ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

20 ಕೋಟಿ ಕೊಡಿ, ಇಲ್ಲದಿದ್ದರೆ ನಿಮ್ಮನ್ನು ಕೊಲ್ಲುತ್ತೇವೆ ; ಮುಕೇಶ್ ಅಂಬಾನಿಗೆ ಬೆದರಿಕೆ - ದೂರು ದಾಖಲು!

Twitter
Facebook
LinkedIn
WhatsApp
20 ಕೋಟಿ ಕೊಡಿ, ಇಲ್ಲದಿದ್ದರೆ ನಿಮ್ಮನ್ನು ಕೊಲ್ಲುತ್ತೇವೆ ; ಮುಕೇಶ್ ಅಂಬಾನಿಗೆ ಬೆದರಿಕೆ - ದೂರು ದಾಖಲು!

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ (Reliance Industries Chairman Mukesh Ambani) ಅವರಿಗೆ ಕೊಲೆ ಬೆದರಿಕೆಯೊಂದು (Threat) ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇಮೇಲ್ ಮೂಲಕ ಬೆದರಿಕೆ ಹಾಕಿರುವ ವ್ಯಕ್ತಿ, 20 ಕೋಟಿ ಕೊಡಬೇಕು ಎಂಬುದಾಗಿ ಬೇಡಿಕೆ ಇಟ್ಟಿದ್ದಾನೆ. ನೀವು ನಮಗೆ 20 ಕೋಟಿ ರೂಪಾಯಿ ನೀಡದಿದ್ದರೆ, ನಾವು ನಿಮ್ಮನ್ನು ಕೊಲ್ಲುತ್ತೇವೆ. ನಾವು ಭಾರತದಲ್ಲಿ ಅತ್ಯುತ್ತಮ ಶೂಟರ್ ಗಳನ್ನು ಹೊಂದಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾನೆ.

ಅಕ್ಟೋಬರ್ 27 ರಂದು ಶಾದಾಬ್ ಖಾನ್ ಎಂಬ ಹೆಸರಿನಿಂದ ಈ ಬೆದರಿಕೆ ಮೇಲ್ ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸದ್ಯ ಅಂಬಾನಿ ನಿವಾಸ ಆಂಟಿಲಿಯಾದಲ್ಲಿ ಭದ್ರತಾ ಅಧಿಕಾರಿಗಳ ಗಮನಕ್ಕೆ ಬಂದ ನಂತರ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ಸದ್ಯ ತನಿಖೆ ಮುಂದುವರಿದಿದೆ.

ಕಳೆದ ವರ್ಷ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರನ್ನು ಗುರಿಯಾಗಿಸಿಕೊಂಡು ಅನಾಮಧೇಯ ಕರೆಗಳನ್ನು ಮಾಡಿದ್ದಕ್ಕಾಗಿ ಬಿಹಾರದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದರು. ದಕ್ಷಿಣ ಮುಂಬೈನಲ್ಲಿರುವ ಅಂಬಾನಿ ಕುಟುಂಬದ ನಿವಾಸ ಆಂಟಿಲಿಯಾದ ಜೊತೆಗೆ ಎಚ್‍ಎನ್ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯನ್ನು ಸ್ಫೋಟಿಸುವುದಾಗಿ ಬೆದರಿಕೆ ಕರೆ ಬಂದಿತ್ತು.

ಎದೆ, ತಲೆ ಭಾಗಕ್ಕೆ ತುಳಿದ ಆನೆ- ಪಶ್ಚಿಮ ಬಂಗಾಳದ ಕಾರ್ಮಿಕ ಸಾವು

ಹಾಸನ: ಕಾಡಾನೆ ದಾಳಿಗೆ (Elephant Attack) ಕೂಲಿ ಕಾರ್ಮಿಕ ಸಾವಿಗೀಡಾದ ಘಟನೆ ಬೇಲೂರಿನ ಅಂಕಿಹಳ್ಳಿ ಎಂಬಲ್ಲಿ ನಡೆದಿದೆ.

ಮೃತನನ್ನು ಪಶ್ಚಿಮ ಬಂಗಾಳದ (West Bengal) ದೀಪಕ್ ರಾಯ್ ಎಂದು ಗುರುತಿಸಲಾಗಿದೆ. ಮೃತನ ಕುಟುಂಬಸ್ಥರು ಪಶ್ಚಿಮ ಬಂಗಾಳದಿಂದ ಆಗಮಿಸಬೇಕಿದೆ. ಇದರಿಂದ ಆತನ ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಆಸ್ಪತ್ರೆಯ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಮಾಡಲಾಗಿದೆ.

ದಿನಸಿ ತರಲು ಅಂಗಡಿಗೆ ತೆರಳುತ್ತಿದ್ದ ವೇಳೆ ಆನೆ ಏಕಾಏಕಿ ದಾಳಿ ನಡೆಸಿತ್ತು. ಈ ವೇಳೆ ಎದೆ ಹಾಗೂ ತಲೆ ಭಾಗವನ್ನು ಆನೆ ತುಳಿದಿತ್ತು. ಇದರಿಂದ ಆತ ಗಂಭೀರವಾಗಿ ಗಾಯಗೊಂಡಿದ್ದ. ಆತನನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ.

ನಾಲ್ಕು ದಿನಗಳ ಹಿಂದೆ ಸಹ ಕಾಡಾನೆಯೊಂದು ಕಾರನ್ನು ಅಡ್ಡ ಹಾಕಿ ಅದರಲ್ಲಿದ್ದ ವಿದ್ಯಾರ್ಥಿನಿಯನ್ನು ಹೊರಗೆಳೆದು ತುಳಿದಿತ್ತು. ಇದರಿಂದ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದಳು. ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಸರ್ಕಾರ ಹಾಗೂ ಅರಣ್ಯ ಇಲಾಖೆ (Forest Department) ಅಧಿಕಾರಿಗಳು ಮುಂದಾಗಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ