ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಸದಲ್ಲಿ ಪತ್ತೆಯಾದ ಕೈ ಕಾಲು ರುಂಡವಿಲ್ಲದ ಮಹಿಳೆ ಶವ; ಬೆಚ್ಚಿಬಿದ್ದ ಸ್ಥಳೀಯರು

Twitter
Facebook
LinkedIn
WhatsApp
Vidhana Soudha as of 8 June 2022 2

ಬೆಂಗಳೂರು ಗ್ರಾಮಾಂತರ: ಕಸದ ನಡುವೆ ಪತ್ತೆಯಾದ ಕೈ ಕಾಲುಗಳು, ರುಂಡವಿಲ್ಲದ ನಗ್ನ ಮೃತದೇಹ. ಶೋಧನೆಯಲ್ಲಿ ತೊಡಗಿರುವ ಶ್ವಾನದಳ, ಸಾಕ್ಷ್ಯ ಸಂಗ್ರಹಿಸುತ್ತಿರುವ ವಿಧಿವಿಜ್ಞಾನ ಪ್ರಯೋಗಾಲಯ ಮತ್ತು ಬೆರಳಚ್ಚು ತಜ್ಞರ ತಂಡ. ಆತಂಕದಲ್ಲಿ ಗುಂಪುಗೂಡಿರುವ ಸ್ಥಳೀಯರು. ಈ ಎಲ್ಲಾ ದೃಶ್ಯಗಳು ಕಂಡು ಬಂದಿದ್ದು ಬೆಂಗಳೂರು ಹೊರವಲಯದ ಆನೇಕಲ್(Anekal)ತಾಲ್ಲೂಕಿನ ಬನ್ನೇರುಘಟ್ಟದ ಜನತಾ ಕಾಲೋನಿಯಲ್ಲಿ. ಇಲ್ಲಿನ ನಿವಾಸಿ 54 ವರ್ಷದ ಗೀತಮ್ಮ ಬರ್ಬರವಾಗಿ ಕೊಲೆಯಾಗಿ ಹೋದ ಒಂಟಿ ಮಹಿಳೆ. ಖಾಸಗಿ ಕಂಪನಿಯೊಂದರಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಗೀತಮ್ಮಳಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಅವರಿಗೆ‌ ಮದುವೆ ಮಾಡಿಕೊಟ್ಟು, ಪತಿ ಸಾವಿನ ಬಳಿಕ ಒಬ್ಬಂಟಿಯಾಗಿದ್ದಳು.

ಗೀತಮ್ಮ ಒಂದು ಮನೆಯಲ್ಲಿ ವಾಸವಿದ್ರೆ, ಉಳಿದ ಎರಡು ಮನೆಗಳನ್ನ ಗಾರ್ಮೆಂಟ್ಸ್​ನಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಯುವಕರಿಗೆ ಬಾಡಿಗೆಗೆ ಕೊಟ್ಟಿದ್ದಾಳೆ. ಹೇಗೋ ಜೀವನ ಸಾಗಿಸುತ್ತಿದ್ದ ಒಂಟಿ ಮಹಿಳೆ ಗೀತಮ್ಮ ಇದ್ದಕ್ಕಿದ್ದಂತೆ ಮೂರ್ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದು, ನಿನ್ನೆ(ಜೂ.1) ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಹೌದು ಕೆಟ್ಟ ವಾಸನೆ ಬರುತ್ತಿದ್ದರಿಂದ ಅಕ್ಕಪಕ್ಕದ ಮನೆಯವರು ಯಾಕೆ ಈ ಪರಿ ಕೊಳೆತ ವಾಸನೆ ಬರಿತ್ತಿದೆಯೆಂದು ಇಣುಕಿ ನೋಡಿದಾಗ ಕಾಲು, ಕೈ ಕಟ್ ಮಾಡಿರುವ ರುಂಡವಿಲ್ಲದ ದೇಹ ಪತ್ತೆಯಾಗಿದ್ದು, ಗೀತಮ್ಮಳನ್ನ ಬರ್ಬರವಾಗಿ ಕೊಲೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.

ಮೃತ ಗೀತಮ್ಮ ಬಿಹಾರ ಮೂಲದ‌ ಯುವಕರಿಗೆ ಮನೆ ಬಾಡಿಗೆಗೆ ನೀಡಿದ್ದಳು, ನಾಲ್ಕು ದಿನಗಳ ಹಿಂದೆ ವೃದ್ಧೆ ಕಾಣೆಯಾದ ದಿನದಿಂದ ಬಾಡಿಗೆ ಮನೆಯಲ್ಲಿದ್ದ ಬಿಹಾರ ಯುವಕರು ಕೂಡ ಕಾಣಿಸುತ್ತಿಲ್ಲ. ಹೀಗಾಗಿ ಅಲ್ಲದೆ ಅವರ ಮೊಬೈಲ್ ಕೂಡ ಸ್ವೀಚ್​ ಆಫ್ ಬರುತ್ತಿದೆ. ಹೀಗಾಗಿ ವೃದ್ಧೆಯ ಮನೆ ಬಾಡಿಗೆಗಿದ್ದ ಯುವಕರೇ ಕೊಲೆ ಮಾಡಿರುವ ಬಲವಾದ ಶಂಕೆ ವ್ಯಕ್ತವಾಗಿದೆ.

ಹಳೇ ದ್ವೇಷ ಇದ್ದರೂ ಸಹ ಈ ಪರಿಯಾಗಿ ಕೊಲೆ ಮಾಡಿರೋ ಪ್ರಕರಣ ಅಪರೂಪ, ವೃದ್ಧೆಯನ್ನು ಕೊಂದು, ಕೈ ಕಾಲು ರುಂಡ ಕತ್ತರಿಸಿ ಪೈಶಾಚಿಕ‌ ಕೃತ್ಯ ನಡೆಸಿದವರನ್ನು ಕೂಡಲೇ ಹಿಡಿದು ಗಲ್ಲು ಶಿಕ್ಷೆ ಕೊಡಿಸಬೇಕು ಎಂದು ಕುಟುಂಬಸ್ಥರು ಕೇಳಿಕೊಂಡಿದ್ದಾರೆ. ಸಧ್ಯ ಪ್ರಕರಣ ದಾಖಲಿಸಿಕೊಂಡಿರೋ ಬನ್ನೇರುಘಟ್ಟ ಪೊಲೀಸರು ಎರಡು ತಂಡಗಳನ್ನು ಮಾಡಿ ಹಂತಕರನ್ನ ಹಿಡಿಯೋದಕ್ಕೆ ಬಲೆ ಬಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist