ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್; ಮೀನುಗಾರರ ರಕ್ಷಣೆಗೆ ಸಮುದ್ರ ಆಂಬುಲೆನ್ಸ್: ಸಿಎಂ ಘೋಷಣೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಮಂಡನೆ ಮಾಡುತ್ತಿರುವ 15ನೇ ಬಜೆಟ್ ಇದಾಗಿದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಬಜೆಟ್ ಮೇಲಿನ ನಿರೀಕ್ಷೆ, ಕುತೂಹಲಗಳೂ ಹೆಚ್ಚಾಗಿವೆ.
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಣೆ ಮಾಡಿದರು. ಇದರೊಂದಿಗೆ, ಗ್ರಾಮೀಣ ಪತ್ರಕರ್ತರ ದಶಕಗಳ ಕನಸು ನನಸಾಗಿದೆ.
ಮೀನುಗಾರಿಕೆ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ 3 ಸಾವಿರ ಕೋಟಿ ಯೋಜನೆ ಘೋಷಿಸಿದ್ದಾರೆ. ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳುವ ಮೀನುಗಾರರನ್ನು ತುರ್ತು ಸಂದರ್ಭಗಳಲ್ಲಿ ರಕ್ಷಣೆಗೆ ಮಾಡುವುದಕ್ಕಾಗಿ ಅತ್ಯಾಧುನಿಕ ಸಮುದ್ರ ಆಂಬುಲೆನ್ಸ್ ಖರೀದಿಸಲಾಗುವುದು ಎಂದು ಅವರು ಘೋಷಣೆ ಮಾಡಿದ್ದಾರೆ.
ಹೊನ್ನಾವರ ಅಥವಾ ಕಾಸರಗೋಡದಲ್ಲಿ ಮೀನುಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪನೆ ಮಾಡಲಾಗುವುದು. ಭದ್ರಾವತಿಯಲ್ಲಿ ಹೈಟೆಕ್ ಮೀನು ಮಾರುಕಟ್ಟೆ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಘೋಷಣೆ ಮಾಡಿದರು.