ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹೊಂದಾಣಿಕೆ ರಾಜಕಾರಣದಿಂದ ಬಿಜೆಪಿಗೆ ಸೋಲು: ಸ್ವ ಪಕ್ಷದ ನಾಯಕರ ವಿರುದ್ಧವೇ ಸಿಟಿ‌ ರವಿ ಆಕ್ರೋಶ

Twitter
Facebook
LinkedIn
WhatsApp
54

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ (BJP) ಹೀನಾಯ ಸೋಲಿಗೆ ಕಾರಣವೇನು ಎಂಬ ಕುರಿತು ಪಕ್ಷದ ನಾಯಕರು ಪರಾಮರ್ಶೆ ಸಭೆ ನಡೆಸಿದ್ದಾರೆ. ಕೆಲವೊಬ್ಬ ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನೂ ಮಾಡಿಕೊಂಡಿದ್ದಾರೆ. ಇವೆಲ್ಲದರ ಮಧ್ಯೆ, ಇದೀಗ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ (CT Ravi) ಸ್ವಪಕ್ಷೀಯರ ವಿರುದ್ಧವೇ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮಲ್ಲೂ ರಾಜಿ ರಾಜಕಾರಣ ಮಾಡಿ ತಪ್ಪು ಮಾಡಿದ್ದಾರೆ. ಕೆಲವರ ರಾಜಿ ರಾಜಕಾರಣದಿಂದ ಬಿಜೆಪಿ ಪಕ್ಷ ಅಧಿಕಾರ ಕಳೆದುಕೊಂಡಿತು. ಹೊಂದಾಣಿ ರಾಜಕಾರಣದಿಂದಲೇ ಬಿಜೆಪಿ ಸೋತಿದೆ ಎಂದು ಹೇಳಿದ್ದಾರೆ.

ಹೊಂದಾಣಿಕೆ ರಾಜಕಾರಣ ಮಾಡಿಕೊಳ್ಳದಿದ್ದರೆ ಇವತ್ತು ಅಧಿಕಾರ ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಸ್ವ ಪಕ್ಷದ ನಾಯಕರ ವಿರುದ್ಧವೇ ಸಿಟಿ‌ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೋಲಿನ ಬಗ್ಗೆ ಆತ್ಮಾವಲೋಕನ ಸಭೆಯಲ್ಲಿ ಪ್ರಸ್ತಾಪಿಸಿದ್ದ ಮಾಜಿ ಸಚಿವ ಎಂಟಿಬಿ ನಾಗರಾಜ್ ಕೂಡ ಸ್ವಪಕ್ಷೀಯರ ಮೇಲೆ ವಾಗ್ದಾಳಿ ನಡೆಸಿದ್ದರು. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆಹ್ವಾನದ ಮೇರೆಗೆ ಬಿಜೆಪಿ ಸೇರಿದ್ದೆ. ಆದರೆ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತಾಯಿತು. ಮಾಜಿ ಸಚಿವ ಡಾ ಕೆ ಸುಧಾಕರ್ ಅವರ ಕಾರಣದಿಂದಲೇ ಚುನಾವಣೆಯಲ್ಲಿ ಸೋಲುವಂತಾಯಿತು ಎಂದು ನಾಗರಾಜ್ ಸಭೆಯಲ್ಲಿ ಪ್ರಸ್ತಾಪಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ