Fuel Price : ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 2 ರೂ. ಇಳಿಕೆ..!
ಲೋಕಸಭಾ ಚುನಾವಣೆ ದಿನಾಂಕ ಹತ್ತಿರ ಬರುತ್ತಿದ್ದಂತೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ 2 ರೂ. ಕಡಿತಗೊಳಿಸಿದೆ.
ಪರಿಷ್ಕೃತ ದರ ಮಾರ್ಚ್ 15 ಬೆಳಗ್ಗೆ 6 ಗಂಟೆಯಿಂದ ಜಾರಿಯಾಗಲಿದೆ.
ಬೆಲೆ ಇಳಿಕೆಯಿಂದ 58 ಲಕ್ಷ ಸರಕು ವಾಹನ, 6 ಕೋಟಿ ಕಾರುಗಳು ಮತ್ತು 27 ಕೋಟಿ ದ್ವಿಚಕ್ರ ವಾಹನಗಳ ನಿರ್ವಹಣಾ ವೆಚ್ಚವನ್ನು ಕಡಿಮೆ ಮಾಡುತ್ತದೆ ಎಂದು ಪೆಟ್ರೋಲಿಯಂ ಸಚಿವಾಲಯ ತಿಳಿಸಿದೆ.
ಲೋಕಸಭೆ ಚುನಾವಣೆ ಹಾಗೂ ವರ್ಷಾಂತ್ಯದಲ್ಲಿ ಹಲವು ರಾಜ್ಯಗಳಲ್ಲಿ ನಡೆಯುವ ವಿಧಾನಸಭೆ ಚುನಾವಣೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಕಲ ರೀತಿಯಲ್ಲಿ ಸಜ್ಜಾಗುತ್ತಿದ್ದಾರೆ. ಇದರ ಭಾಗವಾಗಿಯೇ ಕೇಂದ್ರ ಸರ್ಕಾರವು ಇತ್ತೀಚೆಗೆ, ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 200 ರೂ. ಇಳಿಸಿತ್ತು. ಆ ಮೂಲಕ ಬಡವರು ಹಾಗೂ ಮಧ್ಯಮ ವರ್ಗದವರ ಹೊರೆಯನ್ನು ಕಡಿಮೆ ಮಾಡಿದೆ. ಈ ಬೆಲೆ ಇಳಿಕೆಯಿಂದ ದ್ರವೀಕೃತ ಪೆಟ್ರೋಲಿಯಂ ಅನಿಲವನ್ನು (ಎಲ್‌ಪಿಜಿ) ಅಡುಗೆ ಇಂಧನವಾಗಿ ಬಳಸುವ ಸುಮಾರು 33 ಕೋಟಿ ಕುಟುಂಬಗಳಿಗೆ ಪ್ರಯೋಜನವಾಗಿದೆ. ಪೆಟ್ರೋಲ್ (Petrol Price Cut) ಸೇರಿ ಹಲವು ಉತ್ಪನ್ನಗಳ ಬೆಲೆಯನ್ನು ಇಳಿಕೆ ಮಾಡುವುದು ಕೇಂದ್ರ ಸರ್ಕಾರದ ಗುರಿಯಾಗಿತ್ತು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ದರ ಇಳಿದಿರುವುದೂ ಪೆಟ್ರೋಲ್, ಡೀಸೆಲ್ ದರ ಇಳಿಸಲು ಪೂರಕ ವಾತಾವರಣ ಸೃಷ್ಟಿಸಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಮತ್ತು ಅನಿಲ ಬೆಲೆಗಳು ಮೃದುವಾಗುತ್ತಿರುವ ಪರಿಣಾಮವು ದೇಶೀಯ ಚಿಲ್ಲರೆ ಮಾರುಕಟ್ಟೆಯ ಮೇಲೂ ಗೋಚರಿಸುತ್ತದೆ. ಗುರುವಾರ ಬೆಳಗ್ಗೆ ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ ಸಿಎನ್‌ಜಿ ಅಗ್ಗವಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸಹ ಇಳಿಮುಖವಾಗಿವೆ. ಇಂದು ಯುಪಿ ಮತ್ತು ಬಿಹಾರದ ಹಲವು ನಗರಗಳಲ್ಲೂ ತೈಲ ಬೆಲೆ ಕುಸಿದಿದೆ. ಏತನ್ಮಧ್ಯೆ, ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಮತ್ತೆ 83 ಡಾಲರ್‌ಗಿಂತ ಕಡಿಮೆಯಾಗಿದೆ. ಭಾರತದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಜೂನ್ 2017 ರ ಮೊದಲು, ಪ್ರತಿ 15 ದಿನಗಳಿಗೊಮ್ಮೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿತ್ತು.
ದೆಹಲಿ ಪೆಟ್ರೋಲ್ ಬೆಲೆ: ಮಾರ್ಚ್ 14 ರ ಹೊತ್ತಿಗೆ, ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.72 ರೂ. ಡೀಸೆಲ್ ಬೆಲೆ ಲೀಟರ್‌ಗೆ 89.62 ರೂ.. ಬೆಂಗಳೂರಿನಲ್ಲಿ ಪೆಟ್ರೋಲ್ 101.94 ರೂ., ಡೀಸೆಲ್ 87.89 ರೂ. ಇದೆ. ತಿರುವನಂತಪುರಂನಲ್ಲಿ ಪೆಟ್ರೋಲ್ 109.73 ರೂ. ಡೀಸೆಲ್ 98.53 ರೂ. ಇದೆ. ಚೆನ್ನೈನಲ್ಲಿ ಪೆಟ್ರೋಲ್ 102.63 ರೂ., ಡೀಸೆಲ್ 94.24 ರೂ. ಇದೆ.
ಕಚ್ಚಾ ತೈಲ ಬೆಲೆ: ಪೆಟ್ರೋಲ್ ಮತ್ತು ಡೀಸೆಲ್ ಉತ್ಪಾದನೆಗೆ ಪ್ರಾಥಮಿಕ ಕಚ್ಚಾ ವಸ್ತು ಕಚ್ಚಾ ತೈಲ, ಮತ್ತು ಅದರ ಬೆಲೆ ನೇರವಾಗಿ ಈ ಇಂಧನಗಳ ಅಂತಿಮ ವೆಚ್ಚದ ಮೇಲೆ ಪ್ರಭಾವ ಬೀರುತ್ತದೆ.
ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ವಿವಿಧ ತೆರಿಗೆಗಳನ್ನು ವಿಧಿಸುತ್ತವೆ. ಈ ತೆರಿಗೆಗಳು ರಾಜ್ಯಗಳಾದ್ಯಂತ ಭಿನ್ನವಾಗಿರಬಹುದು, ಪೆಟ್ರೋಲ್ ಮತ್ತು ಡೀಸೆಲ್‌ನ ಅಂತಿಮ ಬೆಲೆಗಳ ಮೇಲೆ ಗಮನಾರ್ಹ ಪ್ರಭಾವವನ್ನು ಬೀರುತ್ತವೆ.
Oil Marketing Companies (OMCs) have informed that they have revised Petrol and Diesel Prices across the country. New prices would be effective from 15th March 2024, 06:00 AM.
— Ministry of Petroleum and Natural Gas #MoPNG (@PetroleumMin) March 14, 2024
Reduction in petrol and diesel prices will boost consumer spending and reduce operating costs for over… pic.twitter.com/FlUSdtg2Vi