ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Galaxy S23 FE: ಸ್ಯಾಮ್ಸಂಗ್ ಗ್ಯಾಲಕ್ಸಿ S23 ಎಫ್​ಇ ಸ್ಮಾರ್ಟ್​ಫೋನ್ ಅ.4 ರಂದು ಬಿಡುಗಡೆ!

Twitter
Facebook
LinkedIn
WhatsApp
Galaxy S23 FE: ಸ್ಯಾಮ್ಸಂಗ್ ಗ್ಯಾಲಕ್ಸಿ S23 ಎಫ್​ಇ ಸ್ಮಾರ್ಟ್​ಫೋನ್ ಅ.4 ರಂದು ಬಿಡುಗಡೆ!

ಸ್ಯಾಮ್‌ಸಂಗ್ ತನ್ನ ಹೊಸ ಗ್ಯಾಲಕ್ಸಿ ಎಫ್‌ಇ ಸರಣಿಯ ಸ್ಮಾರ್ಟ್​ಫೋನ್ ಬಿಡುಗಡೆಯನ್ನು ಖಚಿತ ಪಡಿಸಿದೆ. ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿರುವ ಸ್ಯಾಮ್​ಸಂಗ್ ಗ್ಯಾಲಕ್ಸಿ S23 ಎಫ್​ಇ (Samsung Galaxy S23 FE) ಸ್ಮಾರ್ಟ್​ಫೋನ್ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸಲಾಗಿದೆ. ಗ್ಯಾಲಕ್ಸಿ S23 FE ಬಗ್ಗೆ ಸ್ಯಾಮ್​ಸಂಗ್ ಕಂಪನಿ ತನ್ನ ಅಧಿಕೃತ X (ಹಿಂದೆ Twitter) ಖಾತೆಯಯಲ್ಲಿ ಟೀಸರ್ ಬಿಡುಗಡೆ ಮಾಡಿದ್ದು, ಇದರಲ್ಲಿ ಅಕ್ಟೋಬರ್ 4 ರಂದು ಈ ಫೋನ್ ಅನಾವರಣಗೊಳ್ಳಲಿದೆ ಎಂದು ಹೇಳಿದೆ.

ಇದರ ಜೊತೆಗೆ, ಅಮೆಜಾನ್ ಇಂಡಿಯಾ ಮುಂಬರುವ ಸ್ಯಾಮ್​ಸಂಗ್ ಗ್ಯಾಲಕ್ಸಿ Tab S9 FE ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸಿದೆ. ಗ್ಯಾಲಕ್ಸಿ S23 FE ಅನಾವರಣಗೊಂಡ ಮರುದಿನ ಅಕ್ಟೋಬರ್ 5 ರಂದು ಟ್ಯಾಬ್ಲೆಟ್ ಅನ್ನು ಬಿಡುಗಡೆಗೊಳಿಸಲು ನಿರ್ಧರಿಸಲಾಗಿದೆ. ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಪ್ರಾರಂಭವಾಗುತ್ತಿದ್ದಂತೆ ಇದು ಮೊದಲ ಸೇಲ್ ಕಾಣುವ ನಿರೀಕ್ಷೆಯಿದೆ.

Galaxy S23 FE: ಸ್ಯಾಮ್ಸಂಗ್ ಗ್ಯಾಲಕ್ಸಿ S23 ಎಫ್​ಇ ಸ್ಮಾರ್ಟ್​ಫೋನ್ ಅ.4 ರಂದು ಬಿಡುಗಡೆ!

ಗ್ಯಾಲಕ್ಸಿ S23 FE ಸ್ಮಾರ್ಟ್​ಫೋನ್​ನ ಫೀಚರ್ಸ್ ಬಗ್ಗೆ ಕಂಪನಿ ಅಧಿಕೃತವಾಗಿ ಬಹಿರಂಗ ಪಡಿಸಿಲ್ಲ. ಆದರೆ, ಮೂಲಗಳಿಂದ ಸೋರಿಕೆಯಾದ ಮಾಹಿತಿ ಇಲ್ಲಿದೆ.

ಬಣ್ಣದ ಆಯ್ಕೆಗಳು: ಡಿ ಆರ್ಕ್ ಪರ್ಪಲ್, ಕಪ್ಪು, ಬಿಳಿ ಮತ್ತು ತಿಳಿ ಹಸಿರು.

ಡಿಸ್ ಪ್ಲೇ: 6.4-ಇಂಚಿನ FHD+ ಡೈನಾಮಿಕ್ AMOLED ಡಿಸ್ ಪ್ಲೇ ಜೊತೆಗೆ 120Hz ರಿಫ್ರೆಶ್ ರೇಟ್ ಮತ್ತು ಪಂಚ್-ಹೋಲ್ ಕಟೌಟ್ ನೀಡಲಾಗಿದೆಯಂತೆ.

ಪ್ರೊಸೆಸರ್: ಈ ಫೋನ್ ಕ್ವಾಲ್ಕಂ ಸ್ನಾಪ್​ಡ್ರಾಗನ್ 8+ Gen 1 ಅಥವಾ ಎಕ್ಸಿನಾಸ್ 2200 ಚಿಪ್‌ಸೆಟ್ ಮೂಲಕ ಕಾರ್ಯನಿರ್ವಹಿಸುತ್ತದೆ.

RAM ಮತ್ತು ಸಂಗ್ರಹಣೆ: 12GB RAM ಮತ್ತು 256GB ವರೆಗೆ ವಿಸ್ತರಿಸಬಹುದಾದ ಸಂಗ್ರಹಣೆ ಆಯ್ಕೆ ಇದೆ.

OS: ಆಂಡ್ರಾಯ್ಡ್ 13-ಆಧಾರಿತ OneUI 5.1 ಕಸ್ಟಮ್ ಸ್ಕಿನ್ ಔಟ್ ಆಫ್ ದಿ ಬಾಕ್ಸ್ ಮೂಲಕ ರನ್ ಆಗುತ್ತದೆ.

ಕ್ಯಾಮೆರಾಗಳು: ಸ್ಯಾಮ್​ಸಂಗ್ ಗ್ಯಾಲಕ್ಸಿ S23 FE ಹಿಂಬದಿ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿರುತ್ತದೆ. ಇದು OIS ಜೊತೆಗೆ 50MP ಪ್ರಾಥಮಿಕ ಸಂವೇದಕ, 8MP ಸಂವೇದಕ ಮತ್ತು 12MP ಟೆಲಿಫೋಟೋ ಲೆನ್ಸ್ ಅನ್ನು ಒಳಗೊಂಡಿರುತ್ತದೆ. ಸೆಲ್ಫಿ ಮತ್ತು ವಿಡಿಯೋ ಚಾಟ್‌ಗಳಿಗಾಗಿ 10MP ಮುಂಭಾಗದ ಕ್ಯಾಮೆರಾ ಇರಬಹುದು.

ಬ್ಯಾಟರಿ: 25W ವೇಗದ ಚಾರ್ಜಿಂಗ್ ಮತ್ತು ವೈರ್‌ಲೆಸ್ ಚಾರ್ಜಿಂಗ್ ಬೆಂಬಲದೊಂದಿಗೆ 4,500mAh ಬ್ಯಾಟರಿ ನೀಡಬಹುದು

ಇತರೆ: ಗ್ಯಾಲಕ್ಸಿ S23 FE 5ಜಿ ಬೆಂಬಲ ಪಡೆದುಕೊಂಡಿದೆ. ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕವನ್ನು ಹೊಂದಿರಬಹುದು.

ಬೆಲೆಗೆ ಸಂಬಂಧಿಸಿದಂತೆ, ಟಿಪ್‌ಸ್ಟರ್ ಅಭಿಷೇಕ್ ಯಾದವ್ ಪ್ರಕಾರ, S23 FE 5G ಫೋನ್​ನ 8GB + 128GB ಮಾದರಿಗೆ ರೂ. 54,999 ಮತ್ತು 8GB + 256GB ಮಾದರಿಗೆ ರೂ. 59,999 ಇರಬಹುದು ಎನ್ನಲಾಗಿದೆ. ಆದರೆ, ಈ ವಿವರಗಳನ್ನು ಸ್ಯಾಮ್‌ಸಂಗ್ ಕಂಫನಿ ಅಧಿಕೃತವಾಗಿ ದೃಢೀಕರಿಸಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ