ಗುರುವಾರ, ಮಾರ್ಚ್ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Glenn Maxwell: ಶೀಘ್ರದಲ್ಲೇ ತಂದೆಯಾಗಲಿರುವ ಗ್ಲೆನ್ ಮ್ಯಾಕ್ಸ್‌ವೆಲ್, ಪತ್ನಿಗೆ ಹಿಂದೂ ಸಂಪ್ರದಾಯದಂತೆ ಸೀಮಂತ

Twitter
Facebook
LinkedIn
WhatsApp
Glenn Maxwell: ಶೀಘ್ರದಲ್ಲೇ ತಂದೆಯಾಗಲಿರುವ ಗ್ಲೆನ್ ಮ್ಯಾಕ್ಸ್‌ವೆಲ್, ಪತ್ನಿಗೆ ಹಿಂದೂ ಸಂಪ್ರದಾಯದಂತೆ ಸೀಮಂತ

Glenn Maxwell: ಆರ್‌ಸಿಬಿ ತಂಡದ ಸ್ಫೋಟಕ ಆಟಗಾರ ಆಸ್ಟ್ರೇಲಿಯಾದ ಗ್ಲೆನ್‌ ಮ್ಯಾಕ್ಸ್‌ವೆಲ್‌ ಭಾರತೀಯ ಮೂಲದ ವಿನಿ ರಾಮನ್‌ ಅವರನ್ನು ಮದುವೆಯಾಗಿದ್ದಾರೆ. ಈ ವರ್ಷದ ಸೆಪ್ಟೆಂಬರ್‌ನಲ್ಲಿ ದಂಪತಿಗಳು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. 

ಆಸೀಸ್‌ ಕ್ರಿಕೆಟಿಗ ಗ್ಲೆನ್‌ ಮ್ಯಾಕ್ಸ್‌ವೆಲ್‌ ಅವರ ಪತ್ನಿ ವಿನಿ ರಾಮನ್‌ ಶೀಘ್ರದಲ್ಲಿಯೇ ಮೊದಲ ಮಗುವಿಗೆ ಜನ್ಮ ನೀಡಲಿದ್ದಾರೆ. ಇತ್ತೀಚೆಗೆ ಗ್ಲೆನ್‌ ಮ್ಯಾಕ್ಸ್‌ವೆಲ್ ಭಾರತೀಯ ಸಂಪ್ರದಾಯದಂತೆ ಪತ್ನಿಯ ಸೀಮಂತ ಮಾಡಿಸಿದ್ದಾರೆ.

ಆಸ್ಟ್ರೇಲಿಯಾ ಕ್ರಿಕೆಟಿಗ ಗ್ಲೆನ್ ಮ್ಯಾಕ್ಸ್‌ವೆಲ್ (Glenn Maxwell) ಶೀಘ್ರದಲ್ಲೇ ತಂದೆಯಾಗಲಿದ್ದಾರೆ. ಈ ಶುಭ ಸುದ್ದಿಯನ್ನು ಅವರ ಪತ್ನಿ ವಿನಿ ರಾಮನ್ (Vini Raman) ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಮಾರ್ಚ್ 27, 2022 ರಲ್ಲಿ ಬಹು ಕಾಲದ ಗೆಳತಿ ವಿನಿ ರಾಮನ್ ಜೊತೆ ಗ್ಲೆನ್ ಮ್ಯಾಕ್ಸ್​ವೆಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಸೀಮಂತ ಕಾರ್ಯಕ್ರಮದ ಫೋಟೋಗಳನ್ನು ಹಂಚಿಕೊಂಡಿರುವ ವಿನಿ ರಾಮನ್, ಕುಟುಂಬಕ್ಕೆ ಹೊಸ ಅತಿಥಿ ಆಗಮಿಸುವ ಸಿಹಿ ಸುದ್ದಿ ನೀಡಿದ್ದಾರೆ.

ಅಲ್ಲದೆ ತಮಿಳುನಾಡಿನ ಹಿಂದೂ ಸಂಪ್ರದಾಯದಂತೆ ವಲೈಕಾಪ್ಪು (ಬೇಬಿ ಶವರ್) ನೆರವೇರಿಸಲಾಗಿದ್ದು, ಈ ಸಮಾರಂಭದ ಫೋಟೋಗಳನ್ನು ವಿನಿ ರಾಮನ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಮೂಲಕ ಬೇಬಿ ಮ್ಯಾಕ್ಸ್​ವೆಲ್​ರನ್ನು ಸಾಂಪ್ರದಾಯಿಕ ರೀತಿಯಲ್ಲಿ ಆಶೀರ್ವದಿಸಿದ್ದೇವೆ ಎಂದು ಬರೆದುಕೊಂಡಿದ್ದಾರೆ.

ಇನ್ನು ಈ ಫೋಟೋದಲ್ಲಿ ವಿನಿ ರಾಮನ್ ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಪತ್ನಿಗೆ ವಿಶೇಷ ಉಡುಗೊರೆ ನೀಡುವ ಮೂಲಕ ಗ್ಲೆನ್ ಮ್ಯಾಕ್ಸ್​ವೆಲ್ ಕೂಡ ಫೋಟೋಗೆ ಪೋಸ್ ನೀಡಿದ್ದಾರೆ.

ಸೆಪ್ಟೆಂಬರ್​ನಲ್ಲಿ ನಾವು ತಂದೆ-ತಾಯಿಯಾಗುತ್ತಿರುವುದನ್ನು ಘೋಷಿಸಲು ನಾನು ಭಾವಪರವಶನಾಗಿದ್ದೇನೆ ಎಂದು ಪತ್ನಿಗೆ ಗ್ಲೆನ್ ಮ್ಯಾಕ್ಸ್​ವೆಲ್ ಬರೆದಿರುವ ವಿಶೇಷ ಪತ್ರವನ್ನು ಕೂಡ ವಿನಿ ರಾಮನ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಸದ್ಯ ಆಸ್ಟ್ರೇಲಿಯಾ ಟೆಸ್ಟ್ ತಂಡದಿಂದ ಹೊರಗುಳಿದಿರುವ ಗ್ಲೆನ್ ಮ್ಯಾಕ್ಸ್​ವೆಲ್ ಆಗಸ್ಟ್​ನಲ್ಲಿ ನಡೆಯಲಿರುವ ಸೌತ್ ಆಫ್ರಿಕಾ ವಿರುದ್ಧದ ಸರಣಿಯ ಮೂಲಕ ತಂಡಕ್ಕೆ ಕಂಬ್ಯಾಕ್ ಮಾಡಲಿದ್ದಾರೆ. ಈ ಸರಣಿಯಲ್ಲಿ ಆಸ್ಟ್ರೇಲಿಯಾ 3 ಟಿ20 ಪಂದ್ಯಗಳು ಹಾಗೂ 5 ಏಕದಿನ ಪಂದ್ಯಗಳನ್ನಾಡಲಿದೆ. ಇದಾದ ಬಳಿಕ ಭಾರತದ ವಿರುದ್ಧ ನಡೆಯಲಿರುವ ಐದು ಪಂದ್ಯಗಳ ಏಕದಿನ ಸರಣಿಯಲ್ಲೂ ಗ್ಲೆನ್ ಮ್ಯಾಕ್ಸ್​ವೆಲ್ ಕಾಣಿಸಿಕೊಳ್ಳುವುದು ಖಚಿತ ಎನ್ನಬಹುದು.

ತಮ್ಮ ಖಾಸಗಿ ಜೀವನವನ್ನು ಹೆಚ್ಚಾಗಿ ಹಂಚಿಕೊಳ್ಳಲು ಗ್ಲೆನ್‌ ಮ್ಯಾಕ್ಸ್‌ವೆಲ್‌ ಹಾಗೂ ವಿನಿ ರಾಮನ್‌ ಇಬ್ಬರೂ ಬಯಸೋದಿಲ್ಲ. ಆದರೆ, ಮೇ ತಿಂಗಳಲ್ಲಿ ಪತ್ನಿ ಗರ್ಭಿಣಿಯಾಗಿರುವ ಕುರಿತು ಮ್ಯಾಕ್ಸ್‌ವೆಲ್‌ ಮಾಹಿತಿ ನೀಡಿದ್ದರು. ಕರ್ನಾಟಕದಲ್ಲಿ ಸೀಮಂತ ಸಮಾರಂಭ ಎಂದರೆ, ತಮಿಳುನಾಡಿನಲ್ಲಿ ಇದಕ್ಕೆ  ವಾಲೈಕಾಪ್ಪು ಕಾರ್ಯಕ್ರಮ ಎನ್ನುತ್ತಾರೆ. ಗರ್ಭಿಣಿ ಮಹಿಳೆಗೆ ಸುಖಪ್ರಸವವಾಗಲಿ ಎಂದು ಇತರರು ಹಾರೈಸುವುದರೊಂದಿಗೆ ಹಿರಿಯ ಮಹಿಳೆಯರಿಂದ ಗರ್ಭಿಣಿ ಆಶೀರ್ವಾದವನ್ನೂ ಪಡೆಯುತ್ತಾಳೆ.

ಸಾಂಪ್ರದಾಯಿಕವಾಗಿ ಸೀರೆ ಉಟ್ಟಿರುವ ವಿನಿ ರಾಮನ್‌, ಪತಿ ಮ್ಯಾಕ್ಸ್‌ವೆಲ್‌ ಅವರ ಹಗಲಿಗೆ ಒರಗಿಕೊಂಡು ತೆಗೆದಿರುವ ಸೆಲ್ಫಿ ಚಿತ್ರ ಕೂಡ ಸೋಶಿಯಲ್ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಕಾರ್ಯಕ್ರಮದಲ್ಲಿ ತಾವು ಧರಿಸಿರುವ ಬಳೆಗಳು, ಹಿರಿಯ ಮಹಿಳೆಯರು ಅಶೀರ್ವಾದ ಮಾಡುತ್ತಿರುವ ಚಿತ್ರಗಳನ್ನೂ ಕೂಡ ವಿನಿ ರಾಮನ್‌ ಹಂಚಿಕೊಂಡಿದ್ದಾರೆ.

ಆರ್‌ಸಿಬಿ ಪ್ಲೇಯರ್‌ ಆಗಿರುವ ಕಾರಣಕ್ಕೆ ಗ್ಲೆನ್‌ ಮ್ಯಾಕ್ಸ್‌ವೆಲ್‌ ಹಾಗೂ ವಿನಿ ರಾಮನ್‌ ಜೋಡಿಗೆ ಬೆಂಗಳೂರಿನಲ್ಲಿಯೂ ಅಪಾರ ಅಭಿಮಾನಿಗಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist