ಗ್ಯಾಸ್ ತುಂಬಿದ್ದ ಬುಲೆಟ್ ಟ್ಯಾಂಕರ್ ಅಕ್ಸಿಡೆಂಟ್ – ತಪ್ಪಿದ ಅನಾಹುತ
ಬ್ರಹ್ಮಾವರ : ಗ್ಯಾಸ್ ತುಂಬಿದ್ದ ಬುಲೆಟ್ ಟ್ಯಾಂಕರೊಂದು ರಸ್ತೆ ಬದಿ ಕಸಗುಡಿಸುವ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ಬ್ರಹ್ಮಾವರ ಚರ್ಚ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಸಂಜೆ ನಡೆದಿದೆ.
ಮಂಗಳೂರಿನಿಂದ ಕುಂದಾಪುರ ಕಡೆ ಹೋಗುತ್ತಿದ್ದ ಗ್ಯಾಸ್ ತುಂಬಿದ್ದ ಬುಲೆಟ್ ಟ್ಯಾಂಕರ್, ಚಾಲಕನ ನಿಯಂತ್ರಣ ತಪ್ಪಿ ಎದುರಿನಲ್ಲಿದ್ದ ನವಯುಗ ಕಂಪೆನಿಯ ಕಸಗುಡಿಸುವ ವಾಹನಕ್ಕೆ ಡಿಕ್ಕಿಹೊಡೆದಿದೆ. ಬಳಿಕ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಏರಿ ಚರಂಡಿ ಸಮೀಪ ಬಂದು ನಿಂತಿದೆ.
ಎರಡು ಅಡಿ ಮುಂದೆ ಸಾಗುತ್ತಿದ್ದರೆ ಅಲ್ಲೇ ಇದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಮುಂದೆ ಇದ್ದ ಮನೆ ಮೇಲೆ ಬೀಳುವ ಅಪಾಯ ಇತ್ತೆನ್ನಲಾಗಿದೆ. ಈ ದುರಂತ ಸ್ವಲ್ಪದರಲ್ಲೇ ತಪ್ಪಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಬೆಳಗಾವಿ ಅಪಾರ್ಟ್ ಮೆಂಟ್ ನಲ್ಲಿ ಸಿಲಿಂಡರ್ ಸ್ಪೋಟ – ಉಡುಪಿ ಮೂಲದ ಇಬ್ಬರ ಬಲಿ
ಬೆಳಗಾವಿ : ಅಪಾರ್ಟ್ ಮೆಂಟ್ ನಲ್ಲಿ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಉಡುಪಿ ಮೂಲದ ಇಬ್ಬರು ಸಾವನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ನಗರದ ಬಸವನಗಲ್ಲಿಯ ಅಪಾರ್ಟ್ಮೆಂಟ್‌ನಲ್ಲಿ ನಡೆದಿದೆ.
ಮೃತರನ್ನು ಉಡುಪಿ ಮೂಲದ ಕಾಮಾಕ್ಷಿ ಭಟ್ (80), ಹೇಮಂತ್ ಭಟ್ (27) ಎಂದು ಮೃತ ದುರ್ದೈವಿಗಳು.
ಅಪಾರ್ಟ್ಮೆಂಟ್ ಮನೆಯಲ್ಲಿ ಗ್ಯಾಸ್ ಒಲೆ ಹೊತ್ತಿಸುವಾಗ ಅವಘಡ ಸಂಭವಿಸಿತ್ತು. ಲೈಟರ್ ಆನ್ ಮಾಡುತ್ತಿದ್ದಂತೆ ಸಿಲಿಂಡರ್ ಸ್ಫೋಟಗೊಂಡಿತ್ತು. ಘಟನೆಯಲ್ಲಿ ಭಟ್ ಕುಟುಂಬದ ಐವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಗಾಯಾಳುಗಳನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಘಟನೆಯಲ್ಲಿ ಗಾಯಗೊಂಡಿದ್ದ ಐವರ ಪೈಕಿ ಇಬ್ಬರು ಸಾವನ್ನಪ್ಪಿದ್ದು, ಇನ್ನೂ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸದ್ಯ ಗಾಯಾಳುಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.