ಸೋಮವಾರ, ಮೇ 20, 2024
ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜೂನ್ 5 ರಿಂದ ರಾಜ್ಯದಲ್ಲಿ ವ್ಯಾಪಕ ಮಳೆ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ

Twitter
Facebook
LinkedIn
WhatsApp
233831489 380003373482147 2412848297956402447 n 11

ರಾಜ್ಯಾದ್ಯಂತ ಮುಂದಿನ ಐದು ದಿನ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ವರುಣಾರ್ಭಟ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಶನಿವಾರದಿಂದ ನಾಲ್ಕು ದಿನ ಸಾಧಾರಣ ಹಾಗೂ ಕೊನೆಯ ದಿನ (ಜೂನ್ 7) ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಶನಿವಾರ ಮತ್ತು ಭಾನುವಾರ ಸಾಧಾರಣ ಮಳೆಯಾಗಲಿದ್ದು, ಜೂನ್5 ರಿಂದ ಜೂನ್7ರವರೆಗೆ ವ್ಯಾಪಕ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಐದೂ ದಿನ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ನಡುವೆ, ಗುರುವಾರ ರಾತ್ರಿಯಿಂದ ಶುಕ್ರವಾರ ಬೆಳಗ್ಗೆವರೆಗೆ ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಪ್ರಮುಖವಾಗಿ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ, ಬೆಳಗಾವಿ ಜಿಲ್ಲೆಯ ಅಥಣಿ, ಮೈಸೂರು ಜಿಲ್ಲೆಯ ಹುಣಸೂರು, ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ತಲಾ 3 ಸೆಂ.ಮೀ. ಮಳೆಯಾಗಿದೆ.


ಹೊಲಕ್ಕೆ ನುಗ್ಗಿದ ನೀರು, ರೈತ ಕಂಗಾಲು
ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಕೆಲ ಹಳ್ಳಗಳಿಗೆ ನಿರ್ಮಿಸಲಾಗುತ್ತಿರುವ ಚೆಕ್‌ಡ್ಯಾಂಗಳ ಕಾಮಗಾರಿ ವಿಳಂಬವಾದ ಹಿನ್ನೆಲೆಯಲ್ಲಿ ಮಳೆ ನೀರು ರೈತರ ಭೂಮಿಗಳಿಗೆ ನುಗ್ಗಿ ಕೃಷಿ ಚಟುವಟಿಕೆಗೆ ಕಂಟಕವಾಗಿದೆ.

ಕೆರೆಯಾದ ಹೊಲ
ಹಿರೇಬೆಂಡಿಗೇರಿ, ಬನ್ನೂರ, ಹಿರೇಮಲ್ಲೂರ, ಗುಂಡೂರ ಮಾರ್ಗವಾಗಿ ವರದಾ ನದಿ ಸೇರುವ ಹಳ್ಳಕ್ಕೆ ಚೆಕ್‌ ಡ್ಯಾಂ ನಿರ್ಮಾಣ ಮಾಡಲಾಗುತ್ತಿದೆ. ಆದರೆ, ಗುತ್ತಿಗೆದಾರರ ವಿಳಂಬ ನೀತಿ ಮತ್ತು ಅವೈಜ್ಞಾನಿಕ ಕಾಮಗಾರಿಯಿಂದಾಗಿ ಅಕ್ಕ-ಪಕ್ಕ ಜಮೀನುಗಳಿಗೆ ಮಳೆ ನೀರು ನುಗ್ಗಿ ಹೊಲಗಳು ಕೆರೆಗಳಂತಾಗುತ್ತಿವೆ. ಮಳೆ ನೀರಿನ ರಭಸಕ್ಕೆ ಹೊಲ-ಗದ್ದೆಗಳ ಒಡ್ಡು ಒಡೆದು ಹಾಳಾಗುತ್ತಿವೆ. ಪರಿಣಾಮ ಕೃಷಿಗೆ ಬಾರದಂತಾಗುತ್ತಿವೆ. ರೈತರ ಗೋಳು ಕೇಳುವರಾರ‍ಯರು ಎನ್ನುವಂತಾಗಿದೆ.

ಇತ್ತ ಹಿರೇಮಲ್ಲೂರು ಗ್ರಾಮದ ಮಾರ್ಗವಾಗಿ ಹರಿಯುವ ಹಳ್ಳಕ್ಕೆ ನಿರ್ಮಿಸುತ್ತಿರುವ ಚೆಕ್‌ ಡ್ಯಾಂ ಕಾಮಗಾರಿ ಕೂಡ ವಿಳಂಬವಾಗಿದೆ. ಕಳೆದ ಬುಧವಾರ (ಮೇ31) ರಂದು ಸುರಿದ ಮಳೆಯಿಂದ ಹಳ್ಳದಲ್ಲಿ ಹರಿಯುವ ನೀರು ಬ್ಯಾರೇಜ್‌ ಗೇಟ್‌ ತೆರೆಯದ್ದರಿಂದ ಪಕ್ಕದ ಜಮೀನುಗಳಿಗೆ ನುಗ್ಗಿ ಒಡ್ಡುಗಳು ಒಡೆದು ಜಮೀನು ಹಾಳಾಗಿದೆ.

ಕ್ರಮಕೈಗೊಳ್ಳುವಂತೆ ಒತ್ತಾಯ
ಜಮೀನು ಹಾಳಾಗಿದ್ದರಿಂದ ಗುತ್ತಿಗೆದಾರರು ಮತ್ತು ಅಧಿಕಾರಿಗಳ ಮೇಲೆ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ತ್ವರಿತವಾಗಿ ಚೆಕ್‌ ಡ್ಯಾಂ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಕಾಮಗಾರಿ ವಿಳಂಬ ಮಾಡುತ್ತಿರುವ ಗುತ್ತಿಗೆದಾರರ ಮೇಲೆ ಕಾನೂನು ಕ್ರಮಕೈಗೊಳ್ಳಬೇಕು ಎಂಬುದು ರೈತರ ಒತ್ತಾಯವಾಗಿದೆ.

ತಿರುವುಗಳಲ್ಲಿ ಚೆಕ್‌ ಡ್ಯಾಂ ನಿರ್ಮಿಸುತ್ತಿದ್ದಾರೆ. ಇದರಿಂದ ಅಕ್ಕ-ಪಕ್ಕದ ಜಮೀನುಗಳಿಗೆ ನೀರು ನುಗ್ಗಿ ಹೊಲ ಹಾಳಾಗುತ್ತಿವೆ. ಡ್ಯಾಂ ಅಕ್ಕ-ಪಕ್ಕದ ಜಮೀನುಗಳಿಗೆ ನೀರು ನುಗ್ಗದಂತೆ ತಡೆಗೋಡೆ ನಿರ್ಮಿಸಿಲ್ಲ. ಮಳೆ ಹಿನ್ನೆಲೆಯಲ್ಲಿ ಗೇಟ್‌ ತೆಗೆಯಲು ಸಾಕಷ್ಟು ಬಾರಿ ಮನವಿ ಮಾಡಿದರೂ ನಿರ್ಲಕ್ಷ್ಯ ಮಾಡಿದ್ದರಿಂದ ಹಳ್ಳದ ನೀರಿಗೆ ಹೊಲದ ಒಡ್ಡು ಕೊಚ್ಚಿ ಹೋಗಿವೆ. ಗುತ್ತಿಗೆದಾರರು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ನೀರು ಸರಾಗವಾಗಿ ಹರಿಯುವಂತೆ ಕ್ರಮಕೈಗೊಳ್ಳಬೇಕು ಎಂದು ರೈತ ಬಸನಗೌಡ ಹುತ್ತನಗೌಡ್ರ ಆಗ್ರಹಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ