ಗಣೇಶ ಚತುರ್ಥಿಯ ಸರ್ಕಾರಿ ರಜೆಯನ್ನು ಸೆ. 19 ರಂದು ನೀಡುವಂತೆ ಉಸ್ತುವಾರಿ ಸಚಿವ ಸೂಚನೆ!
ಮಂಗಳೂರು, ಸೆಪ್ಟೆಂಬರ್ 14: ದ.ಕ. ಜಿಲ್ಲೆಯಲ್ಲಿ ಗಣೇಶ ಹಬ್ಬ ಆಚರಿಸಲು ಅನುಕೂಲವಾಗುವಂತೆ ಸರ್ಕಾರಿ ರಜೆಯನ್ನು ಸೆಪ್ಟೆಂಬರ್18ರ ಬದಲು ಸೆಪ್ಟೆಂಬರ್ 19ರಂದು ನೀಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿ ದ.ಕ. ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ರಾಜ್ಯ ಮುಖ್ಯ ಕಾರ್ಯದರ್ಶಿಗೆ ಬುಧವಾರ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.
ಕರಾವಳಿಯಲ್ಲಿ ಅದರಲ್ಲೂ ದ.ಕ. ಜಿಲ್ಲೆಯಲ್ಲಿ ಈ ಬಾರಿ ಗಣೇಶ ಹಬ್ಬ ಸೆ. 19ರಂದು ಆಚರಣೆಯಾಗುತ್ತಿದೆ. ಆದರೆ ರಾಜ್ಯ ಸೆಪ್ಟೆಂಬರ್18ರಂದು ಗೌರಿ ಹಬ್ಬಕ್ಕೆ ರಜೆಯನ್ನು ಘೋಷಿಸಿದೆ. ಇದರಿಂದಾಗಿ ಮರುದಿನ ನಡೆಯುವ ಗಣೇಶ ಹಬ್ಬ ಆಚರಣೆಯಿಂದ ಸರ್ಕಾರಿ ನೌಕರರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ವಂಚಿತಗೊಳ್ಳುವಂತಾಗಿತ್ತು.
ಈ ಬಗ್ಗೆ ವಿಧಾನಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಅವರು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗಮನಕ್ಕೆ ತಂದಿದ್ದರು.
ಸಿದ್ಧರಾಮಯ್ಯ ಸರಕಾರ ಭ್ರಷ್ಟರ ಕೂಟ: ನಳಿನ್ ಕುಮಾರ್ ಕಟೀಲ್ ಆರೋಪ..!
ಪುತ್ತೂರು : ರಾಜ್ಯದಲ್ಲಿರುವ ಸಿದ್ಧರಾಮಯ್ಯ ಸರಕಾರ ಭ್ರಷ್ಟರ ಕೂಟವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪ ಮಾಡಿದ್ದಾರೆ.
ಪುತ್ತೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಕಟೀಲ್, ಸರಕಾರದ ಭ್ರಷ್ಟಾಚಾರ ಬಗ್ಗೆ ಹೇಳಿದವರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ.
ಸರಕಾರದ ವಿರುದ್ಧ ಬರೆದ ಮಾಧ್ಯಮಗಳು,ಸಾಮಾಜಿಕ ಜಾಲತಾಣದ ಮೇಲೂ ದಬ್ಬಾಳಿಕೆ ಮಾಡಲಾಗುತ್ತಿದೆ.
ಪರಿಶಿಷ್ಟ ಜಾತಿ, ಪಂಗಡದವರ ಜಾಗ ಕಬಳಿಸಿದ ಸಚಿವ ಸುಧಾಕರ್ ಅವರನ್ನು ರಕ್ಷಿಸುವ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದ ಅವರು ಮುಖ್ಯಮಂತ್ರಿಗಳಿಗೆ ಮಾನವಿದ್ದರೆ ಸಚಿವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ನಮ್ಮ ಸರಕಾರವಿರುವ ಸಚಿವರ ವಿರುದ್ಧ ದೂರು ಬಂದಾಗ ರಾಜೀನಾಮೆ ಕೊಡಿಸಿದ್ದೆವು, ಆದರೆ ಈಗಿನ ಸರಕಾರದ ಎಲ್ಲಾ ಮಂತ್ರಿಗಳ ವಿರುದ್ಧ ಭ್ರಷ್ಟಾಚಾರದ ಆರೋಪವಿದೆ.
ಚೆಲುವರಾಯಸ್ಚಾಮಿ ವಿರುದ್ಧ ಅಧಿಕಾರಿಗಳೇ ಭ್ರಷ್ಟಾಚಾರದ ಆರೋಪ ಹೊರಿಸುತ್ತಿದ್ದಾರೆ.
ಆದರೆ ಸರಕಾರ ಕಣ್ಣುಮುಚ್ಚಿ ಕುಳಿತಿದೆ, ಬರಗಾಲ ಘೋಷಣೆ ಮಾಡಲೂ ಮೀನಮೇಷ ಎಣಿಸುತ್ತಿದೆ. ಕೇವಲ 164 ತಾಲೂಕಿನಲ್ಲಿ ಬರ ಘೋಷಣೆ ಮಾಡಿದೆ.