ಗುರುವಾರ, ಮೇ 9, 2024
SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?-ಐಪಿಎಲ್ ನಲ್ಲಿ ಮಿಂಚುತ್ತಿದೆ ಹೆಡ್ ಮತ್ತು ಅಭಿಷೇಕ್ ಜೋಡಿ ; 58 ಎಸೆತಗಳಲ್ಲಿ 167 ರನ್ ಸಿಡಿಸಿ ಜಯಗಳಿಸಿದರ ಹೈದರಾಬಾದ್.!-ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Gobi Manchurian: ರಾಜ್ಯದಲ್ಲಿ ಕಾಟನ್ ಕ್ಯಾಂಡಿ ಜೊತೆ ಗೋಬಿ ಮಂಚೂರಿಯು ಆಗುತ್ತಾ ಬ್ಯಾನ್?

Twitter
Facebook
LinkedIn
WhatsApp
Gobi Manchurian: ರಾಜ್ಯದಲ್ಲಿ ಕಾಟನ್ ಕ್ಯಾಂಡಿ ಜೊತೆ ಗೋಬಿ ಮಂಚೂರಿಯು ಆಗುತ್ತಾ ಬ್ಯಾನ್?

ಬೆಂಗಳೂರು: ಕಾಟನ್ ಕ್ಯಾಂಡಿ (Cotton Candy) ಹಾಗೂ ಗೋಬಿ ಮಂಚೂರಿಯಲ್ಲಿ (Gobi Manchuri) ಕೆಲವು ಹಾನಿಕಾರಕ ಅಂಶಗಳು ಪತ್ತೆಯಾದ ಹಿನ್ನೆಲೆ ಗೋವಾ, ತಮಿಳುನಾಡು ಈ ಆಹಾರಗಳನ್ನು ಬ್ಯಾನ್ ಮಾಡಿದೆ. ಈ ಹಿನ್ನೆಲೆ ಕರ್ನಾಟಕದಲ್ಲೂ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿ ಕಲರ್ ಜೆಲ್ಲಿಗಳನ್ನು ಸ್ಯಾಂಪಲ್ ಟೆಸ್ಟ್‌ಗೆ ಒಳಪಡಿಸಿಲಾಗಿತ್ತು. ಇದೀಗ ಕಾಟನ್ ಕ್ಯಾಂಡಿ ಜೆಲ್ಲಿ ಹಾಗೂ ಗೋಬಿ ಮಂಚೂರಿಯ ಟೆಸ್ಟಿಂಗ್ ರಿಪೋರ್ಟ್ ಆರೋಗ್ಯ ಇಲಾಖೆ (Health Department) ಕೈ ಸೇರಿದೆ.

ಆಹಾರ ಮತ್ತು ಸುರಕ್ಷತಾ ಇಲಾಖೆಯಿಂದ ರಿಪೋರ್ಟ್ ಆಧರಿಸಿ ನಿರ್ಧಾರ ಕೈಗೊಳ್ಳಲಿದ್ದು, ಸೋಮವಾರ (ಮಾ.11) ಆರೋಗ್ಯ ಸಚಿವರು ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸ್ಯಾಂಪಲ್‌ನಲ್ಲಿ ಹಾನಿಕಾರಕ ಅಂಶ ಪತ್ತೆಯಾಗಿದೆ. ಕಾಟನ್ ಕ್ಯಾಂಡಿಯಲ್ಲಿ ಹಾನಿಕಾರಕ ಅಂಶ ಇರುವುದು ಪತ್ತೆಯಾಗಿದ್ದು, ಗೋಬಿ ಮಂಚೂರಿಯಲ್ಲಿ Sunset Yellow ಮತ್ತು Tartrazine ಅಂಶ ಇರುವುದು ಪತ್ತೆಯಾಗಿದೆ. ರಾಸಾಯನಿಕ ಕಲಬೆರಕೆ ಇರುವುದರಿಂದ ಕಾಟನ್ ಕ್ಯಾಂಡಿ ಬ್ಯಾನ್ ಮಾಡುವ ಸಾಧ್ಯತೆ ಹೆಚ್ಚಿದೆ

ರೊಡಮೈನ್ ಬಿ ಸೇವನೆಯಿಂದ ಆರೋಗ್ಯದ ಮೇಲೆ ಪರಿಣಾಮ ಏನು?
ರೊಡಮೈನ್ ಬಿ ಸೇವನೆಯಿಂದ ಕ್ಯಾನ್ಸರ್ ಬರುವ ಸಾಧ್ಯತೆಗಳಿದ್ದು, ಕಣ್ಣು ದೃಷ್ಟಿ ಸಮಸ್ಯೆ ಹಾಗೂ ಲಿವರ್ ಸಂಬಂಧಿ ಸಮಸ್ಯೆ ಎದುರಾಗುವ ಸಾಧ್ಯತೆಗಳಿವೆ. ಗೋಬಿಯಲ್ಲಿ ಕ್ಯಾನ್ಸರ್ ಮತ್ತು ಹೃದಯ ಸಂಬಂಧಿ ಖಾಯಿಲೆ ಬರುವ ಸಾಧ್ಯತೆಗಳು ಹೆಚ್ಚಿವೆ.ತಮಿಳುನಾಡಿನ ಸರ್ಕಾರಿ ಪ್ರಯೋಗಾಲಯದಲ್ಲಿ ನಡೆಸಲಾದ ಪರೀಕ್ಷೆಗಳಲ್ಲಿ ಬಾಂಬೆ ಮಿಠಾಯಿಯಲ್ಲಿ ರೊಡಮೈನ್-ಬಿ ಅಂಶ ಇರುವುದು ದೃಢಪಟ್ಟಿದೆ. ಹೀಗಾಗಿ ಅಲ್ಲಿ ಬ್ಯಾನ್ ಆಗಿತ್ತು. ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಕ್ಯಾನ್ಸರ್ ರೋಗ ಬರುವ ಸಾಧ್ಯತೆ ಇದೆ ಎಂಬ ಅಂಶ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಆದ್ದರಿಂದ ರಾಜ್ಯದಲ್ಲೂ ಬಾಂಬೆ ಮಿಠಾಯಿಯ ಮಾದರಿಗಳನ್ನು ತೆಗೆದುಕೊಳ್ಳಲಾಗಿತ್ತು.ಗೋಬಿ ಮಂಚೂರಿಗೆ ಬಳಕೆ ಮಾಡುವ ಕೆಲವೊಂದು ಕಲರ್‌ಗಳನ್ನು ಬ್ಯಾನ್ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. ಅಲ್ಲದೇ ಗೋಬಿ ಮಂಚೂರಿಗೆ ಬಳಕೆ ಮಾಡುವ ಮೂರು ಬಗೆಯ ಕಲರ್‌ಗಳನ್ನು ಬ್ಯಾನ್ ಮಾಡುವ ಸಾಧ್ಯತೆ ಇದೆ. Sunset Yellow ಕಲರ್, Tartrazine, ಸಿಂಥೆಟಿಕ್ ಕಲರ್ ಸಾಸ್‌ಗಳನ್ನು ಬ್ಯಾನ್ ಮಾಡುವ ಸಾಧ್ಯತೆ ಇದ್ದು, ಕಲರ್‌ಗಳನ್ನ ಬಳಕೆ ಮಾಡದೇ ಗೋಬಿಮಂಚೂರಿಗೆ ಮಾರಾಟಕ್ಕೆ ಅವಕಾಶ ಕೊಡಬಹುದು. ಕಾಟನ್ ಕ್ಯಾಂಡಿ ಸಂಪೂರ್ಣ ಬ್ಯಾನ್‌ಗೆ ನಿರ್ಧರಿಸುವ ಸಾಧ್ಯತೆ ಹೆಚ್ಚಾಗಿದ್ದು, ಸೋಮವಾರ ಮಹತ್ವದ ಸುದ್ದಿಗೋಷ್ಠಿಯಲ್ಲಿ ಆರೋಗ್ಯ ಸಚಿವರು ಈ ಬಗ್ಗೆ ಘೋಷಣೆ ಮಾಡೋ ಸಾಧ್ಯತೆಯಿದೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ