ಸೋಮವಾರ, ಮೇ 20, 2024
ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸ್ನೇಹಿತನ ಕಿರುಕುಳ ಯುವಕ ಆತ್ಮಹತ್ಯೆ!

Twitter
Facebook
LinkedIn
WhatsApp
1 2

ಚಿಕ್ಕಬಳ್ಳಾಪುರ, (ಜುಲೈ 17): ಸಾಲಗಾರನ ಕಿರುಕುಳಕ್ಕೆ ಬೇಸತ್ತು ಯುವಕನೋರ್ವ ಡೆತ್​​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಉಡಮಲೊಡು ಗ್ರಾಮದಲ್ಲಿ ನಡೆದಿದೆ.

ಹೆಚ್.ಕೆ.ಪೃಥ್ವಿರಾಜ್(26) ಆತ್ಮಹತ್ಯೆಗೆ ಶರಣಾದ ಯುವಕ. ಮನೆಯಲ್ಲೇ ಫ್ಯಾನ್​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಡ್ಡಿ ಸಮೇತ ಕೈಸಾಲ ವಾಪಸ್ ನೀಡುವಂತೆ ಸ್ನೇಹಿತನ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ. 

ಇನ್ನು ವಿಷಯ ತಿಳಿದು ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದರು. ಡೆತ್​ನೋಟ್​ ಸಹ ಪತ್ತೆಯಾಗಿದ್ದು. ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ- ಆರೋಪಿಗಳಲ್ಲಿ ಓರ್ವ ಬಿಜೆಪಿ ನಾಯಕನ ಮಗ!

ಭೋಪಾಲ್: ಮಧ್ಯ ಪ್ರದೇಶದ (Madhya Pradesh) ದತಿಯಾ (Datia) ಜಿಲ್ಲೆಯಲ್ಲಿ ವಿದ್ಯಾರ್ಥಿನಿಯ (Student) ಮೇಲೆ ಸಾಮೂಹಿಕ ಅತ್ಯಾಚಾರ (Gang Rape) ನಡೆಸಿ, ಆಕೆಯ ತಂಗಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ಪೈಕಿ ಮಧ್ಯಪ್ರದೇಶ ಬಿಜೆಪಿ ನಾಯಕನ (BJP Leader) ಮಗನೂ ಸೇರಿದ್ದಾನೆ ಎಂದು ವರದಿಗಳು ತಿಳಿಸಿವೆ.

ಘಟನೆಯ ಬಳಿಕ ಸಂತ್ರಸ್ತೆ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ (Suicide) ಮಾಡಿಕೊಳ್ಳಲು ಯತ್ನಿಸಿದ್ದು, ಆಕೆಯನ್ನು ಆ ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಗಳೆಲ್ಲರೂ ಉನ್ನಾವೋ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಗಳಾಗಿದ್ದು, ಸಂತ್ರಸ್ತರ ಕುಟುಂಬದವರು ಹಾಗೂ ಸ್ಥಳೀಯರು ಆರೋಪಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಈ ಹಿನ್ನೆಲೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಸಂತ್ರಸ್ತ ವಿದ್ಯಾರ್ಥಿನಿಯರು ಅಲ್ಲದೇ ನಾಲ್ವರು ಆರೋಪಿಗಳು ಸಹ ವಿದ್ಯಾರ್ಥಿಗಳಾಗಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ದತಿಯಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಶರ್ಮಾ ತಿಳಿಸಿದ್ದಾರೆ. ಅಲ್ಲದೇ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಸಂಬಂಧಿತ ಸೆಕ್ಷನ್‌ಗಳು ಮತ್ತು ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆ (POCSO) ಕಾಯ್ದೆಯಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. 

ಅತ್ಯಚಾರಕ್ಕೊಳಗಾದ ವಿದ್ಯಾರ್ಥಿನಿಯ ತಂಗಿ ಘಟನೆಯ ಕುರಿತು ಪೊಲೀಸರಿಗೆ ದೂರು ನೀಡಿದ್ದಾಳೆ. ಆಕೆ ನೀಡಿದ ದೂರಿನಲ್ಲಿ, ನಾನು ಮತ್ತು ನನ್ನ ಅಕ್ಕನನ್ನು ನಾಲ್ವರು ಆರೋಪಿಗಳು ಅಪಹರಿಸಿ ಅವರ ಮನೆಗೆ ಕರೆದೊಯ್ದು ಅಕ್ಕನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದು, ತನ್ನ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿದ್ದಾಳೆ.

ಘಟನೆಯ ಬಳಿಕ ವಿದ್ಯಾರ್ಥಿನಿ ಮತ್ತು ಆಕೆಯ ತಂಗಿ ಮನೆಗೆ ಮರಳಿದ್ದು, ಅಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಬಳಿಕ ಆಕೆಯನ್ನು ನೆರೆಯ ಉತ್ತರ ಪ್ರದೇಶದ (Uttar Pradesh) ಝಾನ್ಸಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ