ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಶ್ರೀಲಂಕಾದಿಂದ ಭಾರತಕ್ಕೆ ಬಂದು Facebook ಗೆಳೆಯನನ್ನು ಮದುವೆಯಾದ ಯುವತಿ!

Twitter
Facebook
LinkedIn
WhatsApp
ಶ್ರೀಲಂಕಾದಿಂದ ಭಾರತಕ್ಕೆ ಬಂದು Facebook ಗೆಳೆಯನನ್ನು ಮದುವೆಯಾದ ಯುವತಿ!

ಆಂಧ್ರ ಪ್ರದೇಶ: ಪಾಕಿಸ್ತಾನದ ಸೀಮಾ ಹೈದರ್‌, ಭಾರತದ ಅಂಜು.. ಗಡಿದಾಟಿದ ಪ್ರೇಮ ಕಥೆಗಳ ಸುದ್ದಿ ಚರ್ಚೆಯಲ್ಲಿರುವಾಗಲೇ ಅಂಥದ್ದೇ ಮತ್ತೊಂದು ʼಫೇಸ್‌ ಬುಕ್‌ʼ ಲವ್‌ ಸ್ಟೋರಿ ಬೆಳಕಿಗೆ ಬಂದಿದೆ.

ಶ್ರೀಲಂಕಾ ಮೂಲದ 25 ವರ್ಷದ ಯುವತಿ ವಿಕನೇಶ್ವರಿ ಶಿವಕುಮಾರ, ಆಂಧ್ರ ಪ್ರದೇಶದ 28 ವರ್ಷದ ಲಕ್ಷ್ಮಣ್‌ ಎನ್ನುವ ಯುವಕನ ʼಫೇಸ್‌ ಬುಕ್‌ʼ ಪ್ರೇಮ ಕಥೆಯಿದು. ಲಕ್ಷ್ಮಣ್‌ ಹಾಗೂ ವಿಕನೇಶ್ವರಿ ಇಬ್ಬರ ಪರಿಚಯವಾದದ್ದು, 2017 ರಲ್ಲಿ ಫೇಸ್‌ ಬುಕ್‌ ಮೂಲಕ. ಮೊದಲು ಫೇಸ್‌ ಬುಕ್‌ ಮೂಲಕ ಚಾಟಿಂಗ್‌ ಮಾಡಿ, ಸ್ನೇಹಿತರಾದ ಇವರು, ಆ ಬಳಿಕ ಆತ್ಮೀಯರಾದರು. ಇವರ ಆತ್ಮೀಯತೆ ಪ್ರೀತಿಗೆ ತಿರುಗಿತು. ಪರಸ್ಪರ ಪ್ರೀತಿಸುತ್ತಿದ್ದ ಇವರು ಮದುವೆಯಾಗುವ ನಿರ್ಧಾರಕ್ಕೆ ಬಂದಿದ್ದಾರೆ.

ಈ ಕಾರಣದಿಂದ ಶ್ರೀಲಂಕಾದಿಂದ ಆಂಧ್ರಕ್ಕೆ ವಿಕನೇಶ್ವರಿ ಪ್ರವಾಸಿ ವೀಸಾದೊಂದಿಗೆ ಜುಲೈ 8 ರಂದು ಬಂದಿದ್ದಾರೆ. ಇಬ್ಬರ ನಡುವಿನ ಪ್ರೀತಿಯ ವಿಚಾರ ಲಕ್ಷ್ಮಣ್‌ ಅವರ ಕುಟುಂಬಕ್ಕೆ ಮೊದಲೇ ತಿಳಿದಿತ್ತು. ಲಕ್ಷ್ಮಣ್‌ ಅವರ ಕುಟುಂಬದವರ ಸಮ್ಮುಖದಲ್ಲಿ ಜುಲೈ 20 ರಂದು ದೇವಸ್ಥಾನವೊಂದರಲ್ಲಿ ಇಬ್ಬರು ಮದುವೆಯಾಗಿದ್ದಾರೆ.

ಉಡುಪಿ ಪ್ರತಿಭಟನೆಯಲ್ಲಿ ಭಾಗಿಯಾದ ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್‌, ಬೆದರಿಕೆ

ಉಡುಪಿ: ಟಾಯ್ಲೆಟ್ ವಿಡಿಯೋ ಚಿತ್ರೀಕರಣ (Udupi College Video Row) ಘಟನೆಯನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ (Protest) ಭಾಗಿಯಾಗಿ ಹೇಳಿಕೆ ನೀಡಿದ್ದ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶಗಳು ಬಂದಿದೆ.

ಪ್ರತಿಭಟನೆಯ ವೇಳೆ ವಿದ್ಯಾರ್ಥಿನಿ ನೇತ್ರಜ್ಯೋತಿ  ಕಾಲೇಜಿನ ಅವ್ಯವಸ್ಥೆ ವಿರುದ್ಧ ಮಾತನಾಡಿದ್ದರು. ಪ್ರತಿಭಟನೆಯಲ್ಲಿ ಭಾಗಿಯಾದ ನಂತರ ಜುಲೈ 28 ರಂದು ಜಿಗರ್ ಕೋಬ್ರಾ  ಹೆಸರಿನ ಖಾತೆಯಿಂದ ವಿದ್ಯಾರ್ಥಿನಿಯ ಇನ್‌ಸ್ಟಾ ಖಾತೆಗೆ ಭಯಪಡಿಸುವ ರೀತಿಯ ಮೆಸೇಜ್‌ (Threatening Messages) ಬರಲು ಆರಂಭವಾಗಿದೆ.

ಮಾನಸಿಕ ನೆಮ್ಮದಿಗೆ ಭಂಗ ಉಂಟು ಮಾಡಲಾಗಿದೆ ಎಂದು ವಿದ್ಯಾರ್ಥಿನಿ ಹೇಳಿದ ಹಿನ್ನೆಲೆಯಲ್ಲಿ ಈ ಸಂದೇಶದ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಅವರಿಗೆ ಹಿಂದೂ ಸಂಘಟನೆಗಳು ಮಾಹಿತಿ ನೀಡಿದ್ದವು. ಕೇಂದ್ರ ಸಚಿವೆ ಮತ್ತು ಎಸ್‍ಪಿ ಸಮಾಲೋಚನೆ ಬಳಿಕ ಈಗ ಪ್ರಕರಣ ದಾಖಲಾಗಿದೆ.  

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಆರು ತಿಂಗಳ ಕಾಲೇಜಿನ ಡಿವಿಆರ್ ವಶಕ್ಕೆ ಪಡೆದು ಪರಿಶೀಲನೆ ನಡೆಸಲು ಪೊಲೀಸ್‌ ಇಲಾಖೆ ಮುಂದಾಗಿದೆ. ವಿದ್ಯಾರ್ಥಿನಿಯರು ಹಾಗೂ ಪರಿಸರದಲ್ಲಿ ಆಪರೇಟ್ ಆದ ಮೊಬೈಲ್‌ಗಳ ಸಿಡಿಆರ್ ಪರಿಶೀಲನೆ ನಡೆಯುವ ಸಾಧ್ಯತೆಯಿದೆ. ವಿಧಿವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ವಿಡಿಯೋ ಪತ್ತೆಯಾದ ನಂತರ ಸಮಗ್ರ ವಿಚಾರಣೆ ನಡೆಯಲಿದೆ.

 

ಆರೋಪಿತ ವಿದ್ಯಾರ್ಥಿನಿಯರ ಜೊತೆ ಮಾತನಾಡಲು ಹಲವು ಯುವಕರು ಕಾಲೇಜಿಗೆ ಬರುತ್ತಿದ್ದರು. ಇದು ತಮಾಷೆಗೆ ಮಾಡಿದ ವಿಡಿಯೋ ಅಲ್ಲ. ಇದು ಉದ್ದೇಶಪೂರ್ವಕ ಕೃತ್ಯ. ಹೀಗಾಗಿ ಕಾಲೇಜಿನ ಸಿಸಿಟಿವಿಗಳನ್ನು ಪರಿಶೀಲಿಸಬೇಕೆಂದು ಬಿಜೆಪಿ ನಾಯಕರು ಆಗ್ರಹಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist