ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮುಕೇಶ್ ಅಂಬಾನಿಯನ್ನು ಹಿಂದಿಕ್ಕಿ ಭಾರತದ ಮತ್ತು ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ ಎಂಬ ಕೀರ್ತಿಗೆ ಭಾಜನರಾದ ಗೌತಮ್ ಅದಾನಿ..!

Twitter
Facebook
LinkedIn
WhatsApp
ಮುಕೇಶ್ ಅಂಬಾನಿಯನ್ನು ಹಿಂದಿಕ್ಕಿ ಭಾರತದ ಮತ್ತು ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ ಎಂಬ ಕೀರ್ತಿಗೆ ಭಾಜನರಾದ ಗೌತಮ್ ಅದಾನಿ..!

ನವದೆಹಲಿ: ಹಿಂಡನ್ ಬರ್ಗ್ ವರದಿ ಕುರಿತಂತೆ ಕೋರ್ಟ್ ನ ಮಹತ್ವದ ಆದೇಶ ಹೊರಬಿದ್ದ ಬೆನ್ನಲ್ಲೇ ಇದೀಗ ಮತ್ತೆ ಗೌತಮ್‌ ಅದಾನಿ ಭಾರತದ ಮತ್ತು ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಹೌದು.. ಅದಾನಿ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಗೌತಮ್‌ ಅದಾನಿ ಅವರು ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ ಅವರನ್ನು ಹಿಂದಿಕ್ಕಿ ಭಾರತದ ಮತ್ತು ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಬ್ಲೂಮ್‌ಬರ್ಗ್‌ ಬಿಲಿಯನೇರ್ಸ್‌ ಇಂಡೆಕ್ಸ್‌ನಲ್ಲಿ ಹೊರಹೊಮ್ಮಿದ್ದಾರೆ.

ಜಗತ್ತಿನ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ 12ನೇ ಸ್ಥಾನದಲ್ಲಿ ಅದಾನಿ ಇದ್ದು, ರಿಲಯನ್ಸ್ ಸಮೂಹದ ಮುಖ್ಯಸ್ಥ ಅಂಬಾನಿ 13ನೇ ಸ್ಥಾನದಲ್ಲಿದ್ದಾರೆ. ವರದಿಯಲ್ಲಿರುವಂತೆ ಅದಾನಿ ಒಟ್ಟು 97.6 ಬಿಲಿಯನ್‌ ಅಮೆರಿಕನ್‌ ಡಾಲರ್‌ ಸಂಪತ್ತಿನ ಒಡೆಯರಾಗಿದ್ದಾರೆ. ಅತ್ತ ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ ಏಷ್ಯಾದ ಎರಡನೇ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದು ಅವರು ಒಟ್ಟು ಸಂಪತ್ತಿನ ಮೌಲ್ಯ 97 ಬಿಲಿಯನ್‌ ಅಮೆರಿಕನ್‌ ಡಾಲರ್‌ ಆಗಿದೆ ಎಂದು ಹೇಳಲಾಗಿದೆ.

ಅದಾನಿ ಸಂಸ್ಥೆಗಳು ಅವ್ಯವಹಾರ ನಡೆಸಿವೆ ಎಂಬ ಹಿಂಡೆನ್‌ಬರ್ಗ್‌ ವರದಿಯನ್ನಾಧರಿಸಿ ಸಂಸ್ಥೆಯ ವಿರುದ್ಧ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ಬುಧವಾರ ವಜಾಗೊಳಿಸಿದ ನಂತರ ಅದಾನಿ ಷೇರುಗಳ ಬೆಲೆ ಏರಿಕೆ ಕಂಡಿತ್ತು. ಇದಕ್ಕಿಂತ ಒಂದು ದಿನ ಹಿಂದೆ ಅದಾನಿ ಸಂಪತ್ತು ಮೌಲ್ಯ ರೂ. 8.98 ಲಕ್ಷ ಕೋಟಿ ಇದ್ದರೆ ಒಂದೇ ದಿನದಲ್ಲಿ ಅದು ರೂ. 9.37 ಲಕ್ಷ ಕೋಟಿಗೆ ಏರಿಕೆಯಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಒಂದು ದೇಶ, ಒಂದು ಚುನಾವಣೆ – ಸಲಹೆ ನೀಡುವಂತೆ ಜನರಿಗೆ ಸಮಿತಿಯಿಂದ ಮನವಿ

ನವದೆಹಲಿ: ಒಂದು ದೇಶ ಒಂದು ಚುನಾವಣೆ (One Nation, One Election) ಸಂಬಂಧ ಅಸ್ತಿತ್ವದಲ್ಲಿರುವ ಕಾನೂನುಗಳನ್ನು ಆಡಳಿತಾತ್ಮಕ ಚೌಕಟ್ಟಿನಲ್ಲಿ ಸೂಕ್ತ ಬದಲಾವಣೆಗಳನ್ನು ಮಾಡಲು ಸಾರ್ವಜನಿಕರ ಸಲಹೆಯನ್ನು ಆಹ್ವಾನಿಸಲಾಗಿದೆ.

ಒಂದು ದೇಶ ಒಂದು ಚುನಾವಣೆ ಸಂಬಂಧ ನೇಮಕವಾದ ಸಮಿತಿಯ ಧ್ಯಮಗಳಲ್ಲಿ ಜಾಹೀರಾತು ಪ್ರಕಟಸಿದ್ದು ಸಲಹೆ ನೀಡುವಂತೆ ಕೇಳಲಾಗಿದೆ. ಸಾರ್ವಜನಿಕರು ಜ.15 ರ ಒಳಗಡೆ ಸಲಹೆಯನ್ನು ಲಿಖಿತವಾಗಿ ಬರೆದು ಪೋಸ್ಟ್‌ ಮಾಡಬಹುದು ಅಥವಾ sc-hlc@gov.in ಗೆ ಇಮೇಲ್‌ ಮಾಡುವ ಮೂಲಕ ಅಭಿಪ್ರಾಯ ವ್ಯಕ್ತಪಡಿಸಬಹುದು.

ಜನರು ನೀಡಿದ ಎಲ್ಲಾ ಸಲಹೆಯನ್ನು ಸಮಿತಿಯ ಮುಂದೆ ಇಡಲಾಗುತ್ತದೆ ಎಂದು ಜಾಹೀರಾತಿನಲ್ಲಿ ಉಲ್ಲೇಖಿಸಲಾಗಿದೆ. ಸಮಿತಿಯ ಉಲ್ಲೇಖದ ನಿಯಮಗಳ ವಿವರಗಳು ಮತ್ತು ತಜ್ಞರ ಸಂಸ್ಥೆಗಳ ವರದಿಗಳನ್ನು ವೆಬ್‌ಸೈಟ್‌ನಲ್ಲಿ ನೋಡಬಹುದು: www.onoe.gov.in/onoe-reports

ಹಲವಾರು ಅಚ್ಚರಿ ನಿರ್ಧಾರ ಕೈಗೊಂಡಿರುವ ಕೇಂದ್ರ ಸರ್ಕಾರ ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆಯ ಸಾಧಕ, ಬಾಧಕ ಅಧ್ಯಯನ ಮಾಡಿ ವರದಿಯನ್ನು ಸಲ್ಲಿಸಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ (Ram Nath Kovind.) ನೇತೃತ್ವದಲ್ಲಿ ವಿಶೇಷ ಸಮಿತಿಯನ್ನು ರಚಿಸಿದೆ. ಸಮಿತಿಯಲ್ಲಿ ಗೃಹ ಸಚಿವ ಅಮಿತ್ ಶಾ, ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ರಾಜ್ಯಸಭೆಯ ಮಾಜಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್ ಮತ್ತು ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎನ್‌ಕೆ ಸಿಂಗ್, ಲೋಕಸಭೆಯ ಮಾಜಿ ಕಾರ್ಯದರ್ಶಿ ಸುಭಾಷ್ ಸಿ ಕಶ್ಯಪ್, ಹಿರಿಯ ವಕೀಲ ಹರೀಶ್ ಸಾಳ್ವೆ ಮತ್ತು ಮಾಜಿ ಮುಖ್ಯ ವಿಜಿಲೆನ್ಸ್ ಕಮಿಷನರ್ ಸಂಜಯ್ ಕೊಠಾರಿ ಸದಸ್ಯರಾಗಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist