ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ತಮಿಳುನಾಡು ರಾಜಕೀಯದಲ್ಲಿ ಈ ಬಾರಿ ಕಣಕ್ಕಿಳಿದ ಕರ್ನಾಟಕದ ಮಾಜಿ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು..!

Twitter
Facebook
LinkedIn
WhatsApp
ತಮಿಳುನಾಡು ರಾಜಕೀಯದಲ್ಲಿ ಈ ಬಾರಿ ಕಣಕ್ಕಿಳಿದ ಕರ್ನಾಟಕದ ಮಾಜಿ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು..!

ಲೋಕಸಭೆ ಚುನಾವಣೆಗೆ (Lok Sabha Election) ರಾಷ್ಟ್ರೀಯ ಪಕ್ಷಗಳು ಅಭ್ಯರ್ಥಿಗಳ ಹೆಸರನ್ನು ಪ್ರಕಟವಾಗುತ್ತಿವೆ. ಕಾಂಗ್ರೆಸ್ (Congress)​ ಶನಿವಾರ (ಮಾ.23) ರಂದು ನಾಲ್ಕನೇ ಪಟ್ಟಿ ಘೋಷಣೆ ಮಾಡಿದೆ. ಈ ಪಟ್ಟಿಯಲ್ಲಿ 46 ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ. ಇದರಲ್ಲಿ ಕಾಂಗ್ರೆಸ್​ ಹೈಕಮಾಂಡ್​ ಮಾಜಿ ಐಎಎಸ್​ ಅಧಿಕಾರಿ ಸಸಿಕಾಂತ್​ ಸೆಂಥಿಲ್ (Sasikanth Senthil)​ ಅವರಿಗೂ ಟಿಕೆಟ್​ ನೀಡಿದ್ದು, ತಿರುವಳ್ಳೂರು ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಸಸಿಕಾಂತ್​ ಸೆಂಥಿಲ್ ಅವರು ಕರ್ನಾಟಕದ ದಕ್ಷಿಣ ಕನ್ನಡದಲ್ಲಿ (Dakshin Kannada) ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಿದ್ದರು.

ಸಸಿಕಾಂತ್​ ಸೆಂಥಿಲ್​ ಅವರು ಮೂಲತಃ ತಮಿಳುನಾಡಿನವರು. ಇವರು 2009ನೇ ಬ್ಯಾಚ್​​ನ ಕರ್ನಾಟಕ ಕೇಡರ್​ನ ಐಎಎಸ್ ಅಧಿಕಾರಿಯಾಗಿದ್ದರು. 2019ರಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದಾಗಲೇ ನಾಗರೀಕ ಸೇವೆಗೆ ರಾಜಿನಾಮೆ ನೀಡಿದರು. ಸಸಿಕಾಂತ್​ ಸೆಂಥಿಲ್ ಅವರು ರಾಜಿನಾಮೆ ನೀಡುವಾಗಲೇ ರಾಜಕೀಯಕ್ಕೆ ಬರುವುದಾಗಿ ಘೋಷಣೆ ಮಾಡಿದ್ದರು. ಅದರಂತೆ ಕಾಂಗ್ರೆಸ್​ ಪಕ್ಷವನ್ನು ಸೇರಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಅಭೂತಪೂರ್ವ ಬಹುಮತದೊಂದಿಗೆ ಗೆಲುವು ಸಾಧಿಸುವಲ್ಲಿ ಸಸಿಕಾಂತ್​ ಸೆಂಥಿಲ್​ ಅವರ ಮಹತ್ವದ ಪಾತ್ರವಿದೆ. ಹೌದು ಕಾಂಗ್ರೆಸ್​ ಸೇರಿದ್ದ ಸಸಿಕಾಂತ್​ ಸೆಂಥಿಲ್​ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕ ಕಾಂಗ್ರೆಸ್​ ವಾರ್​ ರೂಂನ ಮುಖ್ಯಸ್ಥರಾಗಿದ್ದರು. ಕಾಂಗ್ರೆಸ್​ನ ಮೇಕೆದಾಟು ಪಾದಯಾತ್ರೆ ಸಂದರ್ಭದಲ್ಲಿಯೂ ಪಕ್ಷದ ಸಾಮಾಜಿಕ ಜಾಲತಾಣಗಳ ಉಸ್ತುವಾರಿಯಾಗಿದ್ದರು. ಅಲ್ಲದೆ ಐದು ಗ್ಯಾರೆಂಟಿ ಯೋಜನೆಗಳ ಹಿಂದೆ ಕೂಡ ಸಸಿಕಾಂತ್​​ ಸೆಂಥಿಲ್​ರ ಪಾತ್ರ ಪ್ರಮುಖವಾಗಿತ್ತು.

ಸಸಿಕಾಂತ್​ಗೂ ಮತ್ತು ಅಣ್ಣಮಲೈಗೂ ಇದೆ ಸಾಮ್ಯತೆ

ಸಸಿಕಾಂತ್ ಸೆಂಥಿಲ್ ಮತ್ತು ಕೆ ಅಣ್ಣಾಮಲೈ ಇಬ್ಬರೂ ಮೂಲತಃ ತಮಿಳುನಾಡಿನವರು ಮತ್ತು ಕರ್ನಾಟಕ ಕೇಡರ್ ಯೂನಿಯನ್ ನಾಗರಿಕ ಸೇವೆಯಿಂದ ಬಂದವರು. ಸಸಿಕಾಂತ್ ಸೆಂಥಿಲ್ ಅವರು 2009ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದರು. ಅಣ್ಣಮಲೈ 2011ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದರು. ಇಬ್ಬರೂ ನಾಗರೀಕ ಸೇವೆಗೆ ತ್ಯಜಿಸಿ ರಾಜಕೀಯ ಪ್ರವೇಶಿಸಿದ್ದಾರೆ. ಇಬ್ಬರು ರಾಜಕೀಯ ಸೈದ್ಧಾಂತಿಕವಾಗಿ ವಿರುದ್ಧವಾಗಿರುತ್ತಾರೆ. ತಿರುವಳ್ಳೂರಿನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸೆಂಥಿಲ್ ಮತ್ತು ಕೊಯಮತ್ತೂರಿನಿಂದ ಬಿಜೆಪಿ ಅಭ್ಯರ್ಥಿಯಾಗಿ ಅಣ್ಣಾಮಲೈ ಸ್ಪರ್ಧಿಸುತ್ತಿದ್ದಾರೆ.

ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ, ಕಾಂಗ್ರೆಸ್​ನಿಂದ ಚುನಾವಣಾ​ ಉಸ್ತುವಾರಿಯಾಗಿ ಸೆಂಥಿಲ್ ಮತ್ತು ಬಿಜೆಪಿಯಿಂದ ಚುನಾವಣಾ ಉಸ್ತುವಾರಿಯಾಗಿ ಅಣ್ಣಾಮಲೈ ಕಾರ್ಯನಿರ್ವಹಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ