ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನಾಳೆಯಿಂದ ಗೃಹಲಕ್ಷ್ಮಿ ಯೋಜನೆ ಅಧಿಕೃತ ಚಾಲನೆ ; ಪ್ರತಿ ತಿಂಗಳ 6 ನೇ ತಾರೀಖುದೊಳಗೆ ಹಣ ಜಮೆ!

Twitter
Facebook
LinkedIn
WhatsApp
ನಾಳೆಯಿಂದ ಗೃಹಲಕ್ಷ್ಮಿ ಯೋಜನೆ ಅಧಿಕೃತ ಚಾಲನೆ ; ಪ್ರತಿ ತಿಂಗಳ 6 ನೇ ತಾರೀಖುದೊಳಗೆ ಹಣ ಜಮೆ!

ಬೆಂಗಳೂರು: ರಾಜ್ಯ ಸರ್ಕಾರದ  ಮಹತ್ವದ ಐದು ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ನಾಳೆ (ಆ.30) ರಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಂಸದ ರಾಹುಲ್ ಗಾಂಧಿ  ಅವರು ಚಾಲನೆ ನೀಡಲಿದ್ದಾರೆ. ಬುಧವಾರ ಮೈಸೂರಿನ ಮಹಾರಾಜ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕಾರ್ಯಮದ ಸಿದ್ದತೆಗಳು ಆರಂಭವಾಗಿವೆ. ಈ ಯೋಜನೆ ಮೂಲಕ ಕುಟುಂಬದ ಒಡತಿ ಖಾತೆಗೆ 2000 ರೂ. ನೀಡಲಾಗುತ್ತದೆ. ಯೋಜನೆ ಜಾರಿಯಾದ ನಂತರ 1.9 ಕೋಟಿ ಮಹಿಳೆಯರ ಖಾತೆಗಳಿಗೆ ಹಣ ಹಾಕಲಾಗುತ್ತದೆ ಎಂದು ಸರ್ಕಾರ ಘೋಷಿಸಿದೆ.

ಕಾರ್ಯಕ್ರಮ ತಯಾರಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮೈಸೂರಿನಲ್ಲೇ ವಾಸ್ತವ್ಯ ಹೋಡಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಈಗಾಗಲೇ ಕಾರ್ಯಕ್ರಮದ ಪೂರ್ವ ತಯಾರಿಯಲ್ಲಿ ನಿರತರಾಗಿದ್ದಾರೆ. ಇನ್ನು ರಾಜ್ಯಾದ್ಯಂತ 10,400 ಕೇಂದ್ರಗಳಲ್ಲಿ ಏಕಕಾಲದಲ್ಲಿ ಯೋಜನೆಯನ್ನು ಪ್ರಾರಂಭಿಸಲಾಗುತ್ತದೆ.

ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಕರ್ನಾಟಕ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ ಐದು ಜನಪರ ಯೋಜನೆಗಳಲ್ಲಿ ಇದು ಒಂದು. ಈ ಯೋಜನೆಯು ಪ್ರತಿ ಕುಟುಂಬದ ಒಡತಿಗೆ ತಿಂಗಳಿಗೆ 2,000 ರೂಪಾಯಿಗಳನ್ನು ವರ್ಗಾಯಿಸುವ ಗುರಿಯನ್ನು ಹೊಂದಿದೆ.

ಗೃಹಲಕ್ಷ್ಮಿ ಯೋಜನೆಗೆ ಅರ್ಹತೆ

ಕುಟಂಬದ ಒಡತಿ ಕಡ್ಡಾಯವಾಗಿ ಬಿಪಿಎಲ್​ ಅಥವಾ ಎಪಿಎಲ್​ ಕಾರ್ಡ್​​​​ ಅಥವಾ ಅಂತ್ಯೋದಯ ಕಾರ್ಡ್‌ ಹೊಂದಿರಬೇಕು. ಅಲ್ಲದೇ ಕುಟುಂಬದ ಒಡತಿ ಅಥವಾ ಆಕೆಯ ಪತಿ ಆದಾಯ ತೆರಿಗೆ ಪಾವತಿಸುತ್ತಿದ್ದರೇ ಅಥವಾ ಸರಕು ಮತ್ತು ಸೇವಾ ತೆರಿಗೆ ರಿಟರ್ನ್ಸ್ ಕ್ಲೈಮ್ ಮಾಡಿದ್ದರೇ ಅವರು ಯೋಜನೆಗೆ ಅರ್ಹರಲ್ಲ ಎಂದು ಸರ್ಕಾರ ಘೋಷಿಸಿತ್ತು

ಗೃಹಲಕ್ಷ್ಮಿಗಾಗಿ ನೋಂದಣಿ

ಜುಲೈ 19 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹಲಕ್ಷ್ಮಿ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದರು. ಜುಲೈ 20ರಿಂದ ಈವರೆಗು 1.10 ಕೋಟಿಗೂ ಹೆಚ್ಚು ಮಹಿಳೆಯರು ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ನೋಂದಾಯಿಸಿಕೊಂಡ ನಂತರ ಖಾತರಿಗಾಗಿ ನೋಂದಣಿ ದಿನಾಂಕ, ಸಮಯ ಮತ್ತು ಸ್ಥಳದ ಬಗ್ಗೆ ಅರ್ಹ ಮಹಿಳೆಗೆ ಸಂದೇಶ ಬರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ನೋಂದಣಿಗಾಗಿ ತಮ್ಮ ನಿಗದಿತ ದಿನಾಂಕ ಮತ್ತು ಸಮಯವನ್ನು ತಿಳಿಯಲು ಇಚ್ಛಿಸುವವರು 12 ಅಂಕಿಯ ಪಡಿತರ ಚೀಟಿ ಸಂಖ್ಯೆಯನ್ನು 8147500500/ 8277000555 ಸಂಖ್ಯೆಗೆ ಸಂದೇಶ ಕಳುಹಿಸಬೇಕು. ನಂತರ ಅರ್ಹ ಮಹಿಳೆಯರು ನೋಂದಣಿಯ ಸ್ಥಳ, ದಿನಾಂಕ ಮತ್ತು ಸಮಯದ ವಿವರಗಳನ್ನು ಪಡೆಯುತ್ತಾರೆ.

. ಮೂರನೇ ಹಂತದಲ್ಲಿ ಮೇ 23ರಂದು ಆಸ್ಟ್ರೇಲಿಯಾಕ್ಕೆ ತೆರಳಲಿದ್ದಾರೆ.

ಗೃಹಲಕ್ಷ್ಮಿ ನೋಂದಣಿ ಕೇಂದ್ರ

ಕರ್ನಾಟಕದಾದ್ಯಂತ 11,000 ಕೇಂದ್ರಗಳಲ್ಲಿ ನೋಂದಣಿ ಮಾಡಲಾಗುತ್ತದೆ ಎಂದು ಸಚಿವ ಹೆಬ್ಬಾಳ್ಕರ್ ಹೇಳಿದ್ದರು. ಫಲಾನುಭವಿಗಳು ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರದಲ್ಲಿ ನೋಂದಾಯಿಸಿಕೊಳ್ಳಬಹುದು. ಯೋಜನೆಗೆ ಯಾವುದೇ ಕೊನೆಯ ದಿನಾಂಕವಿಲ್ಲ. ಫಲಾನುಭವಿಗಳು ಯೋಜನೆಯನ್ನು ಪಡೆಯಲು ಯಾವುದೇ ಸಮಯದಲ್ಲಿ ನೋಂದಾಯಿಸಿಕೊಳ್ಳಬಹುದು.

ಗೃಹಲಕ್ಷ್ಮಿ ನೋಂದಣಿಗೆ ಅಗತ್ಯವಾದ ದಾಖಲೆಗಳು

  1. ಆಧಾರ್ ಕಾರ್ಡ್
  2. ಪತಿಯ ಆಧಾರ್ ಕಾರ್ಡ್
  3. ಪಡಿತರ ಚೀಟಿ, ಬಿಪಿಎಲ್, ಎಪಿಎಲ್ ಅಥವಾ ಅಂತ್ಯೋದಯ ಕಾರ್ಡ್
  4. ಫಲಾನುಭವಿಗಳು ತಮ್ಮ ಮೊಬೈಲ್ ಸಂಖ್ಯೆಯನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಿರಬೇಕು.

ಸರ್ಕಾರ ಗೃಹಲಕ್ಷ್ಮಿ ಯೋಜನೆಗೆ ಈ ವರ್ಷ 17,500 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಗೃಹಲಕ್ಷ್ಮಿ ಕಾರ್ಯಕ್ರಮಕ್ಕೆ ವಾರ್ಷಿಕ 32,000 ಕೋಟಿ ರೂ. ಅಗತ್ಯವಿದೆ. ಈ ವರ್ಷ ಒಟ್ಟು 1.28 ಕೋಟಿ ಮಹಿಳೆಯರು ಈ ಯೋಜನೆಯ ಲಾಭ ಪಡೆಯುವ ನಿರೀಕ್ಷೆಯಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist