ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ದೇವರ ದರ್ಶನ ಮುಗಿಸಿ ಬರುತ್ತಿದ್ದಾಗ ಭೀಕರ ರಸ್ತೆ ಅಪಘಾತ – 6 ಸಾವು, 10 ಜನರಿಗೆ ಗಂಭೀರ ಗಾಯ

Twitter
Facebook
LinkedIn
WhatsApp
330918082 720755586396158 8288472761162309431 n

ಕಲಬುರಗಿ: ದೇವರ ದರ್ಶನಕ್ಕೆಂದು ಹೋಗಿ ಮರಳಿ ಊರಿಗೆ ಬರುವಾಗ ಸಿಮೆಂಟ್ ಟ್ಯಾಂಕರ್ ಹಾಗೂ ಕ್ರೂಸರ್ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಅಪಘಾತದಲ್ಲಿ (Accident) ಐವರು ಮಹಿಳೆಯರು ಹಾಗೂ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ಕಲಬುರಗಿ (Kalaburagi) ಜಿಲ್ಲೆಯಲ್ಲಿ ನಡೆದಿದೆ.

ಶುಕ್ರವಾರ ಸಂಜೆ ಅಕ್ಕಲಕೋಟ ತಾಲೂಕಿನ ಶಿರವಾಳ ವಾಡಿ ಹತ್ತಿರದ ಭೀಕರ ಅಫಘಾತ ನಡೆದಿದೆ. 6 ಜನರ ಮೃತಪಟ್ಟಿದ್ದರೆ, 10 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಲಲಿತಾಬಾಯಿ ಮಹಾದೇವ ಬುಗ್ಗೆ (50), ರೋಹಿಣಿ ಗೋಪಾಲ ಪೂಜಾರಿ (40), ಸುಂದರಾಬಾಯಿ ಭರತಸಿಂಗ್ ರಜಪೂತ (55), ಸಾಹಿನಾಥ್ ಗೋವಿಂದ ಪೂಜಾರಿ (10) ಸಂಗೀತ ಮದನ್ ಗಾನೆ (35) ಛಾಯಾ ಹನುಮಾನ ನವರೆ (46) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ 10 ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸೊಲ್ಲಾಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲರೂ ಆಳಂದ ತಾಲೂಕಿನ ಅಣ್ಣೂರ ಗ್ರಾಮದ ನಿವಾಸಿಗಳು ಎಂಬುದು ತಿಳಿದುಬಂದಿದೆ. 

ಗುರುವಾರ ಮಧ್ಯಾಹ್ನ ಅಣ್ಣೂರ ಗ್ರಾಮದಿಂದ ಅಫಜಲಪುರ ತಾಲೂಕಿನ ಘತ್ತರಗಿ ಭಾಗಮ್ಮ ದರ್ಶನಕ್ಕೆಂದು ಆಗಮಿಸಿ ಘತ್ತರಗಾದಲ್ಲಿ ವಾಸ್ತವ್ಯ ಹೂಡಿದ್ದರು. ಶುಕ್ರವಾರ ಬೆಳಗ್ಗೆ ಅಲ್ಲಿಂದ ಅಕ್ಕಲಕೋಟದ ಶ್ರೀ ಸ್ವಾಮಿ ಸಮರ್ಥ ಮಂದಿರಕ್ಕೆ ಬಂದು ದರ್ಶನ ಪಡೆದು ಮರಳಿ ಊರಿಗೆ ಬರುವಾಗ ಈ ದುರ್ಘಟನೆ ನಡೆದಿದೆ.

ಘಟನೆ ಸ್ಥಳದಲ್ಲಿ ಇದ್ದ ಗ್ರಾಮಸ್ಥರು ಅಂಬುಲೆನ್ಸ್‌ಗೆ ಕರೆ ಮಾಡಿ ಸೊಲ್ಲಾಪುರ ಆಸ್ಪತ್ರೆಗೆ ಕಳುಹಿಸಿದ್ದಾರೆ. ವಿಷಯ ತಿಳಿಯುತ್ತಲೇ ಅಕ್ಕಲಕೋಟ ಪೊಲೀಸರು ಸೊಲ್ಲಾಪುರ ಎಸ್‌ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist