ಭಾನುವಾರ, ಅಕ್ಟೋಬರ್ 6, 2024
ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.-Hathras: ಶಾಲೆಯ ಏಳಿಗೆಗಾಗಿ ಬಾಲಕನ ಬಲಿ, ಐವರ ಬಂಧನ-ಮುಡಾ ಕೇಸ್ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಜ್ಯಪಾಲರೇ ರಾಜೀನಾಮೆ ನೀಡಬೇಕು, ನಾವು ಇನ್ನೂ ಗಟ್ಟಿಯಾಗುತ್ತಿದ್ದೇವೆ - ಸಿಎಂ ಸಿದ್ದರಾಮಯ್ಯ (CM Siddaramaiah)

Twitter
Facebook
LinkedIn
WhatsApp
dk shivakumar and CM Siddaramaiah

ನಾನು ಯಾವ ಕಾರಣಕ್ಕೆ ರಾಜೀನಾಮೆ ನೀಡಬೇಕು? ಯಾವ ಆಧಾರದ ಮೇಲೆ ನೀಡಬೇಕು? ನನ್ನ ಪ್ರಕಾರ ರಾಜ್ಯಪಾಲರೇ ರಾಜೀನಾಮೆಯನ್ನ ನೀಡಬೇಕು ಎಂದು ಆಗ್ರಹಿಸಿದರು. ಕಾಂಗ್ರೆಸ್ ಸರ್ಕಾರ ಬಡವರ ಪರ ಇದೆ ಎಂದು ನಮ್ಮನ್ನು ಟಾರ್ಗೆಟ್​ ಮಾಡುತ್ತಿದ್ದಾರೆ. ರಾಜ್ಯಪಾಲರು ಈ ರೀತಿ ಮಾಡುತ್ತಾರೆಂದು ನಮಗೆ ಮೊದಲೇ ಗೊತ್ತಿತ್ತು. ಹೀಗಾಗಿ ನಾವು ಇನ್ನೂ ಗಟ್ಟಿಯಾಗುತ್ತಿದ್ದೇವೆ. ಇದರಿಂದ ಬಿಜೆಪಿ-ಜೆಡಿಎಸ್​​ನವರು ಬಯಲಿಗೆ ಬರುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.

ಮುಡಾ ಹಗರಣದಲ್ಲಿ (muda) ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ತನಿಖೆ ನಡೆಸಲು ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ರಾಜ್ಯಪಾಲರ ಈ ನಿರ್ಧಾರ ಸಿಎಂಗೆ ದೊಡ್ಡ ಸಂಕಷ್ಟ ತಂದಿಟ್ಟಿದೆ. ಸದ್ಯ ಈ ವಿಚಾರವಾಗಿ ಸಿಎಂ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಮಾಡಿದ್ದು, ರಾಜ್ಯಪಾಲರ ನಿರ್ಣಯವನ್ನ ಸಂಪುಟ ಸಭೆ ಖಂಡಿಸಿದೆ. 

ಸಂಪುಟ ಸಭೆ ಬಳಿಕ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಜಂಟಿಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಪಾಲರ ನಿರ್ಧಾರಕ್ಕೆ ಕಾನೂನಿನ ಬಲ ಇಲ್ಲ. ಸಂವಿಧಾನದ ಪ್ರತಿನಿಧಿಗಳಾಗಿ ಅವರು ಕೆಲಸ ಮಾಡಬೇಕೇ ಹೊರತು ಬಿಜೆಪಿ ಪ್ರತಿನಿಧಿಯಾಗಿ ಕೆಲಸ ಮಾಡಬಾರದು. ನನ್ನ ಮೇಲೆ ಯಾಕೆ ರಾಜ್ಯಪಾಲರನ್ನ ಬಳಸಿಕೊಳ್ಳುತ್ತಿದ್ದಾರೆ? ರಾಜ್ಯಪಾಲರ ನಿರ್ಧಾರ ವಿರುದ್ಧ ನಾವು ಕೂಡ ಕಾನೂನು ಹೋರಾಟ ಮಾಡುತ್ತೇವೆ ಎಂದಿದ್ದಾರೆ.

ರಾಜ್ಯಪಾಲರು ಕಾನೂನು ಬಾಹಿರವಾಗಿ ಅನುಮತಿಸಿದ್ದಾರೆ. ಅವರು ಅನುಮತಿ ನೀಡಿದ್ದು ಕೂಡ ನಿಯಮದಲ್ಲಿ ಇಲ್ಲ. ಪ್ರಾಸಿಕ್ಯೂಷನ್​​ಗೆ ಅನುಮತಿ ನೀಡುವಾಗ ಕೇಂದ್ರ ಸರ್ಕಾರದ ಎಸ್​ಓಪಿ ಪಾಲಿಸಿಲ್ಲ. ನಮ್ಮ ಸರ್ಕಾರ ಬಡವರ ಪರ ಇರುವಂತಹ ಸರ್ಕಾರ. ಬಿಜೆಪಿಯವರು ಗ್ಯಾರಂಟಿಗಳ ವಿರುದ್ಧವಿದ್ದಾರೆ. ನಾವು ನುಡಿದಂತೆ ನಡೆದಿದ್ದೇವೆ, ಬಡವರ ಪರ ಕೆಲಸ ಮಾಡುತ್ತಿದ್ದೇವೆ. ನನ್ನ ರಾಜಕೀಯವಾಗಿ ತೇಜೋವಧೆ ಮಾಡಲು ಅವರ ಈ ಪ್ರಯತ್ನ ಯಶಸ್ವಿಯಾಗಲ್ಲ. ನನ್ನ ತೇಜೋವಧೆ ಮಾಡುವುದು ಬಿಜೆಪಿಯವರ ಭ್ರಮೆ. ನಮ್ಮ ಅಭೂತಪೂರ್ವ ಗೆಲುವು ಅವರಿಗೆ ಸಹಿಸಲು ಆಗುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ನಾವು ಬಡವರ ಪರ ಇದ್ದೇವೆಂದು ಟಾರ್ಗೆಟ್​ ಮಾಡುತ್ತಿದ್ದಾರೆ. ರಾಜ್ಯಪಾಲರು ಈ ರೀತಿ ಮಾಡುತ್ತಾರೆಂದು ನಮಗೆ ಗೊತ್ತಿತ್ತು. ಇದರಿಂದ ನಾವು ಇನ್ನೂ ಗಟ್ಟಿಯಾಗುತ್ತಿದ್ದೇವೆ. ಇದರಿಂದ ಬಿಜೆಪಿ-ಜೆಡಿಎಸ್​​ನವರು ಬಯಲಿಗೆ ಬರುತ್ತಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ಟಿಬಿ ಅಬ್ರಹಾಂ ದೂರು ನೀಡಿದ ಕೆಲ ಗಂಟೆಗಳಲ್ಲೇ ನನಗೆ ರಾಜ್ಯಪಾಲರ ಕಚೇರಿಯಿಂದ ಶೋಕಾಸ್ ನೋಟಿಸ್​ ನೀಡಲಾಗಿದೆ. ಲೋಕಾಯುಕ್ತದವರು ಹೆಚ್​ಡಿ ಕುಮಾರಸ್ವಾಮಿ, ಜೊಲ್ಲೆ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರ ಅನುಮತಿ ಕೋರಿದ್ದರು. ಹೆಚ್​ಡಿಕೆ ವಿರುದ್ಧ ಪ್ರಾಥಮಿಕ ತನಿಖೆಯಲ್ಲಿ ಸಾಬೀತು ಎಂದು ಮನವಿ ಮಾಡಿದ್ದರು. ಆದರೆ ಮುಡಾ ಕೇಸ್​ನಲ್ಲಿ ನನ್ನ ತನಿಖೆಯೇ ನಡೆದಿಲ್ಲ ಎಂದರು.

ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಇತರೆ ಸಚಿವರಿಗೆ ಧನ್ಯವಾದ ತಿಳಿಸುತ್ತೇನೆ. ಇಡೀ ಸಚಿವ ಸಂಪುಟ ಒಕ್ಕೊರಲಿನಿಂದ ಇದನ್ನ ಖಂಡಿಸಿದೆ. ಪಕ್ಷವೂ ಕೂಡ ಇದನ್ನ ಖಂಡಿಸಿದೆ. ಪಕ್ಷದ ಕಾರ್ಯಕರ್ತರು ಹಾಗೂ ಶಾಸಕರು ಖಂಡಿಸಿದ್ದಾರೆ. ಪಕ್ಷ ಹೈಕಮಾಂಡ್​ ಕೂಡ ನನಗೆ ಧೈರ್ಯ ತುಂಬಿದೆ. ನಿಮ್ಮ ಜೊತೆಗೆ ಇರುತ್ತೇವೆ ಎಂದು ಕರೆ ಮಾಡಿ ಹೇಳಿದ್ದಾರೆ. ಹಾಗಾಗಿ ಎಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ ಎಂದಿದ್ದಾರೆ.

ಸಿದ್ದರಾಮಯ್ಯ (Siddaramaiah) ವಿರುದ್ಧ ತನಿಖೆಗಷ್ಟೇ ರಾಜ್ಯಪಾಲರು ಅನುಮತಿ; ಮುಂದೇನು? 

ಮುಡಾ ಹಗರಣ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ ಎಂದರೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲು ಅನುಮತಿ ಎಂದರ್ಥವಲ್ಲ. ಭ್ರಷ್ಟಾಚಾರ ನಿಯಂತ್ರಣ ಕಾಯಿದೆಯಡಿ ಲೋಕಾಯುಕ್ತ ಪೊಲೀಸರಿಗೆ ಈಗ ತನಿಖೆ ನಡೆಸಲು ಮುಕ್ತ ಅವಕಾಶ ದೊರಕಿದಂತಾಗಿದೆಯಷ್ಟೇ ಎಂದು ಹಿರಿಯ ವಕೀಲ ಬಿವಿ ಆಚಾರ್ಯ ಹೇಳಿದ್ದಾರೆ.

” ಜನಪ್ರತಿನಿಧಿಗಳ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣಗಳಲ್ಲಿ ಭ್ರಷ್ಟಾಚಾರ ನಿಯಂತ್ರಣ ಕಾಯಿದೆಯಡಿ ತನಿಖೆ ಕೈಗೊಳ್ಳಬೇಕಾದರೆ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯಬೇಕಾಗುತ್ತದೆ. ಅದರಂತೆ ಮುಖ್ಯಮಂತ್ರಿಗಳಿಗೆ ರಾಜ್ಯಪಾಲರೇ ಸಕ್ಷಮ ಪ್ರಾಧಿಕಾರವೆನಿಸಿದ್ದು, ತನಿಖೆಗೆ ಅವರು ಅನುಮತಿ ನೀಡಿದ್ದಾರೆ,” ಎಂದು ಹೇಳಿದರು. 

”ನಿರ್ದಿಷ್ಟ ಪ್ರಕರಣದಲ್ಲಿ ತಟಸ್ಥ, ನಿಷ್ಟಪಕ್ಷಪಾತ ತನಿಖೆ ಅಗತ್ಯವಿದೆ ಎಂದು ರಾಜ್ಯಪಾಲರಿಗೆ ಮನವರಿಕೆಯಾಗಿರುವುದರಿಂದ ವಿಚಾರಣೆಗೆ ಅವಕಾಶ ನೀಡಿದ್ದಾರೆ. ಅದರಂತೆ ಲೋಕಾಯುಕ್ತ ಪೊಲೀಸರು ಈ ಹಿಂದೆ ಮೈಸೂರಿನಲ್ಲಿ ಸಲ್ಲಿಕೆಯಾದ ದೂರು ಇಲ್ಲವೇ ಹೊಸ ದೂರು ಸ್ವೀಕರಿಸಿ ಮುಖ್ಯಮಂತ್ರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸಬಹುದಾಗಿದೆ. ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸುವ ಮುನ್ನ ಮತ್ತೊಮ್ಮೆ ರಾಜ್ಯಪಾಲರ ಅನುಮತಿ ಪಡೆಯಬೇಕಾಗುತ್ತದೆ,” ಎಂದು ವಿವರಿಸಿದರು.

”ತಮ್ಮ ವಿರುದ್ಧ ವಿಚಾರಣೆಗೆ ರಾಜ್ಯಪಾಲರು ನೀಡಿರುವ ಅನುಮತಿಗೆ ತಡೆಯಾಜ್ಞೆ ನೀಡುವಂತೆ ಮುಖ್ಯಮಂತ್ರಿಗಳು ನ್ಯಾಯಾಲಯದಲ್ಲಿ ರಿಟ್‌ ಅರ್ಜಿ ಸಲ್ಲಿಸಬಹುದು. ಆದರೆ ಸಾಮಾನ್ಯವಾಗಿ ಭ್ರಷ್ಟಾಚಾರ ನಿಯಂತ್ರಣ ಕಾಯಿದೆಯಡಿ ದಾಖಲಾದ ಪ್ರಕರಣಗಳಲ್ಲಿ ಯಾವುದೇ ತನಿಖೆ, ವಿಚಾರಣೆ ಪ್ರಕ್ರಿಯೆಗೆ ತಡೆ ನೀಡಬಾರದು ಎಂಬ ಮಾತುಗಳಿವೆ,” ಎಂದು ಹೇಳಿದರು.

ಬಿಎಸ್‌ ಯಡಿಯೂರಪ್ಪ ಸಿಎಂ ಆಗಿದ್ದಾಗ ಡಿನೋಟಿಫಿಕೇಷನ್‌ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿತ್ತು. ಬಳಿಕ ಅಧಿಕಾರ ಕಳೆದುಕೊಂಡಿದ್ದರು.

ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕವೂ ಡಿನೋಟಿಫೈ ಪ್ರಕರಣದಲ್ಲಿ ಬಿಎಸ್‌ವೈ ಅವರಿಗೆ ಸಂಕಷ್ಟ ಎದುರಾಗಿತ್ತು. ಖಾಸಗಿ ದೂರು ಆಧರಿಸಿ ಅಂದಿನ ರಾಜ್ಯಪಾಲ ಎಚ್‌.ಆರ್‌.ಭಾರದ್ವಾಜ್‌ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು. ಬಳಿಕ ಬಿಎಸ್‌ವೈ ವಿರುದ್ಧ ಎಫ್‌ಐಆರ್‌ ದಾಖಲಿಸಿ ಬಂಧನಕ್ಕೆ ಒಳಪಡಿಸಲಾಗಿತ್ತು. ನಂತರ ಅವರು ಜಾಮೀನಿನ ಮೂಲಕ ಹೊರಬಂದು ಕಾನೂನು ಹೋರಾಟ ನಡೆಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ