ಗುರುವಾರ, ನವೆಂಬರ್ 30, 2023
ಭಾರತದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ; ಬಿಸಿಸಿಐ ಘೋಷಣೆ!-ಪ್ರಿನ್ಸಿಪಾಲ್‌ ಕಿರುಕುಳಕ ಆರೋಪ ; ಮನನೊಂದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!-ಕುಂದಾಪುರ : ಅಜ್ಜನ ಅಂತ್ಯಕ್ರಿಯೆಗೆ ಬರುತ್ತಿದ್ದ ವೇಳೆ ಬೈಕ್ ಅಪಘಾತವಾಗಿ ಎರಡು ಗಂಟೆಯ ಅಂತರದಲ್ಲಿ ಮೊಮ್ಮಗ ಸಾವು!-ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯ ಯುವಕ - ಯುವತಿ ಕೇರಳದಲ್ಲಿ ಪತ್ತೆ...!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-ಬೈಕ್ ನಲ್ಲಿ ಬಂದು ಗುಂಡು ಹಾರಿಸುತ್ತಿದ್ದವರನ್ನು ಪೊರಕೆ ಹಿಡಿದು ಹೋಡಿಸಿದ ಮಹಿಳೆ ; ಇಲ್ಲಿದೆ ವಿಡಿಯೋ-ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದರ್ಶನಕ್ಕೆಂದು ಬಂದಿದ್ದ ಮಹಿಳೆ ಹೃದಯಾಘಾತದಿಂದ ಸಾವು!-ಗುಲಾಬ್‌ ಜಾಮೂನ್‌ನಲ್ಲಿ ಬಿಳಿ ಹುಳ ; ವಿಡಿಯೋ ವೈರಲ್-ಚೀನಾದಲ್ಲಿ ಇನ್‌‌ಫ್ಲುಯೆನ್ಸಾ ವೈರಸ್ ಭೀತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗಿಲ್‌ ಮತ್ತು ಸೂರ್ಯಕುಮಾರ್ ಬೌಲಿಂಗ್ ; ಕೊಹ್ಲಿ ಹಾಗೂ ರೋಹಿತ್ ಶರ್ಮಾಗೆ ತಲಾ 1 ವಿಕೆಟ್..!

Twitter
Facebook
LinkedIn
WhatsApp
ಗಿಲ್‌ ಮತ್ತು ಸೂರ್ಯಕುಮಾರ್ ಬೌಲಿಂಗ್ ; ಕೊಹ್ಲಿ ಹಾಗೂ ರೋಹಿತ್ ಶರ್ಮಾಗೆ ತಲಾ 1 ವಿಕೆಟ್..!

ಬೆಂಗಳೂರು(ನ.11) ಭಾರತ ಹಾಗೂ ನೆದರ್ಲೆಂಡ್ ನಡುವಿನ ಐಸಿಸಿ ವಿಶ್ವಕಪ್ 2023ರ ಲೀಗ್ ಪಂದ್ಯ ಹಲವು ದಾಖಲೆಗೆ ಸಾಕ್ಷಿಯಾಗಿದೆ. ಈ ಪಂದ್ಯದಲ್ಲಿ ಕೆಲ ಪ್ರಯೋಗಳು ನಡೆದಿದೆ. ಈ ಪೈಕಿ 9 ಮಂದಿ ಬೌಲಿಂಗ್ ಮಾಡಿ ಅಭಿಮಾನಿಗಳ ಹುಚ್ಚೆದ್ದು ಕುಣಿಸಿದ್ದಾರೆ. ಇಷ್ಟೇ ಅಲ್ಲ ವಿಶ್ವಕಪ್ ಟೂರ್ನಿಯಂತ ಪ್ರತಿಷ್ಠಿತ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಾಗೂ ನಾಯಕ ರೋಹಿತ್ ಶರ್ಮಾ ವಿಕೆಟ್ ಕಬಳಿಸಿ ಮಿಂಚಿದ್ದಾರೆ. ನೆದರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್ಸ್ ಒಟ್ಟು 8 ವಿಕೆಟ್ ಕಬಳಿಸಿದ್ದಾರೆ. ಇನ್ನು ವಿರಾಟ್ ಕೊಹ್ಲಿ ಹಾಗೂ ನಾಯಕ ರೋಹಿತ್ ಶರ್ಮಾ ತಲಾ ಒಂದೊಂದು ವಿಕೆಟ್ ಕಬಳಿಸಿ ನೆದರ್ಲೆಂಡ್ ಆಲೌಟ್ ಮಾಡಿದ್ದಾರೆ. 

ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ಬೌಲರ್ ಬಳಕೆ ಮಾಡಿದ ಪಟ್ಟಿಯಲ್ಿ ಇದೀಗ ಭಾರತ ಕೂಡ ಸ್ಥಾನ ಪಡೆದಿದೆ. 1987ರ ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ತಂಡ, ಶ್ರೀಲಂಕಾ ವಿರುದ್ಧ 9 ಬೌಲರ್ ಬಳಕೆ ಮಾಡಿತ್ತು. 1992ರಲ್ಲಿ ನ್ಯೂಜಿಲೆಂಡ್ ತಂಡ ಪಾಕಿಸ್ತಾನ ವಿರುದ್ದ 9 ಬೌಲರ್ ಬಳಕೆ ಮಾಡಿತ್ತು. ಇದೀಗ ನೆದರ್ಲೆಂಡ್ ವಿರುದ್ದ ಭಾರತ ಕೂಡ 9 ಬೌಲರ್ ಬಳಕೆ ಮಾಡಿದೆ. 

ವಿರಾಟ್ ಕೊಹ್ಲಿ 3 ಓವರ್ ಬೌಲಿಂಗ್ ಮಾಡಿ 13 ರನ್ ನೀಡಿ 1 ವಿಕೆಟ್ ಕಬಳಿಸಿದ್ದಾರೆ. ಕೊಹ್ಲಿ ಬೌಲಿಂಗ್ ಎಕಾನಮಿ 4.30. ಇನ್ನು ಶುಭಮನ್ ಗಿಲ್ 2 ಓವರ್ ಬೌಲಿಂಗ್ ಮಾಡಿ 11 ರನ್ ನೀಡಿದ್ದಾರೆ. ಆದರೆ ಯಾವುದೇ ವಿಕೆಟ್ ಕಬಳಿಸಿಲ್ಲ. ಇನ್ನು ಸೂರ್ಯಕುಮಾರ್ ಯಾದವ್ 2 ಓವರ್‌ನಲ್ಲಿ 17 ರನ್ ನೀಡಿ ಕೊಂಚ ದುಬಾರಿಯಾದರು. ಇತ್ತ ನಾಯಕ ರೋಹಿತ್ ಶರ್ಮಾ ಕೇವಲ 5 ಎಸೆತ ಮಾತ್ರ ಬೌಲಿಂಗ್ ಮಾಡಿದ್ದಾರೆ. 5ನೇ ಎಸೆತದಲ್ಲೇ ವಿಕೆಟ್ ಕಬಳಿಸಿ , ನೆದರ್ಲೆಂಡ್ ತಂಡವನ್ನು ಆಲೌಟ್ ಮಾಡಿದ್ದಾರೆ. 

ಇನ್ನು ರವೀಂದ್ರ ಜಡೇಜಾ ವಿಶ್ವಕಪ್ ಆವೃತ್ತಿಯೊಂದರಲ್ಲಿ ಗರಿಷ್ಠ ವಿಕೆಟ್ ಪಡೆದ ಭಾರತದ ಸ್ಪಿನ್ನರ್ ಅನ್ನೋ ದಾಖಲೆ ಬರೆದಿದ್ದಾರೆ. 1996ರ ವಿಶ್ವಕಪ್ ಟೂರ್ನಿಯಲ್ಲಿ ಅನಿಲ್ ಕುಂಬ್ಳೆ 15 ವಿಕೆಟ್ ಕಬಳಿಸಿದ್ದರು. ಇದೀಗ ಜಡೇಜಾ 16 ವಿಕೆಟ್ ಕಬಳಿಸಿ ಹೊಸ ದಾಖಲೆ ಬರೆದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ