ಗುರುವಾರ, ನವೆಂಬರ್ 21, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಶುಂಠಿಗೆ ಕಳೆನಾಶಕ ಸಿಂಪಡಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Twitter
Facebook
LinkedIn
WhatsApp
ಶುಂಠಿಗೆ ಕಳೆನಾಶಕ ಸಿಂಪಡಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

ಹಾಸನ, ಆ.29: ಕಳೆನಾಶಕ ಸಿಂಪಡಣೆ ವೇಳೆ ಮುಂಜಾಗ್ರತಾ ಕ್ರಮ ವಹಿಸದೆ ಯಡವಟ್ಟು ಮಾಡಿಕೊಂಡಿದ್ದು ಅಮಾಯಕ ಯುವಕ ಸಾವನ್ನಪ್ಪಿದ್ದಾನೆ(Death).

ಹಾಸನ(Hassan) ತಾಲೂಕಿನ ಕಾರ್ಲೆ ಗ್ರಾಮದಲ್ಲಿ ಕಿಡ್ನಿ, ಲಿವರ್, ಶ್ವಾಸಕೋಶ ನಿಷ್ಕ್ರಿಯದಿಂದ ಕೀರ್ತಿ(23) ಎಂಬ ಯುವಕ ಮೃತಪಟ್ಟಿದ್ದಾನೆ. ಕೀರ್ತಿ, ಸತತ 1 ವಾರ ಕಾಲ ಶುಂಠಿಗೆ(Ginger) ಕಳೆನಾಶಕ ಸಿಂಪಡಿಸಿದ್ದ. ಬಳಿಕ ದಿಢೀರನೆ ವಾಂತಿ, ಸುಸ್ತಿನಿಂದ ಬಳಲಿ ಆಸ್ಪತ್ರೆಗೆ ದಾಖಲಾಗಿದ್ದ.

ಆಸ್ಪತ್ರೆಗೆ ದಾಖಲಾಗಿ 4 ದಿನಗಳ ಬಳಿಕ ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದಾನೆ. ರಕ್ತದ ಪರೀಕ್ಷೆ ವೇಳೆ ಕೀರ್ತಿ ದೇಹದಲ್ಲಿ ವಿಷ ಇರೋದು ದೃಢವಾಗಿದೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಟೋಲ್ ಗೇಟ್​ ಸಿಬ್ಬಂದಿ ಜೊತೆ ವಾಗ್ವಾದ

ಉಡುಪಿಯ ಹೆಜಮಾಡಿ ಟೋಲ್ ಗೇಟ್​ನಲ್ಲಿ ಮಾರಾಮಾರಿಯಾಗಿದೆ. ಬೆಂಗಳೂರಿನಿಂದ ಬಂದಿದ್ದ ಯುವಕರ ತಂಡ ಮತ್ತು ಸಿಬ್ಬಂದಿ ನಡುವೆ ಮಾರಾಮಾರಿಯಾಗಿದೆ. ಬೆಂಗಳೂರಿನ ಯುವಕರು ಫಾಸ್ಟ್ ಟ್ಯಾಗ್ ಇಲ್ಲದ ಕಾರಿನಲ್ಲಿ ಬಂದಿದ್ದರು. ಉಡುಪಿ ಮತ್ತು ಮಂಗಳೂರು ಗಡಿಭಾಗದಲ್ಲಿರುವ ಹೆಜಮಾಡಿ ಟೋಲ್ ಬಳಿ ಗೇಟ್ ತೆಗೆದು ಕಾರ್ ಪಾಸ್ ಮಾಡಿದ್ದರು. 

ಈ ವೇಳೆ ಟೋಲ್ ಸಿಬ್ಬಂದಿ ದುರಹಂಕಾರದಿಂದ ವರ್ತಿಸಿ, ರೌಡಿಗಳಂತೆ ಮುಗಿಬಿದ್ದಿದ್ದಾರೆ. ಸಿಬ್ಬಂದಿ ವರ್ತನೆಯಿಂದ ಆಕ್ರೋಶಗೊಂಡ ಯುವಕರ ತಂಡ ಜಗಳಕ್ಕೆ ಮುಂದಾಗಿದ್ದು ಟೋಲ್ ಸಿಬ್ಬಂದಿ ಮತ್ತು ಯುವಕರ ನಡುವೆ ವಾಗ್ವಾದ ನಡೆದಿದೆ. ಬಳಿಕ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಹೀಗೆ ಜಗಳದಿಂದಾಗಿ ಕೆಲ ಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ