ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಂದಿನಿಂದ ಗೃಹಲಕ್ಷ್ಮಿ ನೋಂದಣಿಗೆ ಚಾಲನೆ - ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ವಿವರ

Twitter
Facebook
LinkedIn
WhatsApp
100801913

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಬುಧವಾರ ಚಾಲನೆ ಸಿಗಲಿದೆ. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಬುಧವಾರ ಸಂಜೆ 5 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ. ಯೋಜನೆಯ ಫಲಾನುಭವಿಗಳಿಗೆ ಮಂಜೂರಾತಿ ಆದೇಶವನ್ನು ಡಿಸಿಎಂ ಡಿ.ಕೆ. ಶಿವಕುಮಾರ್‌ ಹಂಚಿಕೆ ಮಾಡಲಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ಯೋಜನೆಯ ಲಾಂಛನ ಮತ್ತು ಪೋಸ್ಟರ್‌ ಅನಾವರಣಗೊಳಿಸಲಿದ್ದಾರೆ. ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್‌, ರಾಜೀವ್‌ ಚಂದ್ರಶೇಖರ್‌, ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಶಾಸಕ ರಿಜ್ವಾನ್‌ ಅರ್ಷದ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ನೋಂದಣಿ ಪ್ರಕ್ರಿಯೆ ಹೇಗೆ?
ಗೃಹಲಕ್ಷ್ಮಿ ನೋಂದಣಿಗೆ ಯಾರು ಪರದಾಡಬೇಕಿಲ್ಲ. ಯಜಮಾನಿಗೆ ಎಸ್‍ಎಂಎಸ್ ಮೂಲಕ ದಿನಾಂಕ, ಸಮಯ, ನೋಂದಣಿ ಸ್ಥಳದ ಮಾಹಿತಿ ಕಳುಹಿಸಲಾಗುತ್ತದೆ. ಪಡಿತರ ಚೀಟಿ ಸಂಖ್ಯೆ, ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆ ಮಾಹಿತಿ ನೀಡಬೇಕಾಗುತ್ತದೆ. ನಿಗದಿತ ದಿನ ನೋಂದಣಿ ಸಾಧ್ಯವಾಗದಿದ್ದಲ್ಲಿ ಯಾವುದೇ ದಿನ ಸಂಜೆ ನೋಂದಣಿ ಮಾಡಿಸಬಹುದು. ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಸಂಪೂರ್ಣ ಉಚಿತ

ಯಾರು ಅರ್ಹರು?

  • ಪಡಿತರ ಚೀಟಿಯಲ್ಲಿರುವ ಯಜಮಾನಿ ನೋಂದಾಯಿಸಿಕೊಳ್ಳಲು ಅರ್ಹ
  • ಫಲಾನುಭವಿ ಮಹಿಳೆ, ಅವರ ಪತಿ ಆದಾಯ ತೆರಿಗೆ ಪಾವತಿದಾರನಾಗಿರಬಾರದು
  • ಫಲಾನುಭವಿ ಮಹಿಳೆ, ಅವರ ಪತಿ ಜಿಎಸ್‍ಟಿ ತೆರಿಗೆ ಪಾವತಿದಾರನಾಗಿರಬಾರದು
  • ನೋಂದಾಯಿತ ಖಾತೆಗೆ ಪ್ರತಿ ತಿಂಗಳು ಡಿಬಿಟಿ ಮೂಲಕ 2000 ರೂ. ಜಮೆ
  • ಫಲಾನುಭವಿ ಇಚ್ಚಿಸಿದಲ್ಲಿ ಪರ್ಯಾಯ ಬ್ಯಾಂಕ್ ಖಾತೆ ನೀಡಬಹುದು
  • ಪರ್ಯಾಯ ಬ್ಯಾಂಕ್ ಖಾತೆಗೆ ಆರ್‌ಟಿಜಿಎಸ್ ಮೂಲಕ ಪ್ರತಿ ತಿಂಗಳು 2000 ರೂ.ಜಮೆ

 

ನಾಡಕಚೇರಿ, ಗ್ರಾಮ ಒನ್, ಬೆಂಗಳೂರು ಒನ್ ಸಿಬ್ಬಂದಿಗೂ ತರಬೇತಿ ನೀಡಿದ್ದು, ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ 2 ಸಾವಿರ ರೂ. ಪಡೆಯಲು, ಮನೆ ಯಜಮಾನಿಯ ಪತಿಯ ಆಧಾರ್​​ಕಾರ್ಡ್ ಕೂಡ ಬೇಕಾಗುತ್ತದೆ. ಹೌದು ಬೇರೆ ಖಾತೆಗೆ ಹಣ ಹಾಕೆನ್ನುವವರು ಪಾಸ್​​ಬುಕ್ ಜೆರಾಕ್ಸ್ ಕೊಡಬೇಕು. ಯೋಜನೆಯ ಉಚಿತ ಲಾಭ ಪಡೆದುಕೊಳ್ಳಲು ಸಹಾಯವಾಣಿ ಸಂಖ್ಯೆ. 8147500500ಕ್ಕೆ ಪಡಿತರ ಚೀಟಿ ಸಂಖ್ಯೆ SMS ಮಾಡಿ, ಕೂಡಲೇ ಇದು ಸ್ಥಳ, ಗೊತ್ತುಪಡಿಸಿದ ದಿನಾಂಕ, ಸಮಯ ಸಂದೇಶ ರವಾನಿಸುತ್ತದೆ. ಗೊಂದಲವಿದ್ದರೆ 1902 ನಂಬರ್​ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಿ ಎಂದು ಮಹಿಳಾ & ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಮಾಹಿತಿ ನೀಡಿದ್ದಾ

ಭಾಗ್ಯಜ್ಯೋತಿ, ಕುಟೀರಜ್ಯೋತಿ, ಫಲಾನುಭವಿಗಳಿಗೂ ಗೃಹಜ್ಯೋತಿ
ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಹಾಗೂ ಅಮೃತ ಜ್ಯೋತಿ ಯೋಜನೆಯ ಫಲಾನುಭವಿಗಳಿಗೂ ಗೃಹಜ್ಯೋತಿ ಯೋಜನೆಧಿಯಡಿ ಉಚಿತ ವಿದ್ಯುತ್‌ ಸೌಲಭ್ಯ ವಿಸ್ತರಿಸಿ ಸರಕಾರ ಆದೇಶ ಹೊರಡಿಸಿದೆ. ಭಾಗ್ಯಜ್ಯೋತಿ ಹಾಗೂ ಕುಟೀರ ಜ್ಯೋತಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಈವರೆಗೆ ಮಾಸಿಕ 40 ಯೂನಿಟ್‌ ಉಚಿತ ವಿದ್ಯುತ್‌ ನೀಡಲಾಗುತ್ತಿದೆ. ಈ ಯೋಜನೆಯ ಫಲಾನುಭವಿಗಳಿಗೆ ರಾಜ್ಯದ ಮಾಸಿಕ ಸರಾಸರಿ ಬಳಕೆಯಾದ ಶೇ.53 ಯೂನಿಟ್‌ ಜತೆಗೆ ಹೆಚ್ಚುವರಿಯಾಗಿ ಶೇ.10ರಷ್ಟು ವಿದ್ಯುತ್‌ಅನ್ನು ಉಚಿತವಾಗಿ ನೀಡುವ ಸಂಬಂಧ ಸೋಮವಾರ ಇಂಧನ ಇಲಾಖೆ ಆದೇಶ ಹೊರಡಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ