ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಹಿಳೆಯರ ದೌರ್ಜನ್ಯ ಪ್ರಕರಣ ; ವ್ಯಾಪಕ ಆಕ್ರೋಶದ ನಂತರ ಮುಖ್ಯ ಆರೋಪಿ ಸೇರಿದಂತೆ ನಾಲ್ವರ ಬಂಧನ!

Twitter
Facebook
LinkedIn
WhatsApp
WhatsApp Image 2023 07 21 at 8.00.03 AM

ಇಂಫಾಲ: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ನಗ್ನಗೊಳಿಸಿ ಪರೇಡ್ ಮಾಡಿದ ಪ್ರಕರಣದಲ್ಲಿ ಮತ್ತೋರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ. ಈ ವರೆಗೂ ಪ್ರಕರಣದಲ್ಲಿ ಒಟ್ಟು ನಾಲ್ಕು ಮಂದಿಯನ್ನು ಬಂಧಿಸಲಾಗಿದ್ದು, ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ತೌಬಲ್ ಜಿಲ್ಲೆ ಜಿಲ್ಲೆಯಲ್ಲಿ ಹುಯಿರೆಮ್ ಹೆರದಾಸ್ ಸಿಂಗ್ ಎಂಬಾತನನ್ನು ಬಂಧಿಸಲಾಗಿತ್ತು.

ವೈರಲ್ ಆಗಿದ್ದ ವೀಡಿಯೋದಲ್ಲಿ, ಹಸಿರು ಟೀ ಶರ್ಟ್ ಧರಿಸಿದ್ದ ವ್ಯಕ್ತಿ, ಮಹಿಳೆಯೊಬ್ಬರನ್ನು ಎಳೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ.ಅಪರಾಧ ನಡೆದದ್ದು ಹಾಗೂ ಅದು ಬಹಿರಂಗವಾಗಿದ್ದರ ನಡುವಿನ ಅಂತರ ದೀರ್ಘವಾಗಿದ್ದು, ಪ್ರಕರಣ ದಾಖಲಾಗಿ 70ಕ್ಕೂ ಹೆಚ್ಚು ದಿನಗಳು ಕಳೆದರೂ ಕ್ರಮ ಕೈಗೊಳ್ಳುವಲ್ಲಿ ವಿಫಲರಾದ ಪೊಲೀಸರ ವಿರುದ್ಧ ಜನಾಕ್ರೋಶ ಭುಗಿಲೆದ್ದಿದೆ. 

ಈ ದೌರ್ಜನ್ಯವೇ ಮಹಿಳೆಯರ ಮೇಲಿನ ಕೊನೆಯ ದೌರ್ಜನ್ಯವಾಗಬೇಕು, ನಾವು ನಮ್ಮ ಸಹೋದರಿಯರು, ತಾಯಂದಿರನ್ನು ಗೌರವಿಸಬೇಕು ಎಂದು ಸಿಎಂ ಹೇಳಿದ್ದಾರೆ.ಬಂಧಿತ ಹುಯಿರೆಮ್ ಹೆರದಾಸ್ ಸಿಂಗ್ ಮನೆಯನ್ನು ಸ್ಥಳೀಯರು ಬೆಂಕಿಗೆ ಆಹುತಿ ನೀಡಿದ್ದು, ಮಹಿಳೆಯರ ಮೇಲಿನ ದೌರ್ಜನ್ಯವನ್ನು ಸ್ಥಳೀಯ ಮಹಿಳೆಯರು ಖಂಡಿಸಿದ್ದಾರೆ. ಈ ಘಟನೆಯ ವೀಡಿಯೋ ಸಹ ಈಗ ವೈರಲ್ ಆಗತೊಡಗಿದೆ.

 ವೈರಲ್ ಆಗಿರುವ ವೀಡಿಯೋ ಅತ್ಯಂತ ಖಂಡನೀಯ. ಎಲ್ಲಾ ಮಹಿಳೆಯರನ್ನೂ ಗೌರವಿಸಬೇಕು. ಅದು ಕುಕಿಗಳು, ಮೈಟೀಸ್ ಅಥವಾ ಮುಸ್ಲಿಮರು ಯಾರಾದರೂ ಆಗಿರಲಿ, ಯಾವ ಮಹಿಳೆ ಮೇಲೆ ದೌರ್ಜನ್ಯವಾದರೂ ಅದು ಖಂಡನೀಯ. ಈ ರೀತಿಯ ಘಟನೆಗಳು ಮರುಕಳಿಸದಂತೆ ಸರ್ಕಾರ ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು ಎಂದು ಸ್ಥಳೀಯ ಮಹಿಳೆಯೊಬ್ಬರು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ