ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

1 ವರ್ಷದಿಂದ ಜೈಲಿನಲ್ಲೇ ಲಾಕ್ ಆದ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ..!

Twitter
Facebook
LinkedIn
WhatsApp
1 ವರ್ಷದಿಂದ ಜೈಲಿನಲ್ಲೇ ಲಾಕ್ ಆದ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ..!

ನವದೆಹಲಿ: ಈಗಾಗಲೇ ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯವು ಏಪ್ರಿಲ್ 18 ರವರೆಗೆ ವಿಸ್ತರಿಸಿದೆ.

ಅವರನ್ನು ಬಿಡುಗಡೆ ಮಾಡಬೇಕು ಎಂಬ ಒತ್ತಡದ ನಡುವೆಯೂ ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸಲಾಗಿದೆ. ಈ ಹಿಂದೆ ನೀಡಲಾಗಿದ್ದ ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ಮನೀಶ್ ಸಿಸೋಡಿಯಾ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ಬಳಿಕ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ನ್ಯಾಯಾಂಗ ಬಂಧನವನ್ನು ವಿಸ್ತರಿಸಿದ್ದಾರೆ.

ಈ ಪ್ರಕರಣದಲ್ಲಿ ಇತ್ತೀಚೆಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದಿರುವ ಸಹ ಆರೋಪಿ ಸಂಜಯ್ ಸಿಂಗ್ ಸಹ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಮನೀಶ್ ಸಿಸೋಡಿಯಾ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಫೆಬ್ರವರಿ 26, 2023 ರಂದು ಬಂಧಿಸಿತು. ಮಾರ್ಚ್ 9, 2023 ರಂದು ಸಿಬಿಐ ದಾಖಲಿಸಿದ ಎಫ್‌ಐಆರ್ ಆಧಾರದಲ್ಲಿ ಇಡಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಿದೆ. ಮಾಜಿ ಸಚಿವ ಫೆಬ್ರವರಿ 28, 2023 ರಂದು ದೆಹಲಿ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ.

ಈ ವಾರದ ಆರಂಭದಲ್ಲಿ, ಮನೀಶ್ ಸಿಸೋಡಿಯಾ ತನ್ನ ಮೇಲಿನ ಆರೋಪ ಸಾಬೀತು ಮಾಡುವಲ್ಲಿ ಜಾರಿ ನಿರ್ದೇಶನಾಲಯ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ. ತನ್ನ ವಿರುದ್ಧದ ಆರೋಪಗಳು ಇನ್ನೂ ಸಾಬೀತಾಗದ ಕಾರಣ, ಅವರು ಜಾಮೀನು ಪಡೆಯಲು ಅರ್ಹರಾಗಿದ್ದಾರೆ ಎಂದು ಅವರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ದೆಹಲಿ ಅಬಕಾರಿ ನೀತಿಯನ್ನು ಮಾರ್ಪಡಿಸುವಾಗ ಅಕ್ರಮಗಳು ನಡೆದಿವೆ ಎಂದು ಸಿಬಿಐ ಮತ್ತು ಇಡಿ ಆರೋಪಿಸಿದೆ. ನೀತಿಯನ್ನು ಪರವಾನಗಿದಾರರಿಗೆ ಅನುಕೂಲವಾಗುವಂತೆ ವಿಸ್ತರಿಸಲಾಗಿದೆ. ಪರವಾನಗಿ ಶುಲ್ಕವನ್ನು ಮನ್ನಾ ಮಾಡಲಾಗಿದೆ ಅಥವಾ ಕಡಿಮೆ ಮಾಡಲಾಗಿದೆ ಮತ್ತು ಸಕ್ಷಮ ಪ್ರಾಧಿಕಾರದ ಅನುಮೋದನೆಯಿಲ್ಲದೆ ಪರವಾನಗಿಗಳನ್ನು ವಿಸ್ತರಿಸಲಾಗಿದೆ ಎಂಬ ಆರೋಪಗಳಿವೆ.

ಏಪ್ರಿಲ್ 15 ರವರೆಗೆ ತಿಹಾರ್‌ನಲ್ಲಿಯೇ ಇರಲಿದ್ದಾರೆ ಅರವಿಂದ್ ಕೇಜ್ರಿವಾಲ್

ಸೋಮವಾರ, ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ಅರವಿಂದ್ ಕೇಜ್ರಿವಾಲ್ ಅವರ ಕಸ್ಟಡಿಯನ್ನು ಏಪ್ರಿಲ್ 15 ರವರೆಗೆ ವಿಸ್ತರಿಸಿ, ಅವರ ಮುಂದಿನ ವಿಚಾರಣೆಯವರೆಗೆ ತಿಹಾರ್ ಜೈಲಿಗೆ ಕಳುಹಿಸಿದೆ. ಮನೀಶ್ ಸಿಸೋಡಿಯಾ ಅವರಂತೆ, ಕೇಜ್ರಿವಾಲ್ ಅವರು ತಮ್ಮ ಹುದ್ದೆಯಿಂದ ಕೆಳಗಿಳಿಯುವುದಿಲ್ಲ ಮತ್ತು ಜೈಲಿನಿಂದಲೇ ದೆಹಲಿ ಸರ್ಕಾರವನ್ನು ನಡೆಸುವುದನ್ನು ಮುಂದುವರಿಸುವುದಾಗಿ ಹೇಳಿದ್ದಾರೆ.

ರಾಷ್ಟ್ರೀಯ ರಾಜಧಾನಿಯಲ್ಲಿ ತಮ್ಮ ಸರ್ಕಾರವನ್ನು ಉರುಳಿಸಲು ಬಿಜೆಪಿ ನಡೆಸುತ್ತಿರುವ “ರಾಜಕೀಯ ಪಿತೂರಿ” ಇದು. ರಾಜಕೀಯ ಲಾಭಕ್ಕಾಗಿ ಬಿಜೆಪಿ ಇಡಿ ಮತ್ತು ಸಿಬಿಐನಂತಹ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಬಳಸುತ್ತಿದೆ ಎಂದು ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.

ಮಾರ್ಚ್ 28 ರಂದು ದೆಹಲಿ ನ್ಯಾಯಾಲಯವನ್ನುದ್ದೇಶಿಸಿ ಮಾತನಾಡಿದ್ದ ಅವರವಿಂದ್ ಕೇಜ್ರಿವಾಲ್ , ಇಡಿ ತಮ್ಮ ವರದಿಯಲ್ಲಿ ತನ್ನ ವಿರುದ್ಧ ಯಾವುದೇ ದೃಢವಾದ ಆರೋಪಗಳನ್ನು ಮಾಡಿಲ್ಲ. ನನ್ನ ಬಂಧನಕ್ಕೆ ಅವರ ಬಳಿ ಯಾವುದೇ ಆಧಾರವಿಲ್ಲ ಎಂದು ಹೇಳಿದ್ದಾರೆ. ಆದರೆ, ಕೇಜ್ರಿವಾಲ್ ಅವರ ಮನೆಯಿಂದ ವಶಪಡಿಸಿಕೊಂಡ ಮೊಬೈಲ್ ಫೋನ್‌ಗಳನ್ನು ವಿಶ್ಲೇಷಿಸಲು ಅವರ ಕಸ್ಟಡಿಯನ್ನು ವಿಸ್ತರಿಸುವಂತೆ ಇಡಿ ಮನವಿ ಮಾಡಿತ್ತು. ಅಬಕಾರಿ ನೀತಿ ಪ್ರಕರಣದ ಕೆಲವು ಆರೋಪಿಗಳೊಂದಿಗೆ ಅರವಿಂದ್ ಕೇಜ್ರಿವಾಲ್ ಅವರ ಸಂಪರ್ಕವಿದೆ ಎಂದು ಆರೋಪಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ