ಶನಿವಾರ, ಡಿಸೆಂಬರ್ 21, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅಮೇರಿಕಾದಲ್ಲಿ ಭಾರತೀಯ ಮೂಲದ ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆ..!

Twitter
Facebook
LinkedIn
WhatsApp
ಅಮೇರಿಕಾದಲ್ಲಿ ಭಾರತೀಯ ಮೂಲದ ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆ..!

ಸ್ಯಾನ್‌ ಪ್ರಾನ್ಸಿಸ್ಕೊ: ಅಮೆರಿಕದಲ್ಲಿ ಭಾರತೀಯ ಮೂಲ ಪ್ರಜೆಗಳ ಅಸಹಜ ಮರಣದ (Indians Death in US) ಸರಣಿ ಮುಂದುವರಿದಿದ್ದು, ಕೇರಳ ಮೂಲದ ಟೆಕ್ಕಿಯ (Techie) ಕುಟುಂಬದ (kerala family) ನಾಲ್ಕು ಮಂದಿ ಶವವಾಗಿ ಪತ್ತೆಯಾಗಿದ್ದಾರೆ. ಕ್ಯಾಲಿಫೋರ್ನಿಯಾದ (California) ಸ್ಯಾನ್ ಮಾಟಿಯೊದಲ್ಲಿ ಮನೆಯೊಳಗೆ ಮಂಗಳವಾರ ಇವರ ಶವಗಳು (found dead) ಪತ್ತೆಯಾದವು.

ಮೃತರನ್ನು ಆನಂದ್ ಸುಜಿತ್ ಹೆನ್ರಿ (42), ಅವರ ಪತ್ನಿ ಆಲಿಸ್ ಪ್ರಿಯಾಂಕಾ (40), ಅವರ ಅವಳಿ ಮಕ್ಕಳಾದ ನೋಹ್ ಮತ್ತು ನೀಥಾನ್ (4) ಎಂದು ಗುರುತಿಸಲಾಗಿದೆ. ಸ್ಯಾನ್ ಮಾಟಿಯೊ ಪೊಲೀಸರ ಪ್ರಕಾರ, ಇಬ್ಬರು ಗುಂಡೇಟಿನಿಂದ ಸಾವನ್ನಪ್ಪಿದ್ದಾರೆ. ಇನ್ನಿಬ್ಬರ ಸಾವಿಗೆ ಕಾರಣವನ್ನು ಇನ್ನೂ ನಿರ್ಧರಿಸಲಾಗಿಲ್ಲ. ಪೊಲೀಸರು ಪ್ರಕರಣವನ್ನು ಕೊಲೆ- ಆತ್ಮಹತ್ಯೆ ಎಂದು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇತರ ನೆಲೆಗಳಲ್ಲಿಯೂ ತನಿಖೆ ನಡೆಯುತ್ತಿದೆ.

ಈ ಹಿಂದೆ, ತಲೆನೋವು ಮತ್ತು ವಾಕರಿಕೆ ಎಂದು ಕುಟುಂಬದವರು ದೂರು ನೀಡಿದ್ದರು. ಇದಕ್ಕೆ ಮನೆಯ ಹವಾನಿಯಂತ್ರಣ ಅಥವಾ ಹೀಟರ್‌ ಕಾರಣವಿರಬಹುದು ಎಂದು ಶಂಕಿಸಲಾಗಿದ್ದು, ಇದರಿಂದ ಸೋರಿಕೆಯಾದ ಕಾರ್ಬನ್ ಮಾನಾಕ್ಸೈಡ್ ಅನಿಲದಿಂದ ಸಾವು ಸಂಭವಿಸಿದೆ ಎಂದು ಕುಟುಂಬದ ಸಂಬಂಧಿಕರು ಆರಂಭದಲ್ಲಿ ಶಂಕಿಸಿದ್ದರು. ಆದರೆ, ಗ್ಯಾಸ್ ಸೋರಿಕೆ ಅಥವಾ ಅಸಮರ್ಪಕ ಉಪಕರಣಗಳ ಬಗ್ಗೆ ಯಾವುದೇ ಪುರಾವೆಗಳು ಪೊಲೀಸರಿಗೆ ಕಂಡುಬಂದಿಲ್ಲ.

 

ಆನಂದ್ ಮತ್ತು ಆಲಿಸ್ ಇಬ್ಬರೂ ಐಟಿ ವೃತ್ತಿಪರರಾಗಿದ್ದು, ಕಳೆದ ಒಂಬತ್ತು ವರ್ಷಗಳಿಂದ ಅಮೇರಿಕಾದಲ್ಲಿ ನೆಲೆಸಿದ್ದರು. ಆನಂದ್ ಸಾಫ್ಟ್‌ವೇರ್ ಇಂಜಿನಿಯರ್ ಮತ್ತು ಆಲಿಸ್ ಹಿರಿಯ ವಿಶ್ಲೇಷಕರಾಗಿದ್ದರು. ಅವರು ಎರಡು ವರ್ಷಗಳ ಹಿಂದೆ ನ್ಯೂಜೆರ್ಸಿಯಿಂದ ಸ್ಯಾನ್ ಮಾಟಿಯೊ ಕೌಂಟಿಗೆ ತೆರಳಿದ್ದರು. ದಂಪತಿಗಳು ತಮ್ಮ ನೆರೆಹೊರೆಯವರು ಮತ್ತು ಸಹೋದ್ಯೋಗಿಗಳಿಗೆ ಅಚ್ಚುಮೆಚ್ಚಿನವರಾಗಿದ್ದರು. ದಂಪತಿ ಸ್ನೇಹಪರ, ಪರಿಶ್ರಮಪೂರ್ವಕ ವ್ಯಕ್ತಿತ್ವದವರಾಗಿದ್ದರು ಎಂದು ಸ್ನೇಹಿತರು ತಿಳಿಸಿದ್ದಾರೆ.

ಈ ವಿಚಾರವಾಗಿ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ದೂತಾವಾಸವು ಭಾರತದಲ್ಲಿನ ಕುಟುಂಬದ ಸದಸ್ಯರೊಂದಿಗೆ ಸಂಪರ್ಕದಲ್ಲಿದೆ ಮತ್ತು ಕಾನ್ಸುಲರ್ ಸಹಾಯವನ್ನು ನೀಡುತ್ತಿದೆ. ಅಸಹಜ ಸಾವಿನ ಹಿಂದಿನ ಕಾರಣ ಅಸ್ಪಷ್ಟವಾಗಿದೆ. ಪೊಲೀಸರು ಶವಪರೀಕ್ಷೆ ಮತ್ತು ಫೋರೆನ್ಸಿಕ್ ವಿಶ್ಲೇಷಣೆಯ ಫಲಿತಾಂಶಗಳಿಗಾಗಿ ಕಾಯುತ್ತಿದ್ದಾರೆ. ಪ್ರಕರಣವನ್ನು ಪರಿಹರಿಸಲು ಸಹಾಯ ಮಾಡುವ ಯಾವುದೇ ಮಾಹಿತಿ ಇದ್ದರೆ ಹಂಚಿಕೊಳ್ಳುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಗಳು ಸೇರಿದಂತೆ ಸರಣಿಯಾಗಿ ನಡೆಯುತ್ತಿರುವ ದುರದೃಷ್ಟಕರ ಘಟನೆಗಳ ಸರಣಿಯಲ್ಲಿ ಇದು ಇತ್ತೀಚಿನದು. ಕಳೆದ ವಾರ, ಪರ್ಡ್ಯೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಮೀರ್ ಕಾಮತ್ ವಾರೆನ್ ಕೌಂಟಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಮತ್ತೊಬ್ಬ ಪರ್ಡ್ಯೂ ವಿದ್ಯಾರ್ಥಿ ನೀಲ್ ಆಚಾರ್ಯ ಕಳೆದ ತಿಂಗಳಷ್ಟೇ ಕ್ಯಾಂಪಸ್‌ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಆಚಾರ್ಯ ಅವರು ಕಂಪ್ಯೂಟರ್ ಸೈನ್ಸ್ ಮತ್ತು ಡೇಟಾ ಸೈನ್ಸ್‌ನಲ್ಲಿ ಡ್ಯುಯಲ್ ಪದವಿಯನ್ನು ಪಡೆಯುತ್ತಿದ್ದರು ಮತ್ತು ಪ್ರತಿಷ್ಠಿತ ಜಾನ್ ಮಾರ್ಟಿನ್ಸನ್ ಆನರ್ಸ್ ಕಾಲೇಜಿನ ಭಾಗವಾಗಿದ್ದರು.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist