ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Glenn Maxwell : ಮ್ಯಾಕ್ಸ್‌ವೆಲ್‌ ಡಬಲ್ ಸೆಂಚುರಿ, ವಿಶ್ವಕಪ್‌ನಲ್ಲಿ ಎಂದೂ ಕಂಡರಿಯದ ಆಟ - ಗೆದ್ದು ಸೋತ ಅಫ್ಘಾನಿಸ್ತಾನ!

Twitter
Facebook
LinkedIn
WhatsApp
Glenn Maxwell double century, a game never seen in a World Cup

Glenn Maxwell : ವಿಶ್ವಕಪ್‌ನಲ್ಲಿ ಎಂದೂ ಕಂಡರಿಯದ ಆಟ… ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಗ್ಲೆನ್​ ಮ್ಯಾಕ್ಸ್​ವೆಲ್ (Glenn Maxwell) ಅವರ ಕೆಚ್ಚೆದೆಯ ಹೋರಾಟದಿಂದ ಆಸ್ಟ್ರೇಲಿಯಾ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನ್ ತಂಡದ ನಾಯಕ ಹಶ್ಮತ್ ಶಾಹಿದಿ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ಪರ ಆರಂಭಿಕ ಆಟಗಾರ ಇಬ್ರಾಹಿಂ ಝದ್ರಾನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ರಹಮಾನುಲ್ಲಾ ಗುರ್ಬಾಝ್ (21) ಔಟ್ ಆದ ಬಳಿಕ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ್ದ ಝದ್ರಾನ್ ಒಂದೊಂದು ರನ್ ಕಲೆಹಾಕುತ್ತಾ ಸಾಗಿದರು.

ಮತ್ತೊಂದೆಡೆ ರಹಮತ್ ಶಾ 44 ಎಸೆತಗಳಲ್ಲಿ 30 ರನ್ ಬಾರಿಸಿ ಔಟಾದರು. ಇನ್ನು ನಾಯಕ ಹಶ್ಮತ್ ಶಾಹಿದಿ 26 ರನ್​ಗಳ ಕೊಡುಗೆ ನೀಡಿ ನಿರ್ಗಮಿಸಿದರು. ಇದಾಗ್ಯೂ ಇಬ್ರಾಹಿಂ ಝದ್ರಾನ್ ಮಾತ್ರ ಆಸೀಸ್ ಬೌಲರ್​ಗಳನ್ನು ದಿಟ್ಟವಾಗಿ ಎದುರಿಸಿದರು. ಪರಿಣಾಮ 131 ಎಸೆತಗಳಲ್ಲಿ ಇಬ್ರಾಹಿಂ ಝದ್ರಾನ್ ಬ್ಯಾಟ್​ನಿಂದ ಶತಕ ಮೂಡಿಬಂತು.

ಶತಕದ ಬಳಿಕ ಬಿರುಸಿನ ಬ್ಯಾಟಿಂಗ್​ ಮುಂದುವರೆಸಿದ ಝದ್ರಾನ್​ಗೆ ರಶೀದ್ ಖಾನ್ ಉತ್ತಮ ಸಾಥ್ ನೀಡಿದರು. ಅದರಲ್ಲೂ ಅಂತಿಮ ಓವರ್​ಗಳಲ್ಲಿ ಅಬ್ಬರಿಸಿದ ರಶೀದ್ ಖಾನ್ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು.

ಕೇವಲ 18 ಎಸೆತಗಳಲ್ಲಿ ರಶೀದ್ ಖಾನ್ ಅಜೇಯ 35 ರನ್​ಗಳಿಸಿದರೆ, ಇಬ್ರಾಹಿಂ ಝದ್ರಾನ್ 143 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ ಅಜೇಯ 129 ರನ್ ಬಾರಿಸಿದರು. ಪರಿಣಾಮ 50 ಓವರ್​ಗಳಲ್ಲಿ ಅಫ್ಘಾನಿಸ್ತಾನ್ ತಂಡದ ಮೊತ್ತ 5 ವಿಕೆಟ್ ನಷ್ಟಕ್ಕೆ 291 ಕ್ಕೆ ಬಂದು ನಿಂತಿತು.

ಈ ಸ್ಪರ್ಧಾತ್ಮಕ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಟ್ರಾವಿಸ್ ಹೆಡ್​ರನ್ನು ಶೂನ್ಯಕ್ಕೆ ಔಟ್ ಮಾಡುವಲ್ಲಿ ನವೀನ್ ಉಲ್ ಹಕ್ ಯಶಸ್ವಿಯಾದರು. ಇದರ ಬೆನ್ನಲ್ಲೇ ಮಿಚೆಲ್ ಮಾರ್ಷ್ (24) ಕೂಡ ವಿಕೆಟ್ ಒಪ್ಪಿಸಿದರು.

ಇನ್ನು ಡೇವಿಡ್ ವಾರ್ನರ್ ಕೇವಲ 18 ರನ್​ಗಳಿಸಲಷ್ಟೇ ಶಕ್ತರಾದರು. ವಾರ್ನರ್ ಬೆನ್ನಲ್ಲೇ ಜೋಶ್ ಇಂಗ್ಲಿಸ್ (0) ಅಝ್ಮತ್ ಒಮರ್​ಝಾಹಿ ಎಸೆತದಲ್ಲಿ ಕ್ಯಾಚ್ ನೀಡಿದರು. ಈ ಹಂತದಲ್ಲಿ ಜೊತೆಯಾದ ಮಾರ್ನಸ್ ಲಾಬುಶೇನ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದರು.

ಆದರೆ ತಂಡದ ಮೊತ್ತ 69 ರನ್ ಆಗಿದ್ದ ವೇಳೆ ರನೌಟ್ ಆಗುವ ಮೂಲಕ ಮಾರ್ನಸ್ ಲಾಬುಶೇನ್ (14) ನಿರ್ಗಮಿಸಿದರು. ಇನ್ನು ಮಾರ್ಕಸ್ ಸ್ಟೋಯಿನಿಸ್ (6) ಹಾಗೂ ಮಿಚೆಲ್ ಮಾರ್ಷ್ (3) ಬಂದ ವೇಗದಲ್ಲೇ ಹಿಂತಿರುಗಿದರು. ಇದಾಗ್ಯೂ ಒಂದೆಡೆ ಗ್ಲೆನ್ ಮ್ಯಾಕ್ಸ್​ವೆಲ್ ಕ್ರೀಸ್ ಕಚ್ಚಿ ನಿಂತಿದ್ದರು. ಅಫ್ಘಾನ್ ಬೌಲರ್​ಗಳನ್ನು ಆತ್ಮ ವಿಶ್ವಾಸದಿಂದಲೇ ಎದುರಿಸಿದ ಮ್ಯಾಕ್ಸ್​ವೆಲ್ 51 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಲ್ಲದೆ ಅರ್ಧಶತಕದ ಬಳಿಕ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದರು.

ಪರಿಣಾಮ 76 ಎಸೆತಗಳಲ್ಲಿ ಶತಕ ಪೂರೈಸಿದ ಮ್ಯಾಕ್ಸ್​ವೆಲ್ ಬ್ಯಾಟ್ ಮೇಲೆತ್ತಿದರು. ಅಷ್ಟೇ ಅಲ್ಲದೆ ಪ್ಯಾಟ್ ಕಮಿನ್ಸ್ ಜೊತೆಗೂಡಿ 8ನೇ ವಿಕೆಟ್​ಗೆ 150 ರನ್​ಗಳ ಜೊತೆಯಾಟವಾಡಿದರು. ಇದರ ನಡುವೆ ಬೆನ್ನು ನೋವಿಗೆ ಒಳಗಾದ ಮ್ಯಾಕ್ಸಿ ನೋವಿನೊಂದಿಗೆ ಕೆಚ್ಚೆದೆಯ ಹೋರಾಟವನ್ನು ಮುಂದುವರೆಸಿದರು.

ಒಂದು ಹಂತದಲ್ಲಿ ನೋವಿನ ಕಾರಣ ರನ್ ಓಡುವುದನ್ನೂ ನಿಲ್ಲಿಸಿದ ಮ್ಯಾಕ್ಸ್​ವೆಲ್ ಸಿಕ್ಸ್​-ಫೋರ್​ಗಳ ಮೂಲಕವೇ ರನ್​ಗಳಿಸುತ್ತಾ ಸಾಗಿದರು. ಇತ್ತ ಮ್ಯಾಕ್ಸಿಯ ದಿಟ್ಟ ಹೋರಾಟದಿಂದ ಅಫ್ಘಾನ್ ಬೌಲರ್​ಗಳು ಲಯ ತಪ್ಪಿದರು. ಇದರ ಸಂಪೂರ್ಣ ಲಾಭ ಪಡೆದ ಮ್ಯಾಕ್ಸ್​ವೆಲ್ ಸಿಡಿಲಬ್ಬರದ ಬ್ಯಾಟಿಂಗ್ ಮುಂದುವರೆಸಿದರು. ಪರಿಣಾಮ ಕೊನೆಯ 5 ಓವರ್​ಗಳಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಗೆಲ್ಲಲು ಕೇವಲ 25 ರನ್​ಗಳ ಅಗತ್ಯವಿತ್ತು.

8ನೇ ವಿಕೆಟ್‌ಗೆ ಮ್ಯಾಕ್ಸ್‌ವೆಲ್‌ ಹಾಗೂ ನಾಯಕ ಪ್ಯಾಟ್‌ ಕಮ್ಮಿನ್ಸ್‌ 194 ರನ್‌ಗಳ ಅದ್ಭುತ ಜೊತೆಯಾಟವಾಡಿದರು. ಇದರಲ್ಲಿ ಕಮ್ಮಿನ್ಸ್‌ ಪಾಲು ಬರೀ 12 ರನ್‌ ಆಗಿದ್ದವು. ಇದಕ್ಕಾಗಿ 68 ಎಸೆತ ಎದುರಿಸಿದ ಕಮ್ಮಿನ್ಸ್‌, ಅತ್ಯಂತ ಎಚ್ಚರಿಕೆಯಿಂದ ಸ್ಟ್ರೈಕ್‌ಅನ್ನು ಮ್ಯಾಕ್ಸ್‌ವೆಲ್‌ಗೆ ಬಿಟ್ಟುಕೊಡುತ್ತಾ ತಂಡದ ಗೆಲುವಿಗೆ ಶ್ರಮಿಸಿದರು. ಗ್ಲೆನ್‌ ಮ್ಯಾಕ್ಸ್‌ವೆಲ್‌ ಬಾರಿಸಿರುವ 201 ರನ್‌, ಏಕದಿನ ಕ್ರಿಕೆಟ್‌ನಲ್ಲಿ 6ನೇ ಕ್ರಮಾಂಕದಲ್ಲಿ ಬ್ಯಾಟ್ಸ್‌ಮನ್‌ ಒಬ್ಬರ ಗರಿಷ್ಠ ಸ್ಕೋರ್‌ ಎನಿಸಿದೆ. 

ಗ್ಲೆನ್‌ ಮ್ಯಾಕ್ಸ್‌ವೆಲ್‌ ಬಾರಿಸಿದ ಅಜೇಯ 201 ರನ್‌, ವಿಶ್ವಕಪ್‌ ಟೂರ್ನಿಯಲ್ಲಿ ಬ್ಯಾಟ್ಸ್‌ಮನ್‌ನ ಮೂರನೇ ಗರಿಷ್ಠ ಮೊತ್ತ ಎನಿಸಿದೆ. 2015ರಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧ ನ್ಯೂಜಿಲೆಂಡ್‌ನ ಮಾರ್ಟಿನ್‌ ಗುಪ್ಟಿಲ್‌ ಬಾರಿಸಿದ ಅಜೇಯ 237 ರನ್‌ ಮೊದಲ ಸ್ಥಾನದಲ್ಲಿದ್ದರೆ, 2015ರಲ್ಲಿ ಜಿಂಬಾಬ್ವೆ ವಿರುದ್ಧ ವೆಸ್ಟ್‌ ಇಂಡೀಸ್‌ನ ಕ್ರಿಸ್‌ ಗೇಲ್‌ ಬಾರಿಸಿದ 215 ರನ್‌ ನಂತರದ ಸ್ಥಾನದಲ್ಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ