ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

RSS ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಭಾಗವಹಿಸಬಹುದು, ನಿಷೇಧ ತೆರವು

Twitter
Facebook
LinkedIn
WhatsApp
RSS activities pralhad joshi rss hubballi

ನವದೆಹಲಿ: ಸರ್ಕಾರಿ ನೌಕರರು ಆರ್‌ಎಸ್‌ಎಸ್‌ನಲ್ಲಿ (RSS) ತೊಡಗಿಕೊಳ್ಳುವುದಕ್ಕೆ ದಶಕಗಳ ಹಿಂದೆ ಜಾರಿಗೊಳಿಸಲಾಗಿದ್ದ ನಿಷೇಧವನ್ನು ಪ್ರಧಾನಿ ಮೋದಿ (PM Narendra Modi) ನೇತೃತ್ವದ ಕೇಂದ್ರ ಸರ್ಕಾರ ವಾಪಸ್ ಪಡೆದಿದೆ.

ಜು.9 ರಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಈ ನಿಷೇಧವನ್ನು ಹಿಂಪಡೆದಿದೆ. ಹೀಗಾಗಿ ಇನ್ನು ಮುಂದೆ ಸರ್ಕಾರಿ ನೌಕರರು ಆರ್‌ಎಸ್‌ಎಸ್ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬಹುದಾಗಿದೆ. ಸರ್ಕಾರದ ನಿರ್ಧಾರವನ್ನು ಆರ್‌ಎಸ್‌ಎಸ್ ಸ್ವಾಗತಿಸಿದೆ. ಬಿಜೆಪಿ (BJP) ಐಟಿ ಘಟಕದ ಮುಖ್ಯಸ್ಥ ಅಮಿತ್ ಮಾಳವೀಯ (Amit Malviya) ಟ್ವೀಟ್ ಮಾಡಿ, 58 ವರ್ಷಗಳ ಹಿಂದೆ ಹೊರಡಿಸಲಾಗಿದ್ದ ಅಸಾಂವಿಧಾನಿಕ ಸೂಚನೆಯನ್ನು ಮೋದಿ ಸರ್ಕಾರ ಹಿಂದಕ್ಕೆ ಪಡೆದಿದೆ ಎಂದಿದ್ದಾರೆ.

ಸಿಬ್ಬಂದಿ ಹಾಗೂ ತರಬೇತಿ ಇಲಾಖೆ ಜುಲೈ 9ರಂದು ಹೊರಡಿಸಿದೆ ಎನ್ನಲಾದ ಆದೇಶಕ್ಕೆ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ (Jairam Ramesh) ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ, ಇನ್ನು ಮುಂದೆ  ಅಧಿಕಾರಿಗಳು  ಚಡ್ಡಿಗಳಲ್ಲಿ ಬರಬಹುದು ಎಂದು ವ್ಯಂಗ್ಯವಾಡಿದ್ದಾರೆ.

ನಿಷೇಧ ತೆರವುಗೊಳಿಸಿದ್ದಕ್ಕೆ ಆರ್​ಎಸ್​ಎಸ್​ ಮೆಚ್ಚುಗೆ

ಹಲವು ದಶಕಗಳಿಂದ ಸರ್ಕಾರಿ ಉದ್ಯೋಗದಲ್ಲಿರುವವರು ಆರ್​ಎಸ್​ಎಸ್​ನಲ್ಲಿ ತೊಡಗಿಸಿಕೊಳ್ಳಬಾರದು ಎಂದು ನಿಷೇಧ ಹೇರಲಾಗಿತ್ತು. ಆ ನಿಷೇಧವನ್ನು ಮೋದಿ ಸರ್ಕಾರ ತೆರವುಗೊಳಿಸಿದೆ. ಈ ಕ್ರಮಕ್ಕೆ ಆರ್​ಎಸ್​ಎಸ್​ ಮೆಚ್ಚುಗೆ ವ್ಯಕ್ತಪಡಿಸಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್​ಎಸ್ಎಸ್) ಕಳೆದ 99 ವರ್ಷಗಳಿಂದ ರಾಷ್ಟ್ರದ ಪುನರ್ನಿರ್ಮಾಣ ಮತ್ತು ಸಮಾಜದ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದೆ.

ರಾಷ್ಟ್ರೀಯ ಭದ್ರತೆ, ಏಕತೆ-ಸಮಗ್ರತೆ ಮತ್ತು ನೈಸರ್ಗಿಕ ವಿಕೋಪಗಳ ಸಮಯದಲ್ಲಿ ಆರ್‌ಎಸ್‌ಎಸ್ ಕೊಡುಗೆಯಿಂದಾಗಿ ದೇಶದ ವಿವಿಧ ರೀತಿಯ ನಾಯಕತ್ವವು ಕಾಲಕಾಲಕ್ಕೆ ಆರ್‌ಎಸ್‌ಎಸ್ ಪಾತ್ರವನ್ನು ಶ್ಲಾಘಿಸಿದೆ ಎಂದು ಆರ್‌ಎಸ್‌ಎಸ್‌ನ ಅಖಿಲ ಭಾರತೀಯ ಪ್ರಚಾರ ಮುಖ್ಯಸ್ಥ ಸುನೀಲ್ ಅಂಬೇಕರ್ ಹೇಳಿದ್ದಾರೆ.

ಭಾರತೀಯ ಜನತಾ ಪಕ್ಷವು (ಬಿಜೆಪಿ) ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. 58 ವರ್ಷಗಳ ನಂತರ ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (ಆರ್‌ಎಸ್‌ಎಸ್) ಸೇರುವ ನಿಷೇಧವನ್ನು ಸರ್ಕಾರ ತೆಗೆದುಹಾಕಿದೆ. ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಈ ನಿರ್ಧಾರ ಪ್ರಕಟಿಸಿ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ ಸ್ವಾಗತಿಸಿದೆ.

ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಲೇವಡಿ 

ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಜುಲೈ 9ರಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ (DoPT) ಹೊರಡಿಸಿದ ಆದೇಶವನ್ನು ಜೈರಾಮ್ ರಮೇಶ್ ಹಂಚಿಕೊಂಡಿದ್ದಾರೆ. 1966ರಿಂದ ಜಾರಿಯಲ್ಲಿದ್ದ ಆರ್​ಎಸ್​ಎಸ್​ ಚಟುವಟಿಕೆಗಳಲ್ಲಿ ಸರ್ಕಾರಿ ಸಿಬ್ಬಂದಿ ಭಾಗವಹಿಸುವ ನಿಷೇಧವನ್ನು ತೆಗೆದುಹಾಕಲಾಗಿದೆ ಎಂದು ಹೇಳಿದ್ದಾರೆ.

ಆರ್​ಎಸ್​ಎಸ್​ ಸದಸ್ಯರಾದ ನಾಥೂರಾಂ ಗೋಡ್ಸೆ ಅವರು ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ ನಂತರ ಅದರ ಚಟುವಟಿಕೆಗಳ ಮೇಲಿನ ಕಳವಳದಿಂದಾಗಿ ಆರ್​ಎಸ್​ಎಸ್​ ಅನ್ನು 1948ರಲ್ಲಿ ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಯಿತು. 1948ರ ಫೆಬ್ರುವರಿಯಲ್ಲಿ ಗಾಂಧೀಜಿಯವರ ಹತ್ಯೆಯ ನಂತರ ಸರ್ದಾರ್ ಪಟೇಲ್ ಅವರು ಆರ್‌ಎಸ್‌ಎಸ್ ಅನ್ನು ನಿಷೇಧಿಸಿದ್ದರು. 

ನಂತರ ಉತ್ತಮ ನಡವಳಿಕೆಯ ಭರವಸೆಯ ಮೇರೆಗೆ ಈ ನಿಷೇಧವನ್ನು ಹಿಂಪಡೆಯಲಾಯಿತು. ಇದಾದ ನಂತರವೂ ಆರ್‌ಎಸ್‌ಎಸ್ ನಾಗಪುರದಲ್ಲಿ ತಿರಂಗಾವನ್ನು ಹಾರಿಸಲಿಲ್ಲ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ. ಬಳಿಕ, 1966ರಲ್ಲಿ ಹೊಸ ನಿಷೇಧವನ್ನು ಪರಿಚಯಿಸಲಾಯಿತು. ಆ ಆದೇಶದಲ್ಲಿ ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ಜಮಾತ್-ಎ-ಇಸ್ಲಾಮಿಯ ಸದಸ್ಯತ್ವ ಮತ್ತು ಚಟುವಟಿಕೆಗಳಲ್ಲಿ ಭಾಗವಹಿಸುವ ಬಗ್ಗೆ ಸರ್ಕಾರದ ನೀತಿಯ ಬಗ್ಗೆ ಕೆಲವು ಅನುಮಾನಗಳನ್ನು ಹುಟ್ಟುಹಾಕಲಾಗಿದೆ. ಈ ಎರಡು ಸಂಸ್ಥೆಗಳ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸುವುದು ಕೇಂದ್ರ ನಾಗರಿಕ ಸೇವೆಗಳ ನಡವಳಿಕೆಯ ನಿಯಮಗಳನ್ನು ಆಕರ್ಷಿಸುವ ರೀತಿಯದ್ದಾಗಿದೆ.

ಜೈ ರಮೇಶ್ ಆರ್​ಎಸ್​ಎಸ್​ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳುವುದನ್ನು ಖಂಡಿಸಿದ್ದಾರೆ. “ಅಧಿಕಾರಶಾಹಿಗಳು ಈಗ ಚಡ್ಡಿಗಳಲ್ಲಿ ಬರಬಹುದು ಎಂದು ನನಗೆ ಅನಿಸುತ್ತಿದೆ” ಎಂದಿರುವ ಅವರು 2016ರಲ್ಲಿ ಕಂದು ಬಣ್ಣದ ಪ್ಯಾಂಟ್‌ನಿಂದ ಬದಲಾಯಿಸಲ್ಪಟ್ಟ ಖಾಕಿ ಬಣ್ಣದ ಆರ್‌ಎಸ್‌ಎಸ್ ಚಡ್ಡಿಯ (ನಿಕ್ಕರ್) ಸಮವಸ್ತ್ರವನ್ನು ಪ್ರಸ್ತಾಪಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist