ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Gold-Silver: ಮತ್ತಷ್ಟು ಇಳಿಕೆ ಕಂಡ ಚಿನ್ನದ ದರ ; ಹೇಗಿದೆ ನಿಮ್ಮ ನಗರಗಳಲ್ಲಿ ಇಂದಿನ ಚಿನ್ನ - ಬೆಳ್ಳಿಯ ಬೆಲೆ

Twitter
Facebook
LinkedIn
WhatsApp
Gold-Silver: ಮತ್ತಷ್ಟು ಇಳಿಕೆ ಕಂಡ ಚಿನ್ನದ ದರ

Gold-Silver: ಭಾರತ ಹಾಗೂ ಅಂತಾರಾಷ್ಟ್ರೀಯ ಚಿನಿವಾರ ಮಾರುಕಟ್ಟೆಗಳಲ್ಲಿ ಚಿನ್ನ ಮತ್ತು ಬೆಳ್ಳಿ  ಬೆಲೆಗಳು (Gold-Silver Rates) ಇಳಿಕೆಯ ಹಾದಿಗೆ ಬಂದಿವೆ. ಕತಾರ್​ನಲ್ಲಿ ತುಸು ಏರಿಕೆಯಾಗಿರುವುದು ಬಿಟ್ಟರೆ ಉಳಿದಂತೆ ಚಿನ್ನದ ಬೆಲೆಗಳು ಇಳಿಕೆಯಾಗಿವೆ. ಬೆಳ್ಳಿ ಬೆಲೆಯೂ ಭಾರತದಲ್ಲಿ ಬೆಂಗಳೂರು ಹೊರತುಪಡಿಸಿ ಉಳಿದ ಕಡೆ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,600 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 26ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,000 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 770 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,000 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 760 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,000 ರೂ
  • ಚೆನ್ನೈ: 56,350 ರೂ
  • ಮುಂಬೈ: 55,000 ರೂ
  • ದೆಹಲಿ: 55,150 ರೂ
  • ಕೋಲ್ಕತಾ: 55,000 ರೂ
  • ಕೇರಳ: 55,000 ರೂ
  • ಅಹ್ಮದಾಬಾದ್: 55,050 ರೂ
  • ಜೈಪುರ್: 55,150 ರೂ
  • ಲಕ್ನೋ: 55,150 ರೂ
  • ಭುವನೇಶ್ವರ್: 55,000 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,860 ರಿಂಗಿಟ್ (51,484 ರುಪಾಯಿ)
  • ದುಬೈ: 2200 ಡಿರಾಮ್ (49,028 ರುಪಾಯಿ)
  • ಅಮೆರಿಕ: 600 ಡಾಲರ್ (49,194 ರುಪಾಯಿ)
  • ಸಿಂಗಾಪುರ: 811 ಸಿಂಗಾಪುರ್ ಡಾಲರ್ (50,031 ರುಪಾಯಿ)
  • ಕತಾರ್: 2,270 ಕತಾರಿ ರಿಯಾಲ್ (51,037 ರೂ)
  • ಓಮನ್: 239.50 ಒಮಾನಿ ರಿಯಾಲ್ (50,913 ರುಪಾಯಿ)
  • ಕುವೇತ್: 187.50 ಕುವೇತಿ ದಿನಾರ್ (50,096 ರುಪಾಯಿ

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,600 ರೂ
  • ಚೆನ್ನೈ: 8,000 ರೂ
  • ಮುಂಬೈ: 7,700 ರೂ
  • ದೆಹಲಿ: 7,700 ರೂ
  • ಕೋಲ್ಕತಾ: 7,700 ರೂ
  • ಕೇರಳ: 8,000 ರೂ
  • ಅಹ್ಮದಾಬಾದ್: 7,700 ರೂ
  • ಜೈಪುರ್: 7,700 ರೂ
  • ಲಕ್ನೋ: 7,700 ರೂ
  • ಭುವನೇಶ್ವರ್: 8,000 ರೂ

ಗುಜರಾತ್‌ನಲ್ಲಿ ಕಾರ್ಮಿಕರಿಗೆ ಸಿಕ್ಕಿದ್ದ ಬ್ರಿಟಿಷರ ಕಾಲದ 240 ಚಿನ್ನದ ನಾಣ್ಯಗಳನ್ನು ಕದ್ದ ಮಧ್ಯಪ್ರದೇಶ ಪೊಲೀಸರು :

ಭೋಪಾಲ್: ಬೇಲಿಯೇ ಎದ್ದು ಹೊಲ ಮೇಯುವುದು ಎಂಬ ನಾಣ್ಣುಡಿಯಿದೆ. ಕಾವಲು ಕಾಯಬೇಕಾದ ಪೊಲೀಸರೇ ಕಳ್ಳರಾದರೆ ಯಾರನ್ನು ಕೇಳುವುದು? ಗುಜರಾತ್‌ನ ಪುರಾತನ ಕಾಲದ ಮನೆಯೊಂದರಲ್ಲಿ ಬ್ರಿಟಿಷರ ಕಾಲದ ಬರೋಬ್ಬರಿ 240 ಚಿನ್ನದ ನಾಣ್ಯಗಳು ಮಧ್ಯಪ್ರದೇಶದ ಬಡ ಕಾರ್ಮಿಕರ ಕೈಗೆ ಸಿಕ್ಕಿದ್ದವು. ಅವರು ಅವುಗಳನ್ನು ತಮ್ಮ ಊರಿಗೆ ಕೊಂಡೊಯ್ದಿದ್ದರು. ಆದರೀಗ ನಾಲ್ವರು ಪೊಲೀಸರು ಅವುಗಳನ್ನು ಕಳವು ಮಾಡಿದ್ದಾರೆ. ಪ್ರತಿ ನಾಣ್ಯಕ್ಕೆ ಈಗಿನ ಮಾರುಕಟ್ಟೆ ದರದಲ್ಲಿ ಸುಮಾರು 3- 4 ಲಕ್ಷ ರೂ ಮೌಲ್ಯವಿದೆ. ಅಂದಹಾಗೆ, ಈ ಪೊಲೀಸರು ನಾಣ್ಯಗಳನ್ನು ಕದ್ದ ಬಳಿಕ ನಾಪತ್ತೆಯಾಗಿದ್ದಾರೆ.

ತಮ್ಮದೇ ಇಲಾಖೆಯ ಖದೀಮರನ್ನು ಹಿಡಿಯಲು ಹಾಗೂ ತನಿಖೆ ನಡೆಸಲು ಮಧ್ಯಪ್ರದೇಶ ಪೊಲೀಸರು ವಿಶೇಷ ತನಿಖಾ ತಂಡವನ್ನು (ಎಸ್‌ಟಿಎಫ್) ರಚಿಸಿದ್ದಾರೆ.

ಗುಜರಾತ್‌ನ ನವಸಾರಿ ಜಿಲ್ಲೆಯಲ್ಲಿ ಹಳೆಯ ಕಟ್ಟಡವೊಂದನ್ನು ತೆರವುಗೊಳಿಸುವ ಕಾರ್ಯ ನಡೆದಿತ್ತು. ಆಗ ತನಗೆ ಹಾಗೂ ತನ್ನ ಕುಟುಂಬಕ್ಕೆ ಚಿನ್ನದ ನಾಣ್ಯಗಳು ಸಿಕ್ಕಿದ್ದವು ಎಂದು ಮಧ್ಯಪ್ರದೇಶದ ಅಲಿರಾಜಪುರ ಜಿಲ್ಲೆಯ ರಾಮ್ಕುಬಾಯಿ ಎಂಬಾಕೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾಳೆ. ಕಳುವಾದ ನಾಣ್ಯಗಳ ನಡುವೆ ಒಂದು ಆಕೆಯ ಬಳಿಯೇ ಉಳಿದಿತ್ತು. ಅದನ್ನು ಆಕೆ ಪೊಲೀಸ್ ಠಾಣೆಗೆ ಕೊಂಡೊಯ್ದು ತೋರಿಸಿದ್ದಾಳೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ