ಗ್ರಾನೈಟ್ ಬಿದ್ದು ಇಬ್ಬರು ಕಾರ್ಮಿಕರ ದುರ್ಮರಣ!
ಉಡುಪಿ: ಲಾರಿಯಿಂದ ಗ್ರಾನೈಟ್ ಅನ್ ಲೋಡ್ ಮಾಡುವ ಸಂದರ್ಭದಲ್ಲಿ ಗ್ರಾನೈಟ್ ಮೈಮೇಲೆ ಬಿದ್ದು ಇಬ್ಬರು ಕಾರ್ಮಿಕರು ಮೃತ ಪಟ್ಟ ಘಟನೆ ಉಡುಪಿಯ ತೊಟ್ಟಂ ಎಂಬಲ್ಲಿ ನಡೆದಿದೆ.
ಮೃತರನ್ನು ಸುಮಾರು 30 ರಿಂದ 35 ವರ್ಷದ ಬಾಬುಲ್ಲ ಮತ್ತು ಭಾಸ್ಕರ್ ಎಂದು ಗುರುತಿಸಲಾಗಿದೆ. ಲಾರಿಯಿಂದ ಗ್ರಾನೈಟ್ ಇಳಿಸುವಾಗ ಆಕಸ್ಮಿಕವಾಗಿ ಈ ಇಬ್ಬರು ಕಾರ್ಮಿಕರ ಮೇಲೆ ಬಿದ್ದಿದೆ.
ತೀವ್ರ ಗಾಯಗೊಂಡ ಇಬ್ಬರೂ ಮೃತ ಪಟ್ಟಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಕೇರಳದಲ್ಲಿ 5ನೇ ನಿಫಾ ಪ್ರಕರಣ – ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ..!
ಕೇರಳ: ಕೇರಳದಲ್ಲಿ ನಿಫಾ ಸೋಂಕಿನಿಂದ ಇಬ್ಬರು ಮೃತಪಟ್ಟಿರುವುದು ಸೇರಿದಂತೆ ನಾಲ್ಕು ಮಂದಿಯಲ್ಲಿ ಸೋಂಕು ಪತ್ತೆಯಾದ ಬೆನ್ನಲ್ಲೇ ಬುಧವಾರ ಮತ್ತೊಂದು ನಿಫಾ ವೈರಸ್ ಸೋಂಕು ಬೆಳಕಿಗೆ ಬಂದಿದೆ. ಇದರೊಂದಿಗೆ ನಿಫಾ ವೈರಸ್ ಸೋಂಕು ತಗುಲಿದವರ ಸಂಖ್ಯೆ 5ಕ್ಕೆ ಏರಿದೆ.
ಬುಧವಾರ ಕೇರಳದಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 24 ವರ್ಷದ ವ್ಯಕ್ತಿಯೊಬ್ಬರಲ್ಲಿ ನಿಫಾ ವೈರಸ್ ಜ್ವರ ಇರುವುದು ಪತ್ತೆಯಾಗಿದೆ.
ಈ ಆರೋಗ್ಯ ಕಾರ್ಯಕರ್ತನ ರಕ್ತದ ಮಾದರಿಯನ್ನು ಪುಣೆಯ ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ವೈರಾಲಜಿಯಲ್ಲಿ ವಿಶ್ಲೇಷಣೆಗೆ ಒಳಪಡಿಸಿದಾಗ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾಹಿತಿ ನೀಡಿದ್ದಾರೆ.
ತಿರುವನಂತಪುರದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿ, ಸಾರ್ವಜನಿಕ ಸ್ಥಳಗಳಲ್ಲಿ ಜನ ಗುಂಪುಗೂಡುವುದನ್ನು ನಿಷೇಧಿಸುವಂತೆ ಕೋಝಿಕ್ಕೋಡ್ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.
ಕೋಝಿಕ್ಕೋಡ್ ಜಿಲ್ಲೆಯಲ್ಲಿ ಸೆಪ್ಟೆಂಬರ್ 24ರ ವರೆಗೆ ಎಲ್ಲ ಸಾರ್ವಜನಿಕ ಸಭೆ ಸಮಾರಂಭಗಳನ್ನು ನಿಷೇಧಿಸಿ, ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಕಂಟೈನ್ಮೆಂಟ್ ವಲಯಗಳು ಬುಧವಾರ 43ರಿಂದ 58ಕ್ಕೇರಿದೆ.
ಈ ರೋಗಿಗಳ ಸಂಪರ್ಕದಲ್ಲಿದ್ದವರನ್ನು ಪತ್ತೆ ಮಾಡುವ ಕಾರ್ಯವನ್ನು ಆರೋಗ್ಯ ಇಲಾಖೆ ಮುಂದುವರಿಸಿದ್ದು, ಒಟ್ಟು 789 ಮಂದಿಯ ಪಟ್ಟಿ ಸಿದ್ಧಪಡಿಸಿ, ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.