಡ್ಮೂರು ದಿನಗಳಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ, ಬಿರುಗಾಳಿ ಬೀಸುತ್ತಿದೆ. ಇದರಿಂದಾಗಿ ಪ್ರತಿಮೆ ಧ್ವಂಸವಾಗಿದೆ ಎಂದು ಹೇಳಿದ್ದಾರೆ. 

ಕಳೆದ ವರ್ಷ ಪ್ರಧಾನಿ ಮೋದಿ ಪ್ರತಿಮೆ ಅನಾವರಣಗೊಳಿಸಿದ ಬಳಿಕ ಸ್ಥಳೀಯ ಆಡಳಿತಕ್ಕೆ ನಿರ್ವಹಣೆಯ ಹೊಣೆ ವಹಿಸಲಾಗಿತ್ತು. ಸದ್ಯ ಪ್ರತಿಮೆ ಕುಸಿತಕ್ಕೆ ಮಳೆ ಗಾಳಿಯೇ ಕಾರಣವಾ? ಅಥವಾ ಸ್ಥಳೀಯ ಸಂಸ್ಥೆಗಳ ನಿರ್ಲಕ್ಷ್ಯ ಕಾರಣವಾಯ್ತಾ ಅನ್ನೋ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಮೌಲ್ಯಮಾಪನ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿಪಕ್ಷಗಳಿಂದ ತರಾಟೆ:
ಪ್ರತಿಮೆ ಧ್ವಂಸಗೊಂಡ ಬೆನ್ನಲ್ಲೇ‌ ಮಹಾರಾಷ್ಟ್ರ ರಾಜ್ಯ ಸರ್ಕಾರವನ್ನು ವಿಪಕ್ಷಗಳು ತರಾಟೆಗೆ ತೆಗೆದುಕೊಂಡಿವೆ. ಘಟನೆಯ ನಂತರ, ಎನ್‌ಸಿಪಿ (ಎಸ್‌ಪಿ) ಯ ಜಯಂತ್ ಪಾಟೀಲ್, ಶಿವಸೇನಾ (UBT) ಯ ಆದಿತ್ಯ ಠಾಕ್ರೆ ಮತ್ತು ಇತರರು ಸೇರಿದಂತೆ ವಿರೋಧ ಪಕ್ಷಗಳ ನಾಯಕರು ರಾಜ್ಯ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದಾರೆ, ಇದು ಕಳಪೆ ಗುಣಮಟ್ಟದ ಕೆಲಸ ಎಂದು ಆರೋಪಿಸಿದ್ದಾರೆ.

ನಮ್ಮ ಮಹಾರಾಷ್ಟ್ರದ ಆರಾಧ್ಯ ದೈವವಾದ ಛತ್ರಪತಿ ಶಿವಾಜಿ ಮಹಾರಾಜರಿಗೆ ಆದ ಅವಮಾನವನ್ನು ನಾವು ಎಂದಿಗೂ ಸಹಿಸುವುದಿಲ್ಲ. ಚುನಾವಣೆ ಗೆಲ್ಲಲು ಮೋದಿ ಅವರಿಗೆ ಶಿವಾಜಿ ಮಹಾರಾಜರ ಮುಖ ಬೇಕಿತ್ತು. ಅದಕ್ಕಾಗಿ ತರಾತುರಿಯಲ್ಲಿ ಪ್ರತಿಮೆ ಅನಾವರಣಗೊಳಿಸಿದ್ದರು. ಅವರ ದುರಹಂಕಾರದಿಂದಲೇ ಇಂದು ಪ್ರತಿಮೆ ಧ್ವಂಸವಾಗಿದೆ ಎಂದು ಟೀಕಿಸಿದ್ದಾರೆ. 

ವಯನಾಡು ಭೂ ಕುಸಿತ: ಪುನರ್ವಸತಿ ಕಾರ್ಯಕ್ಕೆ ಉತ್ತರ ಪ್ರದೇಶ ಸರ್ಕಾರದಿಂದ 10 ಕೋಟಿ ರೂ. ಮಂಜೂರು

ಲಖನೌ: ಜುಲೈ 30 ರಂದು ಸಂಭವಿಸಿದ ವಿನಾಶಕಾರಿ ಭೂಕುಸಿತದಿಂದ ಹಾನಿಗೊಳಗಾದ ಕೇರಳದ ವಯನಾಡಿನಲ್ಲಿ ಪುನರ್ವಸತಿ ಕಾರ್ಯಕ್ಕಾಗಿ ಉತ್ತರ ಪ್ರದೇಶ ಸರ್ಕಾರ 10 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೋಮವಾರ ಕೇರಳದ ನಾಗರಿಕರು ಮತ್ತು ಸರ್ಕಾರಕ್ಕೆ ತಮ್ಮ ಬೆಂಬಲವನ್ನು ನೀಡಿದ್ದಾರೆ.

ವಯನಾಡಿನಲ್ಲಿ ಪರಿಹಾರ ಮತ್ತು ಪುನರ್ವಸತಿ ಪ್ರಯತ್ನಗಳಲ್ಲಿ ಕೇರಳ ಸರ್ಕಾರಕ್ಕೆ ನೆರವಾಗಲು ಯುಪಿ ಸರ್ಕಾರ 10 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದೆ ಎಂದು ಯೋಗಿ ಆದಿತ್ಯನಾಥ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜುಲೈ 30 ರಂದು ಮೆಪ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು 47.31 ಕಿ.ಮೀ ವ್ಯಾಪ್ತಿಯಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 400ಕ್ಕೂ ಹೆಚ್ಚಿದೆ. ಚೂರಲ್ಮಲಾ, ಮುತಂಗಾ ಮತ್ತು ಮುಂಡಕ್ಕೈ ನಲ್ಲಿ ಅಪಾರ ಪ್ರಮಾಣದಲ್ಲಿ ಆಸ್ತಿ-ಪಾಸ್ತಿ ಜೀವಹಾನಿಯಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ