ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಗಣೇಶ ಚತುರ್ಥಿ ಹಬ್ಬ: ಖಾಸಗಿ ಬಸ್​ಗಳ ಟಿಕೆಟ್ ದರದಲ್ಲಿ ಭಾರೀ ಹೆಚ್ಚಳ!

Twitter
Facebook
LinkedIn
WhatsApp
ಗಣೇಶ ಚತುರ್ಥಿ ಹಬ್ಬ: ಖಾಸಗಿ ಬಸ್​ಗಳ ಟಿಕೆಟ್ ದರದಲ್ಲಿ ಭಾರೀ ಹೆಚ್ಚಳ!

ಬೆಂಗಳೂರು, ಸೆ.16: ಗಣೇಶ ಚತುರ್ಥಿ (Ganesha Chaturthi) ಹಬ್ಬವನ್ನು ವಿಜ್ರಂಭಣೆಯಿಂದ ಆರಚಿಸಲು ಇಡೀ ದೇಶವೇ ಸಜ್ಜಾಗುತ್ತಿದೆ. ಈ ನಡುವೆ ಕರ್ನಾಟಕದಲ್ಲಿ ಖಾಸಗಿ ಬಸ್ (Private Bus)​ ಮಾಲೀಕರು ಟಿಕೆಟ್ ದರಗಳಲ್ಲಿ ಭಾರೀ ಹೆಚ್ಚಳ ಮಾಡಿದ್ದಾರೆ. ಬೆಂಗಳೂರಿನಿಂದ (Bangalore) ಬಳ್ಳಾರಿ, ಶಿವಮೊಗ್ಗ, ಬೆಳಗಾವಿ, ವಿಜಯಪುರ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಿಗೆ ತೆರಳುವ ಬಸ್​ಗಳ ದರ ಹೆಚ್ಚಿಸಲಾಗಿದೆ.

ಪ್ರತಿ ಬಾರಿ ಹಬ್ಬ ಹರಿದಿನಗಳಲ್ಲಿ ಖಾಸಗಿ ಬಸ್​​ಗಳು ಪ್ರಯಾಣಿಕರಿಗೆ ದುಪಟ್ಟು ಹಣ ವಸೂಲಿ ಮಾಡುತ್ತವೆ. ಹೀಗಾಗಿ ದುಪ್ಪಟ್ಟು ಹಣ ಪಡೆಯದಂತೆ ಟಿಕೆಟ್ ಬುಕ್ಕಿಂಗ್ ಕಂಪನಿಗಳಿಗೆ ಸಾರಿಗೆ ಇಲಾಖೆ ಆಯುಕ್ತರು ಎಚ್ಚರಿಕೆ ನೀಡಿದ್ದರು. ಆದರೂ ಗಣೇಶ ಹಬ್ಬ ಸಮೀಪಿಸುತ್ತಿದ್ದಂತೆ ಸಾಮಾನ್ಯ ದಿನಗಳಲ್ಲಿ 500-700 ರೂಪಾಯಿ ಇದ್ದ ಟಿಕೆಟ್ ದರವನ್ನು 1500- 2500 ರೂಪಾಯಿಗೆ ಹೆಚ್ಚಳ ಮಾಡಿದೆ.

ಗಣೇಶ ಹಬ್ಬದ ಹಿಂದಿನ‌ ದಿನ‌ ಊರಿಗೆ ಹೊಗ್ಬೇಕಂದರೆ ಎರಡು-ಮೂರು ಪಟ್ಟು ಹೆಚ್ಚು ಹಣ ಕೊಟ್ಟು ತೆರಳಬೇಕು. ಹೆಚ್ಚು ದರ ಪಡೆಯುತ್ತಿರುವ ಬಸ್ ಮಾಲಿಕರ ಮೇಲೆ ಕ್ರಮ ಕೈಗೊಳ್ಳಲು ಹಿಂದೇಟು ಯಾಕೆ? ಖಾಸಗಿ ಬಸ್​ಗಳ ಅಕ್ರಮಕ್ಕೆ ಸಾಥ್ ನೀಡುತ್ತಿಡುತ್ತಿದೆಯೇ ಸಾರಿಗೆ ಇಲಾಖೆ? ಎಂಬ ಪ್ರಶ್ನೆ ಉದ್ಭವಿಸಿದೆ.

ಖಾಸಗಿ ಬಸ್ ದರ ಹೆಚ್ಚಳ ಏಕೆ?
  • ಸೆಪ್ಟೆಂಬರ್ 18-19 ಗಣೇಶ ಹಬ್ಬ
  • ಸೆಪ್ಟೆಂಬರ್ 17 ಭಾನುವಾರ
  • ಸೆಪ್ಟೆಂಬರ್ 16 ರಂದು ಕೆಲಸ ಮಾಡಿ ಊರಿಗೆ ಹೋಗಲಿರುವ ಸರಕಾರಿ, ಖಾಸಗಿ ಕಂಪನಿ ನೌಕರರು

ಈ ಕಾರಣಕ್ಕೆ ಶನಿವಾರದಿಂದಲ್ಲೇ ಜನ ತಮ್ಮ ತಮ್ಮ ಊರಿಗೆ ತೆರಳಲು ಸಿದ್ಧತೆ ನಡೆಸುತ್ತಿದ್ದಾರೆ. ಇದನ್ನೇ ನೆಪ ಮಾಡಿಕೊಂಡು ಖಾಸಗಿ ಬಸ್ ಟಿಕೆಟ್ ದರಗಳನ್ನು ದುಪ್ಪಟ್ಟು ಹೆಚ್ಚಳ ಮಾಡಿದ್ದಾರೆ.

ಹಬ್ಬ ಹರಿದಿನಗಳಲ್ಲಿ, ವಾರಾಂತ್ಯದ ದಿನಗಳಲ್ಲಿ ಪ್ರಯಾಣಿಕರಿಂದ ಹೆಚ್ಚಿನ ಟಿಕೆಟ್ ದರ ವಸೂಲಿ ಮಾಡುತ್ತಿರುವುದಾಗಿ ಪ್ರಯಾಣಿಕರಿಂದ ದೂರುಗಳು ಬಂದ ಹಿನ್ನೆಲೆ ರಾಜ್ಯ ಸಾರಿಗೆ ಇಲಾಖೆಯಿಂದ ಖಾಸಗಿ ಬಸ್ ಮಾಲೀಕರಿಗೆ, ಆನ್ಲೈನ್ ಟಿಕೆಟ್ ಬುಕ್ಕಿಂಗ್ ಕಂಪನಿಗಳಿಗೆ ಖಡಕ್ ಎಚ್ಚರಿಕೆ ನೀಡಲಾಗಿದೆ.

ಅಲ್ಲದೆ, ಪ್ರಯಾಣಿಕರ ವಾಹನಗಳಲ್ಲಿ ಇತರೆ ಸರಕುಗಳನ್ನು ಅನಧಿಕೃತವಾಗಿ ಸಾಗಿಸದಿರಲು ತಿಳಿಸಲಾಗಿದೆ. ಮುಂದುವರೆದು ಇಂತಹ ಪ್ರಕರಣಗಳು ಕಂಡುಬಂದಲ್ಲಿ ವಾಹನ ಮಾಲೀಕರ, ಆನ್‌ಲೈನ್ ಟಿಕೆಟ್ ನೀಡುವ ವಿತರಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಿ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಆಯುಕ್ತ ಯೋಗೀಶ್ ಎಚ್ಚರಿಕೆ ನೀಡಿದ್ದಾರೆ. ಆದರೆ ಈ ಎಚ್ಚರಿಕೆ ಖಾಲಿ ಹಾಳೆಗಷ್ಟೆ ಸೀಮಿತ ಆಯ್ತಾ ಎಂಬುದೀಗ ಪ್ರಶ್ನೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist